Featured

ಉಡುಪಿ: ಕೃಷ್ಣನ ನಾಡಿನಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ -Vishwanews24

ಉಡುಪಿ:ಕೃಷ್ಣನ ಊರಾದ ಉಡುಪಿಯಲ್ಲಿ ವಿಶೇಷ ಪೂಜೆಗಳ ಮೂಲಕ ವೈಭವದಿಂದ ಕೃಷ್ಣ ಜನ್ಮಾಷ್ಟಮಿ ನಡೆಸಲಾಗುತ್ತಿದೆ. ಉಡುಪಿಯ ಶ್ರೀಕೃಷ್ಣ ಜನ್ಮಾಷ್ಟಮಿಗೂ ಹುಲಿವೇಷ ಕುಣಿತಕ್ಕೂ ಅವಿನಾಭವ ಸಂಬಂಧ. ವಿಟ್ಲಪಿಂಡಿ ಉತ್ಸವದ ದಿನ ಶ್ರೀಕೃಷ್ಣ ಮಠದ ಪರಿಸರದಲ್ಲಿ ಹುಲಿವೇಷಧಾರಿಗಳ ಕುಣಿತವನ್ನು ನೋಡುವುದೇ ಕಣ್ಣಿಗೆ ಹಬ್ಬ.. ನಾಡಹಬ್ಬ ಶ್ರೀಕೃಷ್ಣ ಜನ್ಮಾಷ್ಟಮಿಗೆ ಪೊಡವಿಗೊಡೆಯನ ನಾಡು ಉಡುಪಿ ಸಜ್ಜಾಗಿದೆ.

ಕೃಷ್ಣನ ಜನ್ಮಜಯಂತಿ ಆರಾಧನೆಗೆ ರಥಬೀದಿ ಶೃಂಗಾರಗೊಂಡಿದೆ. ರಾಜ್ಯದ ವಿವಿಧ ಭಾಗಗಳಿಂದ ಉತ್ಸವಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಶ್ರೀ ಕೃಷ್ಣಮಠ ವಸತಿಗೃಹ ಸೇರಿದಂತೆ ನಗರದ ವಸತಿಗೃಹಗಳು ಭರ್ತಿಯಾಗುತ್ತಿವೆ. ತಿಂಗಳ ಹಿಂದೆಯೇ ಭಕ್ತರು ಕೊಠಡಿಗಳನ್ನು ಕಾಯ್ದಿರಿಸಿಕೊಂಡಿದ್ದರು.
23ರಂದು ಕೃಷ್ಣ ಜಯಂತಿ, 24ರಂದು ಕೃಷ್ಣ ಜನನದ ಸಂಭ್ರಮಾಚರಣೆ ಶ್ರೀಕೃಷ್ಣಲೀಲೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಕೃಷ್ಣಮಠ ರಥಬೀದಿ ಸಂಭ್ರಮಕ್ಕೆ ವೇದಿಕೆಯಾಗಿದ್ದು, ನಗರದಲ್ಲಿ ವೇಷಧಾರಿಗಳ ಕಲರವ, ಹೂ ವ್ಯಾಪಾರಿಗಳ ಚಟುವಟಿಕೆ ವೇಗ ಪಡೆದುಕೊಂಡಿದೆ.

ವಿಟ್ಲಪಿಂಡಿ ಉತ್ಸವದಲ್ಲಿ ಪ್ರಮುಖ ಆಕರ್ಷಣೆಯಾಗಿರುವ ಮೊಸರುಕುಡಿಕೆ. ಅಷ್ಟ ಮಠಗಳ ರಥಬೀದಿಯಲ್ಲಿ ಗುರ್ಜಿ ಸಿದ್ಧಗೊಂಡಿದೆ. ರಥಬೀದಿಯಲ್ಲಿ ತ್ರಿಕೋನಾಕೃತಿ ಗುರ್ಜಿಗಳನ್ನು ನಿರ್ಮಿಸಿ ಮೊಸರು ಕುಡಿಕೆಗೆ ಸಿದ್ಧತೆ ಮಾಡಲಾಗಿದೆ. ಮಠದ ಆವರಣದಲ್ಲಿ ಮಡಿಕೆಗಳಿಗೆ ಬಣ್ಣ ಬಳಿಯುವ ಕಾರ್ಯದಲ್ಲಿ ಕಲಾವಿದರು ನಿರತರಾಗಿದ್ದಾರೆ.

ಜಾಹಿರಾತು

ಪರ್ಯಾಯ ಪಲಿಮಾರು ಶ್ರೀಗಳ ನೇತೃತ್ವದಲ್ಲಿ ಆ.23ರಂದು ಬೆಳಗ್ಗೆ ಮಹಾಪೂಜೆ ನಡೆಯಲಿದೆ. ಸಹಸ್ರ ವಿಷ್ಣು ಪರಾಯಣ, ಲಕ್ಷ ತುಳಸಿ ಅರ್ಚನೆ ಶ್ರೀಕೃಷ್ಣನಿಗೆ ಸಮರ್ಪಣೆಯಾಗಲಿದೆ. ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಸಂತ ಮಂಟಪದಲ್ಲಿ ಭಜನಾ ಕಾರ್ಯಕ್ರಮ, ಬೆಳಗ್ಗೆ 12ರಿಂದ 4ರವರೆಗೆ ಓಲಗ ಮಂಟಪದಲ್ಲಿ ಪುತ್ತಿಗೆ ಚಂದ್ರಶೇಖರ್ ಬಳಗದಿಂದ ಸ್ಯಾಕ್ಸೋಫೋನ್ ವಾದನ ಜರುಗಲಿದೆ. ಮಧ್ಯರಾತ್ರಿ 12.12ಕ್ಕೆ ಶ್ರೀಕೃಷ್ಣ ದೇವರಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಆ.24ರಂದು ಬೆಳಗ್ಗೆ ಮಹಾಪೂಜೆ, ಬೆಳಗ್ಗೆ 9ರಿಂದ 12ರವರೆಗೆ ಸೂರ್ಯ ಶಾಲೆಯಲ್ಲಿ ವಿಪಂಚಿ ಬಳಗ ಮಣಿಪಾಲ ಇವರಿಂದ ಪಂಚವೀಣಾ ವಾದನ. ವಸಂತ ಮಂಟಪದಲ್ಲಿ 10 ಗಂಟೆಗೆ ಮಹಿಳಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಭಕ್ತರಿಗೆ ವಿಶೇಷ ಹಾಲು ಪಾಯಸದ ಅನ್ನಸಂತರ್ಪಣೆ ನಡೆಯಲಿದೆ. 3.30ಕ್ಕೆ ಶ್ರೀಕೃಷ್ಣನ ಮಣ್ಣಿನ ಮೂರ್ತಿಯೊಂದಿಗೆ ಬೃಹತ್ ಶ್ರೀಕೃಷ್ಣ ಲೀಲೋತ್ಸವ ಮೆರವಣಿಗೆ ವಿಟ್ಲಪಿಂಡಿ ಸಂಭ್ರಮ ನಡೆಯಲಿದೆ.

 

 

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago