Featured

ಉಡುಪಿ:  ಕೃಷಿ ಭೂಮಿ 11- ಇ ನಕ್ಷೆ ಮೂಲಕ ವಿಂಗಡನೆಗೆ ಅವಕಾಶ ನೀಡುವಂತೆ ಕಂದಾಯ ಸಚಿವರಿಗೆ ಯಶ್ಪಾಲ್ ಸುವರ್ಣ ಮನವಿ – vishwanews24

ಉಡುಪಿ:  ಕೃಷಿ ಭೂಮಿ 11- ಇ ನಕ್ಷೆ ಮೂಲಕ ವಿಂಗಡನೆಗೆ ಅವಕಾಶ ನೀಡುವಂತೆ ಕಂದಾಯ ಸಚಿವರಿಗೆ ಯಶ್ಪಾಲ್ ಸುವರ್ಣ ಮನವಿ

ಉಡುಪಿ: ಕೃಷಿ ಭೂಮಿಯನ್ನು 11- ಇ ನಕ್ಷೆ ಮೂಲಕ ವಿಂಗಡನೆಗೆ ಅವಕಾಶ, ಮಳೆ ಹಾನಿ ಪರಿಹಾರ ಹಾಗೂ ವಸತಿ ಯೋಜನೆಯಡಿ ಮಂಜೂರಾದ ಬಾಕಿ ಅನುದಾನ ಬಿಡುಗಡೆಯ ಬಗ್ಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಉಡುಪಿ ಜಿಲ್ಲೆಯು ಭೌಗೋಳಿಕವಾಗಿ ಇತರ ಜಿಲ್ಲೆಗಳಿಗಿಂತ ವಿಭಿನ್ನವಾಗಿ ಸಣ್ಣ ಹಾಗೂ ಅತಿ ಸಣ್ಣ ಹಿಡುವಳಿದಾರರಿಂದ ಕೂಡಿದ ಭೂ ಪ್ರದೇಶವಾಗಿದ್ದು ಹಿಂದಿನಿಂದಲೂ ಕಂದಾಯ ನಿಯಮಗಳನ್ನು ರೂಪಿಸುವಾಗ ಉಡುಪಿ ಜಿಲ್ಲೆಯೂ ಸೇರಿದಂತೆ ಅವಿಭಜಿತ ದ.ಕ ಜಿಲ್ಲೆಗೆ ರಿಯಾಯಿತಿ ನೀಡಿಕೊಂಡು ಬರಲಾಗುತ್ತಿದೆ.

ಪ್ರಸ್ತುತ ಸರಕಾರದ ಆದೇಶದಂತೆ ಮನೆ ನಿರ್ಮಾಣಕ್ಕೆ ಭೂ ಪರಿವರ್ತನೆ ಪೂರ್ವದಲ್ಲಿ ಕೃಷಿ ಭೂಮಿಯನ್ನು ವಿಂಗಡಿಸಲು ಕನಿಷ್ಠ 50 ಸೆಂಟ್ಸ್ ಮಿತಿ ನಿಗದಿ ಪಡಿಸಲಾಗಿರುತ್ತದೆ. ಜಿಲ್ಲೆಯಲ್ಲಿ 50 ಸೆಂಟ್ಸ್ ಗಿಂತ ಕಡಿಮೆ ಜಾಗ ಹೊಂದಿರುವ ಸಾವಿರಾರು ರೈತರಿದ್ದು, ಹಲವು ಕಾರಣಗಳಿಗಾಗಿ 11-ಇ ನಕ್ಷೆ ಆಧಾರದಲ್ಲಿ ಜಾಗ ವಿಂಗಡನೆಯು ಅನಿವಾರ್ಯವಾಗಿರುತ್ತದೆ. ಉದಾಹರಣೆಗೆ ಕೃಷಿ ಭೂಮಿ ಹೊಂದಿರುವ ಕುಟುಂಬಗಳು ವಿವಿಧ ಉದ್ದೇಶಗಳಾದ ಕುಟುಂಬದ ಸದಸ್ಯರ ಮದುವೆ, ಮನೆ ನಿರ್ಮಾಣಕ್ಕೆ ಹಣಕಾಸು, ವೈದ್ಯಕೀಯ ವೆಚ್ಚ, ಮತ್ತಿತರ ಅನಿವಾರ್ಯ ಕಾರಣಗಳಿಗಾಗಿ, ಅಗತ್ಯ ಕನಿಷ್ಠ ಜಾಗವನ್ನು ಮಾರಾಟ ಮಾಡುವ ಪ್ರಕ್ರಿಯೆಯು ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುತ್ತದೆ.

ನಗರ ವ್ಯಾಪ್ತಿಯೂ ಸೇರಿದಂತೆ ಗ್ರಾಮೀಣ ಭಾಗದ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂರಾರು ಕುಟುಂಬಗಳು ನಿವೇಶನಕ್ಕಾಗಿ ಗ್ರಾಮ ಪಂಚಾಯತ್ಗೆ ಅರ್ಜಿ ಸಲ್ಲಿಸಿದ್ದು, ಸರಕಾರಿ ಜಾಗದ ಲಭ್ಯತೆಯಿಲ್ಲದೆ ಹಲವಾರು ವರ್ಷಗಳಿಂದ ಸ್ವಂತ ನಿವೇಶನದ ನಿರೀಕ್ಷೆಯಲ್ಲಿದ್ದಾರೆ. ಸದ್ರಿ ಆದೇಶದಿಂದ ಕಡಿಮೆ ದರದಲ್ಲಿ ಸಣ್ಣ ಜಾಗ ಖರೀದಿಸಿ ಮನೆ ನಿರ್ಮಿಸುವ ಉದ್ದೇಶ ಈಡೇರುವುದಿಲ್ಲ. ಸಣ್ಣ ನಿವೇಶನಗಳ ದರ ದುಪ್ಪಟ್ಟಾಗುವುದರೊಂದಿಗೆ ನಿರ್ಮಾಣ ಸಂಬಂಧಿತ ಕಟ್ಟಡ ಕಾರ್ಮಿಕರಿಗೆ, ಕಟ್ಟಡ ಸಾಮಾಗ್ರಿ ಪುರೈಕೆದಾರರಿಗೆ ತೊಂದರೆಯಾಗುವುದರೊಂದಿಗೆ ಪೂರಕ ವಾಣಿಜ್ಯ ಚಟುವಟಿಕೆಗಳಿಗೆ ತೀವ್ರ ಹೊಡೆತ ಬೀಳಲಿದೆ. ಆದುದರಿಂದ, ಉಡುಪಿ ಜಿಲ್ಲೆಗೆ ಮಾತ್ರ ಅನ್ವಯಿಸಿ ಆದೇಶಿಸಲಾಗಿರುವ ಸದ್ರಿ ನಿಯಮವನ್ನು ಹಿಂಪಡೆದು ಹಿಂದಿನಂತೆ 50 ಸೆಂಟ್ಸ್ ಮಿತಿಗೆ ಬದಲಾಗಿ 7.5 ಸೆಂಟ್ಸ್ ಮಿತಿಗೆ ಮರು ಆದೇಶ ಹೊರಡಿಸುವಂತೆ ಸಚಿವರಿಗೆ ಮನವಿ ಮಾಡಿದ್ದಾರೆ.

ಉಡುಪಿ ತಾಲೂಕಿನಲ್ಲಿ ನೆರೆ ಸಂತ್ರಸ್ತರ ಪುನರ್ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ರಾಜೀವ ಗಾಂಧಿ ವಸತಿ ನಿಗಮದಿಂದ ಅನುದಾನ ಮಂಜೂರಾಗಿ ವರ್ಷಗಳೇ ಕಳೆದರು, ಈವರೆಗೆ ಮಂಜೂರಾದ ಸಂಪೂರ್ಣ ಅನುದಾನ ಬಿಡುಗಡೆಯಾಗಿರುವುದಿಲ್ಲ. ಇದರಿಂದ ಮನೆ ನಿರ್ಮಾಣ ಪೂರ್ಣಗೊಳಿಸಲಾಗದೆ ಅನಾನುಕೂಲವಾಗಿರುತ್ತದೆ. ಆದುದರಿಂದ, ಉಡುಪಿ ತಾಲೂಕಿನ ನೆರೆ ಸಂತ್ರಸ್ಥರ ಪುನರ್ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ರಾಜೀವ ಗಾಂಧಿ ವಸತಿ ನಿಗಮದಿಂದ ಮಂಜೂರಾಗಿರುವ ಅನುದಾನವನ್ನು ತುರ್ತಾಗಿ ಬಿಡುಗಡೆಗೊಳಿಸಲು ಕ್ರಮ ವಹಿಸಬೇಕು.

ನಿರಂತರ ಮಳೆಯಿಂದಾಗಿ ಜಿಲ್ಲೆಯ ಹಲವು ಪ್ರದೇಶಗಳು ಜಲಾವೃತವಾಗಿದ್ದು, ರಕ್ಷಣಾ ಕಾರ್ಯ, ಪುನರ್ವಸತಿ ಕೆಲಸಗಳು ಚುರುಕಾಗಿ ನಡೆಯುತ್ತಿದೆ. ಸಮುದ್ರ ತೀರದಲ್ಲಿ ಕಡಲು ಕೊರೆತದ ಸಮಸ್ಯೆ ಹಲವೆಡೆ ಕಾಣಿಸಿಕೊಂಡಿದೆ. ಸುಂಟರಗಾಳಿ ಮತ್ತು ವಿಪರೀತ ಮಳೆಯಿಂದಾಗಿ ನೂರಾರು ಮರಗಳು ಬಿದ್ದು, ವಿದ್ಯುತ್ ಕಂಬಗಳಿಗೆ, ಮನೆಗಳಿಗೆ ಹಾನಿಯಾಗಿದ್ದು, ರಸ್ತೆ, ಮೋರಿ, ಶಾಲಾ ಕಟ್ಟಡಗಳು, ಕಾಲುಸಂಕಗಳು ಹಾಗೂ ಸೇತುವೆಗಳು ಅಪಾಯದಲ್ಲಿವೆ. ಪ್ರಾಕೃತಿಕ ವಿಕೋಪದಡಿ ಅನುದಾನ ಬಿಡುಗಡೆಯಾಗದೆ, ಗ್ರಾಮೀಣ ರಸ್ತೆಗಳ ನಿರ್ವಹಣೆಯಿಲ್ಲದೆ ಸಂಚಾರ ದುಸ್ತರವಾಗಿದೆ. ಆದುದರಿಂದ, ಸಂತ್ರಸ್ತರಿಗೆ ಪರಿಹಾರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳ ರಕ್ಷಣೆಗೆ ಹಾಗೂ ದುರಸ್ತಿಗೆ ಸಾಕಷ್ಟು ಅನುದಾನದ ಅಗತ್ಯವಿದ್ದು, ಈ ಬಗ್ಗೆ ವಿಶೇಷ ಅನುದಾನವನ್ನು ಪ್ರಾಕೃತಿಕ ವಿಕೋಪದಡಿ ಉಡುಪಿ ಜಿಲ್ಲೆಗೆ ಸರಕಾರದಿಂದ ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಮಾಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago