Featured

ಉಡುಪಿ : ಕೇಂದ್ರದಲ್ಲಿ ಬಾಕಿ ಇರುವ ಜಿಲ್ಲೆಯ ಯೋಜನೆಗಳು ಶೀಘ್ರ ಪೂರ್ಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ -Vishwanews24

ಉಡುಪಿ : ಕೇಂದ್ರದಲ್ಲಿ ಬಾಕಿ ಇರುವ ಜಿಲ್ಲೆಯ ಯೋಜನೆಗಳು ಶೀಘ್ರ ಪೂರ್ಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ -Vishwanews24

ಉಡುಪಿ : ಕೇಂದ್ರ ಸರ್ಕಾರದ ಮಟ್ಟದಲ್ಲಿ ಮಂಜೂರಾತಿಗೆ ಬಾಕಿ ಇರುವ ಜಿಲ್ಲೆಯ ವಿವಿಧ ಯೋಜನೆ ಮತ್ತು ಕಾಮಗಾರಿಗಳ ಪಟ್ಟಿಯನ್ನು ಕೂಡಲೇ ಸಲ್ಲಿಸಿ. ಈ ಬಗ್ಗೆ ಕೇಂದ್ರದ ಸಂಬAದಪಟ್ಟ ಸಚಿವರೊಂದಿಗೆ ಚರ್ಚಿಸಿ, ಈ ಬಗ್ಗೆ ಶೀಘ್ರದಲ್ಲಿ ಮಂಜೂರುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಇಂದು ವೀಡಿಯೋ ಸಭೆಯ ಮೂಲಕ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾನ್ಸೂನ್ ಹಾನಿಯ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಸಾಗರಮಾಲಾ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿ. ಉಪ್ಪುಂದದಲ್ಲಿ 130 ಕೋಟಿ ರೂ. ವೆಚ್ಚದಲ್ಲಿ ಬಂದರು ನಿರ್ಮಾಣ ಕುರಿತಂತೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ. ಕೇಂದ್ರದಲ್ಲಿ ಹೊಸ ಮೀನುಗಾರಿಕಾ ಮಸೂದೆ ಸಿದ್ಧವಾಗುತ್ತಿದ್ದು, ಈ ಬಗ್ಗೆ ಸಲಹೆ ಮತ್ತು ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸಲ್ಲಿಸಿ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ 3 ನೆ ಅಲೆ ಎದುರಿಸುವ ನಿಟ್ಟಿನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರಪಾಲನೆ ಕುರಿತು ಪರಿಶೀಲಿಸಿ. ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಸಾಮಾಜಿಕ ಅಂತರ ಪಾಲನೆ ಕುರಿತು, ಕಾರ್ಖಾನೆಗಳಿಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ಕಾಮಗಾರಿ ಆರಂಭಿಸಲಾಗಿರುವ ಆಕ್ಸಿಜನ್ ಘಟಕಗಳು ಶೀಘ್ರದಲ್ಲಿ ಕಾರ್ಯನಿರ್ವಹಣೆ ಮಾಡುವಂತೆ ಕ್ರಮ ಕೈಗೊಳ್ಳಿ. ದುರ್ಬಲ ವರ್ಗದವರಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಿ. ಅಪೌಷ್ಠಿಕ ಮಕ್ಕಳನ್ನು ಗುರುತಿಸಿ ಅವರಿಗೆ ಪೌಷ್ಠಿಕ ಆಹಾರ ಸೌಲಭ್ಯ ಒದಗಿಸುವಂತೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಎಚ್ಚರವಹಿಸುವಂತೆ ಸೂಚಿಸಿದರು.

ಮಾನ್ಸೂನ್ ಅವಧಿಯಲ್ಲಿ ನೆರೆಹಾನಿಗೊಳಗಾಗುವ ಸಂತ್ರಸ್ಥರಿಗೆ ತಕ್ಷಣದಲ್ಲಿ ಪರಿಹಾರ ವಿತರಿಸುವಂತೆ ತಿಳಿಸಿದ ಸಂಸದರು, ಹಾನಿಗೊಳಗಾಗುವ ತಗ್ಗು ಪ್ರದೇಶಗಳನ್ನು ಗುರುತಿಸಿಕೊಂಡು ಆ ಪ್ರದೇಶದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಯಾವುದೇ ಸಂದರ್ಭದಲ್ಲಿ ನೆರವು ನೀಡಲು ಸಿದ್ಧವಾಗಿರುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಪ್ರಾಕೃತಿಕ ವಿಕೋಪದಿಂದ 110 ಕೋಟಿ ರೂ. ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, ಇದರಲ್ಲಿ ಸಮುದ್ರ ಕೊರೆತದಿಂದ 99 ಕೋಟಿ ರೂ. ಹಾನಿ ಸಂಭವಿಸಿದೆ. ಈ ಬಗ್ಗೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೋವಿಡ್ 3 ನೇ ಅಲೆ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಒಟ್ಟು 50 ಮಕ್ಕಳ ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯ 2.40 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯ ನಡೆಯುತ್ತಿದೆ. ಎಂಡೋ ಸಲ್ಫಾನ್ ಪೀಡಿತರಿಗೆ ಹಾಗೂ ಅವರ ಕುಟುಂಬದವರಿಗೆ ಲಸಿಕೆ ನೀಡಲಾಗುತ್ತಿದೆ. ನೆರೆ ಪರಿಹಾರಕ್ಕಾಗಿ 11 ಕೋಟಿ ರೂ. ಹಣ ಇದ್ದು, ಅನುದಾನದ ಕೊರತೆ ಇಲ್ಲ. ವಿಕೋಪ ನಿರ್ವಹಣೆಗೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Vishwa News 24

Recent Posts

ಕುಂದಾಪುರ : ದೇವಸ್ಥಾನದಲ್ಲಿ ಮಹಿಳೆಯ ಕರಿಮಣಿ ಸರ ಕಳವು ಪ್ರಕರಣ ; ನಾಲ್ವರು ಮಹಿಳೆಯರ ಸಹಿತ ಐವರ ಬಂಧನ -vishwanews24

ಕುಂದಾಪುರ : ದೇವಸ್ಥಾನದಲ್ಲಿ ಮಹಿಳೆಯ ಕರಿಮಣಿ ಸರ ಕಳವು ಪ್ರಕರಣ ; ನಾಲ್ವರು ಮಹಿಳೆಯರ ಸಹಿತ ಐವರ ಬಂಧನ ಕುಂದಾಪುರ:…

2 hours ago

ಸೌಜನ್ಯಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳೇ ನಮಗೆ ನ್ಯಾಯ ಕೊಡಿಸಬೇಕು : ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹ -vishwanews24

ಸೌಜನ್ಯಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳೇ ನಮಗೆ ನ್ಯಾಯ ಕೊಡಿಸಬೇಕು : ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹ ಮಂಗಳೂರು : ಸೌಜನ್ಯಾ ಪ್ರಕರಣದಲ್ಲಿ…

2 hours ago

ಸರ್ಕಾರವನ್ನು ಹೆದರಿಸುವ ಕೆಲಸ ಮಾಡಬಾರದು ; ತಾಳ್ಮೆಯಿಂದ ಹೋರಾಟ ವಾಪಸ್ ತೆಗೆದುಕೊಳ್ಳಿ : ಆಶಾ ಕಾರ್ಯಕರ್ತೆಯರಿಗೆ ಸಿಎಂ ಮನವಿ -vishwanews24

ಸರ್ಕಾರವನ್ನು ಹೆದರಿಸುವ ಕೆಲಸ ಮಾಡಬಾರದು ; ತಾಳ್ಮೆಯಿಂದ ಹೋರಾಟ ವಾಪಸ್ ತೆಗೆದುಕೊಳ್ಳಿ : ಆಶಾ ಕಾರ್ಯಕರ್ತೆಯರಿಗೆ ಸಿಎಂ ಮನವಿ ಬೆಂಗಳೂರು:…

3 hours ago

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ : ಡಿ.1ರಿಂದ ದೇಶಾದ್ಯಂತ ಬಿಜೆಪಿಯ ‘ಸೇವಾ ದೂತ’ ಅಭಿಯಾನ -vishwanews24

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ – ಡಿ.1ರಿಂದ ದೇಶಾದ್ಯಂತ ಬಿಜೆಪಿಯ 'ಸೇವಾ ದೂತ’ ಅಭಿಯಾನ ನವದೆಹಲಿ: ಪ್ರಧಾನಿ ನರೇಂದ್ರ…

4 hours ago

ನ. 27ರಿಂದ 29ರವರೆಗೆ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ -vishwanews24

ನ. 27ರಿಂದ 29ರವರೆಗೆ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಉಡುಪಿ : ಕಾರ್ಕಳ ಶ್ರೀವೆಂಕಟರಮಣ…

4 hours ago

ಉಡುಪಿ : ಅಕ್ರಮವಾಗಿ ನೆಲೆಸಿದ್ದ 10  ಬಾಂಗ್ಲಾ ಪ್ರಜೆಗಳ ಗಡಿಪಾರು ಪ್ರಕ್ರಿಯೆಗೆ ಚಾಲನೆ -vishwanews24

ಉಡುಪಿ : ಅಕ್ರಮವಾಗಿ ನೆಲೆಸಿದ್ದ 10  ಬಾಂಗ್ಲಾ ಪ್ರಜೆಗಳ ಗಡಿಪಾರು ಪ್ರಕ್ರಿಯೆಗೆ ಚಾಲನೆ ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ…

6 hours ago