ಉಡುಪಿ: ಜಿಲ್ಲೆಯಲ್ಲಿ ಬಡವರು ಮನೆಯನ್ನು ಪಿಲ್ಲರ್ ನಿಂದ ಕಟ್ಟಲು ಸಾಧ್ಯವಿಲ್ಲದಿರುವುದರಿಂದ ಕೆಂಪು ಕಲ್ಲುಗಳನ್ನು ಅವಲಂಬಿಸಿದ್ದಾರೆ. ಜಿಲ್ಲಾಡಳಿತದ ನೀತಿಯಿಂದ ಬಡವರಿಗೆ ಮನೆ ಕಟ್ಟುವ ಕನಸು ನುಚ್ಚು ನೂರಾಗಿದೆ. ಮನೆ ಕಟ್ಟುವ ಕಟ್ಟಡ ಕಾರ್ಮಿಕರಿಗೆ ಕೆಲಸವಿಲ್ಲದೇ ನಿರುದ್ಯೋಗಿದ್ದಾರೆ. ಮುಂದೆ ಮರಳು ಸಮಸ್ಯೆಯೂ ಬಿಗಡಾಯಿಸಲಿದೆ. ಇದರ ವಿರುದ್ಧ ತೀವ್ರ ಹೋರಾಟ ನಡೆಸಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದ್ದಾರೆ.
ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಆರಂಭಗೊಂಡ ಅನಿರ್ಧಿಷ್ಟಾವಧಿ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ಜಿಲ್ಲೆಯಲ್ಲಿ ಕೆಂಪು ಕಲ್ಲಿಗಾಗಿ ಜಿಲ್ಲಾಡಳಿತ ಗುರುತಿಸಿದ 147 ಸ್ಥಳಗಳಲ್ಲಿ ಗುಣಮಟ್ಟದ ಕೆಂಪು ಕಲ್ಲುಗಳು ಲಭ್ಯವಿಲ್ಲದ ಕಾರಣ ಪೂರೈಕೆ ಕಡಿಮೆಯಾಗಿ ಅವಶ್ಯಕತೆ ಜಾಸ್ತಿ ಇದೆ. ಕೆಂಪು ಕಲ್ಲಿಗೆ ದುಬಾರಿ ದರವನ್ನು ಬಡವರಿಂದ ವಸೂಲಿ ಮಾಡಲು ಜಿಲ್ಲಾಡಳಿತ ಅವಕಾಶ ಮಾಡಿದೆ. ಜಿಲ್ಲಾಡಳಿತ ಗುಣಮಟ್ಟದ ಕಲ್ಲು ಸಿಗುವ ಸ್ಥಳದಲ್ಲಿ ಕಾನೂನು ಬದ್ಧ ಪರವಾನಿಗೆ ನೀಡಿ ಕೊರತೆ ನೀಗಿಸಬೇಕು, ರಾಜಧನ ಕೇರಳ ಮಾದರಿಯಂತೆ ಕಡಿಮೆ ಮಾಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿಯವರು ಜಂಟಿ ಸಭೆ ನಡೆಸಿ ಇತ್ಯರ್ಥಪಡಿಸಬೇಕು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಒತ್ತಾಯಿಸಿದ್ದಾರೆ.
ಧರಣಿಯಲ್ಲಿ ಸಿಐಟಿಯು ಮುಖಂಡರಾದ ಎಚ್.ನರಸಿಂಹ ಚಂದ್ರಶೇಖರ ವಿ., ರಾಮ ಕಾರ್ಕಡ, ಶಶಿಧರ ಗೊಲ್ಲ, ಕವಿರಾಜ್ ಎಸ್. ಕಾಂಚನ್, ಸುಭಾಶ್ಚಂದ್ರ ನಾಯಕ್, ಚಿಕ್ಕ ಮೊಗವೀರ ಗಂಗೊಳ್ಳಿ, ರಾಜೀವ ಪಡುಕೋಣೆ, ಶ್ರೀಧರ ಉಪ್ಪುಂದ, ರಮೇಶ್ ಗುಲ್ವಾಡಿ, ನಾಗರತ್ನಾ ಪಡುವರಿ, ಜ್ಯೋತಿ, ಶಾಂತಾ ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಸಂಚಾಲಕ ಸಂಜೀವ ಬಳ್ಕೂರು ಉಪಸ್ಥಿತರಿದ್ದರು.
ರೊನಾಲ್ಡ್ ರಾಜೇಶ್ ಕ್ವಾಡ್ರಸ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಬೇಡಿಕೆಗಳು
1.ಜಿಲ್ಲೆಯಲ್ಲಿರುವ ಕೆಂಪು ಕಲ್ಲು ಅಥವ ಮುರುಕಲ್ಲು ಎಂದು ಕರೆಯಲ್ಪಡುವ ಲ್ಯಾಟರೈಟ್ ಕೋರೆಗಳಿಗೆ ಅಪಾಯವಿಲ್ಲದ ಸ್ಥಳಗಳಲ್ಲಿ ಪರವಾನಿಗೆ ನೀಡಬೇಕು
2, ಕೇರಳ ಮಾದರಿಯಲ್ಲಿ ರಾಜಧನ ಅಥವ ರಾಯಲ್ಟಿ ಪ್ರತೀ ಟನ್ ಗೆ 76 ರೂ. ಮಾತ್ರ ಪಾವತಿಸಲು ಅವಕಾಶ ನೀಡಬೇಕು. ಈಗ ಇರುವ ಬೇರೆ ಬೇರೆ ತೆರಿಗೆಗಳನ್ನು ಕೈ ಬಿಡಬೇಕು
3. ಆರು ತಿಂಗಳಿಗೊಮ್ಮೆ ಪರವಾನಿಗೆ ನವೀಕರಿಸುವುದನ್ನು ಕೈ ಬಿಟ್ಟು ವರ್ಷಕೊಮ್ಮೆ ನವೀಕರಿಸಲು ಅವಕಾಶ ನೀಡಬೇಕು. ಇದರಿಂದ ಅನಧಿಕೃತ ವ್ಯವಹಾರ ತಡೆಯಲು ಸಾಧ್ಯವಾಗುತ್ತದೆ.
4.ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ದೊರಕುವ ಕೋರೆಗಳು ಕಡಿಮೆ ಇರುವುದರಿಂದ ದಕ್ಷಿಣ ಕನ್ನಡ ಕೋರೆಗಳಿಂದ ಬರುವ ಕೆಂಪು ಕಲ್ಲುಗಳಿಗೆ ನಿರ್ಬಂಧ ಹೇರಬಾರದು.
5. ಕೆಂಪು ಕಲ್ಲು ದುಬಾರಿ ದರದಲ್ಲಿ ವಿತರಣೆ ಮಾಡುವವರ ಮೇಲೆ ಕ್ರಮ ಜರುಗಿಸಬೇಕು ಈ ಹಿಂದಿನ ದರದಂತೆ ಕಲ್ಲು ಜನರಿಗೆ ಸಿಗುವಂತಾಗಬೇಕು.
6.ಕೆಂಪು ಕಲ್ಲು ಮರಳು ಸಮಸ್ಯೆ ಬಗೆಹರಿಸಲು ಮಾನ್ಯ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಗಣಿ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರ ಜೊತೆ ಜಂಟಿ ಸಭೆ ನಡೆಸಲು ಸಮಯ ನಿಗದಿಗೊಳಿಸಬೇಕು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…