ಉಡುಪಿ

ಉಡುಪಿ: ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್ : ಅಭಿಮಾನಿಗಳಿಂದ  ಇಂದು ಸಂಜೆ ತುರ್ತು ಸಭೆ – Vishwanews24

ಉಡುಪಿ: ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್ – ಅಭಿಮಾನಿಗಳಿಂದ  ಇಂದು ಸಂಜೆ ತುರ್ತು ಸಭೆ

ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಬೇಕೆಂದು ಪ್ರಬಲ ಆಕಾಂಕ್ಷಿಯಾಗಿದ್ದ ಕಿನ್ನಿಮೂಲ್ಕಿ ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಟಿಕೆಟ್ ತಪ್ಪಿದ್ದು ಅವರ ಅಭಿಮಾನಿಗಳಿಂದ ಉಡುಪಿಯ ಹೊಟೇಲ್ ಮಥುರಾದಲ್ಲಿ ಇಂದು ಸಂಜೆ ತುರ್ತು ಸಭೆ ಆಯೋಜನೆ.

ಉಡುಪಿ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ದುಡಿದು ತನ್ನದೇ ತಂಡವನ್ನು ರಚಿಸಿಕೊಂಡಿದ್ದರು. ಮಾತ್ರವಲ್ಲದೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದ ಕಿನ್ನಿಮೂಲ್ಕಿ ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಈ ಬಾರಿ ಟಿಕೆಟ್ ಸಿಗುತ್ತದೆ ಎಂದು ಅವರ ಅಭಿಮಾನಿಗಳು ನಂಬಿದ್ದರು.

ಆದರೇ ಇಂದು ಕೆಪಿಸಿಸಿ ಘೋಷಿಸಿದ ಪಟ್ಟಿಯಲ್ಲಿ ಮಹಿಳಾ ಕಾಂಗ್ರೆಸ್ ಸಾರಥ್ಯ ವಹಿಸಿದ್ದ, ಎರಡು ಬಾರಿ ಬ್ರಹ್ಮಾವರ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಪರಾಭವ ಗೊಂಡಿದ್ದ ಸರಳಾ ಕಾಂಚನ್ ಅವರ ಪುತ್ರ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಉಡುಪಿ ಕ್ಷೇತ್ರದ ಟಿಕೆಟ್ ದಕ್ಕಿಸಿಕೊಂಡಿದ್ದಾರೆ.

ಈ ನಡುವೆ ಕೃಷ್ಣಮೂರ್ತಿ ಅವರ ಅಭಿಮಾನಿಗಳು ಇಂದು ಕೃಷ್ಣ ಮಠದ ಪಾರ್ಕಿಂಗ್ ಬಳಿಯ ಮಥುರಾ ಕಂಫರ್ಟ್ ಸಭಾಂಗಣದಲ್ಲಿ ಸಭೆ ಕರೆದಿದ್ದಾರೆ.

ಈ ಸಭೆಯಲ್ಲಿ ಕೃಷ್ಣಮೂರ್ತಿ ಅವರ ಮುಂದಿನ ನಡೆಯ ಬಗ್ಗೆ ಅಭಿಮಾನಿಗಳು ನಿರ್ಧಾರಿಸಲಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

21 minutes ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

27 minutes ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

34 minutes ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

14 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

22 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

22 hours ago