Featured

ಉಡುಪಿ : ಕೇಂದ್ರ, ರಾಜ್ಯ ಸರಕಾರಗಳ ಜನವಿರೋಧಿ ನೀತಿ ವಿರೋಧಿಸಿ ಮಾ.25ರಂದು ಕಾಪು ಉತ್ತರ ಬ್ಲಾಕ್ ಸಮಿತಿಯಿಂದ ‘ಜನಧ್ವನಿ’ ಪಾದಯಾತ್ರೆ : ವಿನಯ ಕುಮಾರ್ ಸೊರಕೆ -Vishwanews24

ಉಡುಪಿ : ಕೇಂದ್ರ, ರಾಜ್ಯ ಸರಕಾರಗಳ ಜನವಿರೋಧಿ ನೀತಿ ವಿರೋಧಿಸಿ ಮಾ.25ರಂದು ಕಾಪು ಉತ್ತರ ಬ್ಲಾಕ್ ಸಮಿತಿಯಿಂದ ‘ಜನಧ್ವನಿ’ ಪಾದಯಾತ್ರೆ : ವಿನಯ ಕುಮಾರ್ ಸೊರಕೆ -Vishwanews24

ಉಡುಪಿ : ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ, ಈ ಬಗ್ಗೆ ಜನಜಾಗೃತಿ ಮೂಡಿಸಲು ಕಾಪು ಉತ್ತರ ವಲಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಮಾ.25ರ ಗುರುವಾರ ಪೆರ್ಡೂರಿನಿಂದ 80 ಬಡಗುಬೆಟ್ಟುವರೆಗೆ ‘ಜನಧ್ವನಿ’ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ತಿಳಿಸಿದ್ದಾರೆ.

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು. ಒಟ್ಟು 16ಕಿ.ಮೀ. ಉದ್ದದ ಈ ಪಾದಯಾತ್ರೆ ಮುಂಜಾನೆ 9:30ಕ್ಕೆ ಪೆರ್ಡೂರು ಪೇಟೆಯಲ್ಲಿ ಪ್ರಾರಂಭಗೊಳ್ಳಲಿದೆ. ಹಿರಿಯಡ್ಕ, ಕೊಡಿಬೆಟ್ಟು, ಆತ್ರಾಡಿ, ಪರ್ಕಳ ಮಾರ್ಗವಾಗಿ ಸಂಜೆ 5 ಗಂಟೆಗೆ 80 ಬಡಗುಬೆಟ್ಟು ಪಂಚಾಯತ್ ಕಚೇರಿ ಎದುರು ಮುಕ್ತಾಯಗೊಳ್ಳಲಿದೆ ಎಂದರು.

ಉಡುಪಿ : ತೀರ್ಥಹಳ್ಳಿ – ಮಲ್ಪೆ ರಾ.ಹೆ ಅಭಿವೃದ್ದಿಗೆ ನಿತಿನ್ ಗಡ್ಕರಿ ಸೂಚನೆ : ಸಂಸದೆ ಶೋಭಾ ಕರಂದ್ಲಾಜೆ-Vishwanews24

ಜನಜಾಗೃತಿಗಾಗಿ ನಡೆಯುವ ಈ ಪಾದಯಾತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸೇರಿದಂತೆ ಜಿಲ್ಲಾ ನಾಯಕರು ಗಳು ಪಾಲ್ಗೊಳ್ಳಲಿದ್ದಾರೆ ಎಂದು ವಿನಯಕುಮಾರ್ ಸೊರಕೆ ತಿಳಿಸಿದರು.
ಕಳೆದ ತಿಂಗಳು ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಹೆಜಮಾಡಿಯಿಂದ ಬೈಂದೂರುವರೆಗಿನ 100ಕಿ.ಮೀ. ಉದ್ದದ ಜನಧ್ವನಿ ಪಾದ ಯಾತ್ರೆ ಯಶಸ್ವಿಯಾಗಿ ನಡೆದಿದ್ದು, ಇದರಿಂದ ಸ್ಪೂರ್ತಿ ಪಡೆದಿರುವ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜನಧ್ವನಿ ಪಾದಯಾತ್ರೆಯನ್ನು ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ನಡೆಸಲು ಸೂಚಿಸಿದ್ದಾರೆ ಎಂದರು.

ಕೇಂದ್ರ ಸರಕಾರದ ರೈತ ವಿರೋಧಿ ಕೃಷಿ ಕಾಯ್ದೆಯನ್ನು ವಿರೋಧಿಸಿ ಕಳೆದ 110 ದಿನಗಳಿಗೂ ಅಧಿಕ ಸಮಯದಲ್ಲಿ ಹೊಸದಿಲ್ಲಿಯಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ದೇಶದ ರೈತ ಸಮುದಾಯಕ್ಕೆ ಬೆಂಬಲವಾಗಿ ನಾವೀ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಈ ಪಾದಯಾತ್ರೆ ನಡೆಯುತ್ತಿದೆ ಎಂದರು.

ಜಿಲ್ಲೆಯಲ್ಲೂ ಮೂರು ವರ್ಷಗಳಿಂದ ಮರಳು ಸಮಸ್ಯೆ ಬಗೆಹರಿಯದೇ ಹಾಗೆ ಉಳಿದು ಬಿಟ್ಟಿದೆ. ಹಿರಿಯಡ್ಕ ಸಮೀಪದ ಬಜೆಯಲ್ಲಿ ಸ್ವರ್ಣ ನದಿಯ ಹೂಳೆತ್ತುವ ನೆಪದಲ್ಲಿ ಮರಳನ್ನು ಅಕ್ರಮವಾಗಿ ತೆಗೆದು ನಡೆದಿರುವ 40ಕೋಟಿ ರೂ.ಗಳಿಗೂ ಅದಿಕ ಭ್ರಷ್ಟಾಚಾರದಲ್ಲಿ ಜನಪ್ರತಿನಿಧಿಗಳೇ ಭಾಗಿಯಾಗಿದ್ದಾರೆ. ಆದರೆ ಈ ಬಗ್ಗೆ ತನಿಖೆಯನ್ನು ಬೇಕೆಂದೇ ವಿಳಂಬ ಮಾಡಲಾಗುತ್ತಿದೆ ಎಂದವರು ಆರೋಪಿಸಿದರು.

ಉಡುಪಿ ಜಿಲ್ಲೆಯ ಮೂವರು ಪೊಲೀಸರು ಹಾಗೂ ದಕ ಜಿಲ್ಲೆಯ ಐವರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ -Vishwanews24

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು, ಮುಖಂಡರಾದ ನಾಗೇಶ್ ಉದ್ಯಾವರ, ಹರೀಶ್ ಕಿಣಿ ಹಾಗೂ ಹಿರಿಯಡ್ಕ ಬ್ಲಾಕ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕೊರಂಗ್ರಪಾಡಿ ಉಪಸ್ಥಿತರಿದ್ದರು

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

13 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

22 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

22 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

22 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

22 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago