ಉಡುಪಿ: ಮಳೆಯಾಶ್ರಿತ ಕೃಷಿ ನೀತಿ ಅನ್ವಯ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವುದರೊಂದಿಗೆ ಬರ ಉಪಶಮನ ಗುರಿಯನ್ನು ಹೊಂದಿ ಅನುಷ್ಠಾನಗೊಂಡಿರುವ ಕೃಷಿ ಭಾಗ್ಯ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮರುಜಾರಿಗೊಳಿಸಲಾಗಿರುತ್ತದೆ. ಅದೇ ರೀತಿ ಕೃಷಿ ಭಾಗ್ಯ- ಎಸ್.ಡಿ.ಎಂ.ಎಫ್ ಯೋಜನೆಯನ್ನು ಜಿಲ್ಲೆಯ ಬರ ಪೀಡಿತ ಬ್ರಹ್ಮಾವರ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗಿರುತ್ತದೆ.ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದ0ತೆ ತಡೆಯಲು ಪಾಲಿಥೀನ್ ಹೊದಿಕೆ, ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಘಟಕಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ, ಸೂಕ್ಷö್ಮ (ತುಂತುರು/ ಹನಿ) ನೀರಾವರಿ ಘಟಕದಡಿ ಎಲ್ಲಾ ವರ್ಗದ ರೈತರಿಗೆ ಶೇ. 90 ರಷ್ಟು ಸಹಾಯಧನ ಹಾಗೂ ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ಅಳವಡಿಸಲು ಸಾಮಾನ್ಯ ವರ್ಗದ ರೈತರಿಗೆ ಶೇ. 40 ಹಾಗೂ ಪರಿಶಿಷ್ಟ ಜಾತಿ / ಪಂಗಡದ ರೈತರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು.
ರೈತರುಗಳು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಪಹಣಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…
ಮಡ್‌ಗಾಂವ್ - ಮಂಗಳೂರು 'ವಂದೇ ಭಾರತ್' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್-ಮಡ್‌ಗಾಂವ್ ನಡುವೆ ಓಡುತ್ತಿದ್ದ…
ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…