ಉಡುಪಿ : ಖಾಸಗಿಯಾಗಿ ನಿರ್ವಹಿಸುತ್ತಿದ್ದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರ್ಕಾರದ ವಶಕ್ಕೆ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
200 ಬೆಡ್‌ಗಳ ಆಸ್ಪತ್ರೆಗೆ ಪ್ರಸ್ತುತ ಇರುವ ಎಲ್ಲ ಸಿಬ್ಬಂದಿ ಸಹಿತ 103 ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಹಾಗೂ ₹ 9.83 ವಾರ್ಷಿಕ ಅನುದಾನ ನೀಡುವ ಪ್ರಸ್ತಾವಕ್ಕೆ ಅನುಮೋದನೆ ನೀಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಉಡುಪಿ ಜನರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ರಘುಪತಿ ಭಟ್ ತಿಳಿಸಿದ್ದಾರೆ.
ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಕಟ್ಟಡದ ಶಿಲಾನ್ಯಾಸಕ್ಕೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಯನ್ನು ಸರ್ಕಾರದ ವಶಕ್ಕೆ ಪಡೆಯುವ ಬಗ್ಗೆ ಹಾಗೂ ಅತ್ಯುತ್ತಮವಾಗಿ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…