ಉಡುಪಿ: ಉಡುಪಿಯ ಕೂರ್ಮ ಫೌಂಡೇಶನ್ ಆಶ್ರಯದಲ್ಲಿ ಫೆ.24ರಂದು ‘ಆಜಾದ್ ಹಿಂದ್ – ಶಿವಾಜಿಯಿಂದ ನೇತಾಜಿವರೆಗೆ’ ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನದಲ್ಲಿ ಸಂಜೆ 5 ಗಂಟೆಯಿಂದ ನಡೆಯಲಿದೆ ಎಂದು ಕೂರ್ಮ ಫೌಂಡೇಶನ್ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಕಾರ್ಕಳ ತಿಳಿಸಿದ್ದಾರೆ.
ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಜಾದ್ ಹಿಂದ್ ಕಾರ್ಯಕ್ರಮದಲ್ಲಿ ಮುಖ್ಯವಾಗಿ ಮಹಾರಾಷ್ಟ್ರದ ಪ್ರಖ್ಯಾತ ವಾಗ್ಮಿ ಸಂದೀಪ್ ಮಹಿಂದ್ ಹಾಗೂ ರಾಷ್ಟ್ರೀಯವಾದಿ ಪತ್ರಕರ್ತರಾದ ಅಜಿತ್ ಹನುಮಕ್ಕನವರ್ ಅವರು ಭಾಗವಹಿಸಲಿದ್ದಾರೆ. ಗಾಯಕ ರಜತ್ ಮಯ್ಯ ಮತ್ತು ತಂಡದಿಂದ ರಾಷ್ಟ್ರಗೀತೆಗಳು ಸ್ವರಭಾರತಿ ಹಾಗೂ ಮಂಜರಿಚಂದ್ರ ಮತ್ತು ಕಲಾವಿದರಿಂದ ನೃತ್ಯರೂಪಕಗಳು ನಮೋ ನಮೋ ಭಾರತಾಂಬೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಛತ್ರಪತಿ ಶಿವಾಜಿ ಕಂಡ ಹಿಂದವಿ ಸ್ವರಾಜ್ಯದ ಜಾಗೃತಿಗಾಗಿ ಬದುಕನ್ನೇ ಸಮರ್ಪಿಸಿದ ಕ್ರಾಂತಿಕಾರಿ ಸಂತ ಡಾ. ಸಂದೀಪ್ ಮಹಿಂದ್ ಗುರೂಜಿ, ಹಿರಿಯ ಪತ್ರಕರ್ತ ಅಜಿತ್ ಹನುಮನಕ್ಕನವರ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಆಜಾದ್ ಹಿಂದ್ ಕಾರ್ಯಕ್ರಮದ ಗೌರವಾಧ್ಯಕ್ಷ ಅಜಯ್ ಪಿ. ಶೆಟ್ಟಿ, ಕೂರ್ಮ ಫೌಂಡೇಶನ್ ಸಂಚಾಲಕ ಸೂರಜ್ ಕಿದಿಯೂರ್, ಕಾರ್ಯದರ್ಶಿ ಪ್ರವೀಣ್ ಯಕ್ಷಿಮಠ, ಕೋಶಾಧಿಕಾರಿ ಸುಜಿತ್ ಶೆಟ್ಟಿ ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…