Featured

ಉಡುಪಿ : ಕೃಷಿ ಲಾಭದಾಯಕ ಮಾಡಲು ವಿವಿಧ ಯೋಜನೆ : ಸಚಿವೆ ಶೋಭಾ ಕರಂದ್ಲಾಜೆ -Vishwanews24

ಉಡುಪಿ : ಕೃಷಿ ಲಾಭದಾಯಕ ಮಾಡಲು ವಿವಿಧ ಯೋಜನೆ : ಸಚಿವೆ ಶೋಭಾ ಕರಂದ್ಲಾಜೆ -Vishwanews24

ಉಡುಪಿ : ಕೃಷಿ ಲಾಭದಾಯಕವಲ್ಲ ಎಂಬ ಕಾರಣದಿಂದ ಹಲವು ರೈತರು ತಮ್ಮ ಭೂಮಿಯನ್ನು ಹಡಿಲು ಬಿಡುತ್ತಿದ್ದು, ಕೃಷಿಯನ್ನು ಲಾಭದಾಯಕವನ್ನಾಗಿ ಮಾಡಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ರೈತರು ಈ ಯೋಜನೆಗಳ ಪ್ರಯೋಜನೆ ಪಡೆಯುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಇಂದು ಕಡೆಕಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಹಡಿಲು ಭೂಮಿ ಕೃಷಿ ಗದ್ದೆಗಳಲ್ಲಿನ ಕಳೆ ತೆಗೆಯುವ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದರು.

ಸಣ್ಣ ಮತ್ತು ಮಧ್ಯಮ ರೈತರು ಕೃಷಿ ಚಟುವಟಿಕೆಗಳಿಂದ ವಿಮುಖರಾದಗಂತೆ ತಡೆಯಲು ಪ್ರಧಾನಮಂತ್ರಿಗಳು, ಯಂತ್ರೋಪಕರಣ ಬಾಡಿಗೆ ಕೇಂದ್ರಗಳು, ಕೃಷಿ ಸಿಂಚಾಯಿ ಯೋಜನೆ ಮೂಲಕ ಹನಿ ನೀರಾವರಿ ಉತ್ತೇಜನ, ರಸಗೊಬ್ಬರದ ಗುಣಮಟ್ಟದ ಏರಿಕೆ, ಪರಂಪರಾಗತ ಕೃಷಿ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಿ, ಸಾವಯವ ಹಾಗೂ ನೈಸರ್ಗಿಕ ಕೃಷಿಗೆ ಆದ್ಯತೆ ನೀಡಲಾಗುತ್ತಿದೆ. ವಿದೇಶದಲ್ಲಿ ನೈಸರ್ಗಿಕವಾಗಿ ಬೆಳೆದ ಸಾವಯವ ಆಹಾರ ಪದಾರ್ಥಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ನಮ್ಮಲ್ಲಿ ಬೆಳೆದಂತಹ ಆಹಾರ-ಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರಿಂದ ರೈತರಿಗೂ ಹೆಚ್ಚಿನ ಲಾಭಪಡೆಯಬಹುದು ಎಂದರು.

ಸಣ್ಣ ಕೃಷಿಕರು, ಭೂಮಿಯ ಒಡೆತನ ಹೊಂದಿರುವoತಹ ಕೃಷಿಕರಿಗೆಲ್ಲರಿಗೂ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಪ್ರಧಾನಿಯವರು ವರ್ಷಕ್ಕೆ 6,000ರೂ.ಗಳನ್ನು ನೇರವಾಗಿ ಕೃಷಿಕರ ಖಾತೆಗೆ ಹಾಕುತ್ತಿದ್ದಾರೆ. ಇದನ್ನು ಕೃಷಿಯ ಅಭಿವೃದ್ಧಿಗೆ ಬಳಕೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೃಷಿ ಉತ್ಪಾದಕ ಸಂಘಗಳನ್ನು ಆರಂಭಿಸುವAತೆ ತಿಳಿಸಿದ ಅವರು ರೈತರ ಆದಾಯವನ್ನು ದ್ವಿಗುಣಗೊಳಿಸಲು ಕೆಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ಯೋಜನೆಗಳ ಪ್ರಯೋಜನ ಪಡೆಯುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯ ಬೆಳೆ ಸಮೀಕ್ಷೆ ಆ್ಯಪ್ ಬಳಕೆ ವಿಧಾನ ಮತ್ತು ಅದರ ಪ್ರಯೋಜನ ಕುರಿತು ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ರಘುಪತಿ ಭಟ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಸಹಾಯಕ ನಿರ್ದೇಶಕ ಮೋಹನ್ ರಾಜ್, ಕೃಷಿ ಇಲಾಖೆ ಹಾಗೂ ಬ್ರಹ್ಮಾವರ ಕೃಷಿ ಕೇಂದ್ರದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago