Featured

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಸಿ.ಎಂ.ಕುಮಾರಸ್ವಾಮಿ

ಉಡುಪಿ: ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಬೆಳಿಗ್ಗೆ ಉಡುಪಿ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಇದೇ ವೇಳೇ ಮಠದಲ್ಲಿ ಪರ್ಯಾಯ ಮಠಾಧೀಶ ಪಲಿಮಾರು ವಿದ್ಯಾಧೀಶ ತೀರ್ಥ ಸ್ವಾಮಿಗಳ ಆಶೀರ್ವಾದ ಪಡೆದರು.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರಾವಳಿಗೆ ಭೇಟಿ ನೀಡುತ್ತಿರುವ ಕುಮಾರಸ್ವಾಮಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ನಂತರ ಉಡುಪಿಗೆ ಪ್ರಯಾಣ ಬೆಳೆಸಿದ್ದರು.

ಮಠದ ಭೇಟಿಯ ನಂತರ ಕುಮಾರಸ್ವಾಮಿ ಅವರು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿದರು.

ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಡಾ.ಜಯಮಾಲ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಪ್ರಿಯಾಂಕ  ಮೇರಿ ಫ್ರಾನ್ಸಿಸ್,  ಜಿಲ್ಲಾ ಮಟ್ಟದ ಅಧಿಕಾರಿಗಳು, ವಿಧಾನ ಸಭಾ ಸದಸ್ಯರು,  ವಿಧಾನ ಪರಿಷತ್ ಸದಸ್ಯರು,  ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು..

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago