Featured

ಉಡುಪಿ : ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳ ಸಾರಿಗೆ ಮುಷ್ಕರ ಹಿನ್ನೆಲೆ, ವಿಶೇಷ ಬಸ್ಸುಗಳ ವ್ಯವಸ್ಥೆ – vishwanews24

ಉಡುಪಿ : ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳ ಸಾರಿಗೆ ಮುಷ್ಕರ ಹಿನ್ನೆಲೆ, ವಿಶೇಷ ಬಸ್ಸುಗಳ ವ್ಯವಸ್ಥೆ

ಉಡುಪಿ : ಜಿಲ್ಲೆಯಲ್ಲಿ ಇಂದಿನಿ೦ದ (ಆ.5) ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯವರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆ, ಸಾರ್ವಜನಿಕರಿಗೆ ಉಂಟಾಗುವ ಸಂಚಾರ ವ್ಯತ್ಯಯ ತಪ್ಪಿಸಲು ಮಾಡಲಾದ ವಿಶೇಷ ಬಸ್ಸುಗಳ ವ್ಯವಸ್ಥೆಗೆ ಸಂಬAಧಿಸಿದAತೆ ಮಾಹಿತಿ ನೀಡಲು ಹಾಗೂ ದೂರುಗಳನ್ನು ಸ್ವೀಕರಿಸಲು ಮಣಿಪಾಲದ ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ಕಛೇರಿಯಲ್ಲಿ ಮುಷ್ಕರ ಮುಗಿಯುವವರೆಗೆ ದಿನದ 24 ಗಂಟೆ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 0820-2575137, 9449864020 ಹಾಗೂ 7019244639 ಅನ್ನು ತೆರೆಯಲಾಗಿರುತ್ತದೆ.

ಉಡುಪಿ ಸರ್ಕಾರಿ ಬಸ್ ನಿಲ್ದಾಣ, ಕುಂದಾಪುರ ಸರ್ಕಾರಿ ಬಸ್ ನಿಲ್ದಾಣ ಹಾಗೂ ಕಾರ್ಕಳ ಸರ್ಕಾರಿ ಬಸ್ ನಿಲ್ದಾಣದಲ್ಲಿ ತಲಾ 5 ಬಸ್ಸುಗಳನ್ನು ಕಾಯ್ದಿರಿಸಲಾಗಿದ್ದು, ಈ ಸಂಬoಧ ಹೆಚ್ಚುವರಿ ಬಸ್ಸುಗಳ ಅವಶ್ಯಕತೆ ಇದ್ದಲ್ಲಿ ಪ್ರೈವೇಟ್ ಬಸ್ ಅಸೋಶಿಯೇಶನ್ ವತಿಯಿಂದ ಖಾಸಗಿ ಬಸ್‌ಗಳ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಬಸ್ಸು ನಿಲ್ದಾಣದ ಹತ್ತಿರ ಇರುವ ಆಟೋ ಸ್ಟಾö್ಯಂಡ್‌ಗಳಲ್ಲಿ ಆಟೋ ವ್ಯವಸ್ಥೆ ಇದ್ದು ಪ್ರಯಾಣಿಕರಿಂದ ನಿಗದಿತ ಶುಲ್ಕವನ್ನೇ ಸ್ವೀಕರಿಸುವಂತೆ ಸೂಚಿಸಲಾಗಿರುತ್ತದೆ.

ಮುಷ್ಕರ ನಿರತ ಸಿಬ್ಬಂದಿಯವರಿAದ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಜಿಲ್ಲಾಡಳಿತದಿಂದ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

24 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago