ಉಡುಪಿ : ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ” ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವವರು ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪವಾಗಿದ್ದು, ಬೇರೆಯವರ ಸಾಧನೆ ಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರುಗಳು , ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿತ ಅರ್ಜಿ ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ ಜೂ.20 ರ ಒಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ.
ಕೃಷಿ ಪಂಡಿತ ಪ್ರಶಸ್ತಿಯು ಪ್ರಥಮ ಬಹುಮಾನ ರೂ.1,25,000 ದ್ವಿತೀಯ 1,00,000 ತೃತೀಯ 75,000 ಕೃಷಿ ಪಂಡಿತ ಉದಯೋನ್ಮುಖ ಪ್ರಶಸ್ತಿ 50,000 ರೂ ಗಳನ್ನು ಒಳಗೊಂಡಿರುತ್ತದೆ ಎಂದು ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…