Featured

ಉಡುಪಿ : ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್’ಗಳಲ್ಲಿ ಕೊರೋನಾ ಜಾಗೃತಿ  ಸಂದೇಶ : ಡಿಸಿ ಶ್ಲಾಘನೆ – Vishwanews24

ಉಡುಪಿ : ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್’ಗಳಲ್ಲಿ ಕೊರೋನಾ ಜಾಗೃತಿ  ಸಂದೇಶ ..

2 ಡೋಸ್‌ ಕೋವಿಡ್‌ -19 ಲಸಿಕೆ ಕಡ್ಡಾಯ , ಕಡ್ಡಾಯವಾಗಿ ಮಾಸ್ಕ್‌ ಹಾಕಿಕೊಳ್ಳುವುದು ಎಂಬ ಬರಹ ..

ಸಾರಿಗೆ ಇಲಾಖೆಯ ಕಾರ್ಯ ಶ್ಲಾಘನೀಯ :  ಉಡುಪಿ ಜಿಲ್ಲಾಧಿಕಾರಿ..

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19‌ ಲಸಿಕೆಯ 1 ನೇ ಹಾಗೂ 2 ನೇ ಡೋಸ್‌ ವಿತರಣೆಯಲ್ಲಿ ಶೇ.100 ಪ್ರತಿಶತ ಪ್ರಗತಿ ಸಾಧಿಸಲು ಜಿಲ್ಲಾಡಳಿವು ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹೀಗೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅವಿರತವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ.ಎಸ್.ಆರ್.ಟಿ.ಸಿ) ಕೈ ಜೋಡಿಸಿ ಜನರಲ್ಲಿ ಕೊರೋನಾ‌ ನಿಯಮ ಪಾಲನೆ ಬಗ್ಗೆ ಜಾಗೃತಿ ಮೂಡಿಸುವ ಜವಬ್ದಾರಿಯುತ ಕಾರ್ಯ ಮಾಡುತ್ತಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಬಸ್ಸುಗಳ ಟಿಕೇಟ್‌ ಗಳಲ್ಲಿ “2 ಡೋಸ್‌ ಕೋವಿಡ್‌ -19 ಲಸಿಕೆ ಕಡ್ಡಾಯ , ಕಡ್ಡಾಯವಾಗಿ ಮಾಸ್ಕ್‌ ಹಾಕಿಕೊಳ್ಳುವುದು“ ಎಂಬ ಬರಹಗಳನ್ನು ಮುದ್ರಿಸುವ ಮುಖಾಂತರ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಲ್ಲಿ ಹಾಗೂ ಜಿಲ್ಲೆಯ ಜನರಲ್ಲಿ ಕೋವಿಡ್‌ -19 ರ ಬಗ್ಗೆ ಜಾಗರೂಕತೆಯನ್ನು ಮೂಡಿಸುವ ನಿಟ್ಟಿನಲ್ಲಿ ನವೀನ ಶೈಲಿಯ ಯೋಜನೆಯನ್ನು ಹಮ್ಮಿಕೊಂಡಿರುವ ಸಾರಿಗೆ ಇಲಾಖೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಭಿಪ್ರಾಯಪಟ್ಟಿದ್ದಾರೆ‌.

“ಇತರ ಇಲಾಖೆಗಳು/ನಿಗಮಗಳು ಸಾರ್ವಜನಿಕರಲ್ಲಿ ಕೋವಿಡ್-19‌ ರ ಬಗ್ಗೆ ಜಾಗೃತಿಯನ್ನು ಮೂಡಿಸುವಲ್ಲಿ ಕಾರ್ಯಪ್ರವೃತ್ತರಾಗುವಂತೆ ಹಾಗೂ ಮಾಲ್ ಗಳಲ್ಲಿ, ಸಿನಿಮಾ ಮಂದಿರಗಳಲ್ಲಿ ಮತ್ತು ಎಲ್ಲಾ ಅಂಗಡಿಗಳಲ್ಲಿ ಗ್ರಾಹಕರಿಗೆ ನೀಡುವ ಬಿಲ್ಲು / ಸ್ವೀಕೃತಿಗಳಲ್ಲಿ ಇದೇ ಮಾದರಿಯಲ್ಲಿ ಕೋವಿಡ್-19‌ ರ ಬಗ್ಗೆ ಜಾಗೃತಿಯನ್ನು ಮೂಡಿಸುವ ಬರಹಗಳನ್ನು ನಮೂದಿಸುವಂತೆ ಕೋರುತ್ತೇನೆ” ಎಂದು ಅವರು ಸಾಮಾಜಿಕ ‌ಜಾಲತಾಣದ ಮೂಲಕ ಜನರಲ್ಲಿ ಮನವಿ ಮಾಡಿದ್ದಾರೆ‌

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

13 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

14 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

15 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

15 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

15 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

16 hours ago