Featured

ಉಡುಪಿ : ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳ ಬೆಲೆ ಏರಿಕೆ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ತೀವ್ರ ಆಕ್ರೋಶ – vishwanews24

ಉಡುಪಿ : ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳ ಬೆಲೆ ಏರಿಕೆ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ತೀವ್ರ ಆಕ್ರೋಶ

ಏ. 26 ರಂದು ಕಾಪು ಹಾಗೂ ಏ 28 ರಂದು ಉಡುಪಿ DC ಕಛೇರಿ ಮುಂಭಾಗ ಪ್ರತಿಭಟನಾ ಅಭಿಯಾನ

ಉಡುಪಿ :  ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜ್ಯದ ಜನತೆಯ ಮೇಲೆ ಮಿತಿಮೀರಿದ ಆರ್ಥಿಕ ಹೊರೆಯನ್ನು ಹೇರುತ್ತಿರುವುದರ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾ ಸಮಿತಿಯು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ.

ಈಗಾಗಲೇ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನತೆಗೆ ಅತ್ತ ಕೇಂದ್ರ ಬಿಜೆಪಿ ಸರ್ಕಾರ ಅಡುಗೆ ಅನಿಲ ದರವನ್ನು ಹೆಚ್ಚಿಸಿದರೆ, ಇತ್ತ ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್, ಹಾಲು, ನೀರು, ಬಸ್ ದರಗಳನ್ನು ಏರಿಸಿದ್ದು ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಅದರ ಜೊತೆಗೆ ಜನಸ್ನೇಹಿಯಾಗಿದ್ದ ನಮ್ಮ ಮೆಟ್ರೋ ರೈಲಿನ ದರ ಏರಿಕೆಯಿಂದ ಜನಸಾಮಾನ್ಯರು ಮತ್ತೆ ತಮ್ಮ ಖಾಸಗಿ ವಾಹನಗಳ ಕಡೆ ಮುಖ ಮಾಡುವಂತಾಗಿದೆ.

ಜಾಗತಿಕವಾಗಿ ತೈಲ ಬೆಲೆಗಳು ಇಳಿಯುತ್ತಿದ್ದರೂ ಸಹ ತೈಲಗಳ ಮೇಲೆ ಅಬಕಾರಿ ಸುಂಕ ಹೆಚ್ಚಳ ಮಾಡುವ ಮೂಲಕ ಸರ್ಕಾರ ಹಗಲು ದರೋಡೆಗೆ ಇಳಿದಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಕಚ್ಚಾತೈಲಗಳ ಬೆಲೆ ಕುಸಿತದ ಲಾಭ ಜನ ಸಾಮಾನ್ಯರಿಗೆ ದೊರಕದಂತೆ ಮಾಡಲಾಗಿದೆ. ಬಡ, ಮಧ್ಯಮ ವರ್ಗಗಳಿಗೆ ಅಭಿವೃದ್ಧಿಯ ಭರವಸೆ ನೀಡಿ ಅಧಿಕಾರಕ್ಕೆ ಏರಿರುವ ಸರ್ಕಾರಗಳು ಇದೀಗ ಜನತೆಯ ದೈನಂದಿನ ಜೀವನವನ್ನೇ ತ್ರಾಸದಾಯಕವನ್ನಾಗಿಸಿವೆ.

ಒಂದು ಕಡೆ ಅಚ್ಛೇದಿನ್ ಹೆಸರಲ್ಲಿ ಕೇಂದ್ರ ಸರ್ಕಾರ, ಗ್ಯಾರಂಟಿ ಯೋಜನೆಗಳ ಮೂಲಕ ತಮ್ಮದು ಜನಪರ ಸರ್ಕಾರ ಎನ್ನುವ ರಾಜ್ಯ ಸರ್ಕಾರ ಎರಡೂ ಸೇರಿಕೊಂಡು ಬೆಲೆ ಏರಿಕೆಯಿಂದ ಜನರನ್ನೇ ಲೂಟಿ ಮಾಡುತ್ತಿವೆ. ಇದು ಸಾಲದೆಂಬಂತೆ ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿ ಜನರ ಗಮನ ಅತ್ತಕಡೆ ಸೆಳೆದು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಕೇಂದ್ರ ಬಿಜೆಪಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರಗಳು ನಿರಂತರವಾಗಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಮಾಡುತ್ತಿವೆ‌.

ವಸಾಹತುಶಾಹಿ ಬ್ರಿಟಿಷರ ಜನವಿರೋಧಿ ನೀತಿಗಳಂತೆ ಇಂದು ಕೂಡ ಅಗತ್ಯ ಸೇವಾ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸಿ ದೇಶದ ಜನತೆಯನ್ನು ಆರ್ಥಿಕ ಸಂಕಷ್ಟಕ್ಕೆ ಈಡುಮಾಡಲಾಗುತ್ತಿದೆ. ಅತ್ಯವಶ್ಯಕ ವಸ್ತುಗಳ ಖರೀದಿಗೂ ಭಾರಿ ತೆರಿಗೆ ಪಾವತಿಸಬೇಕಾದಂತ ದುಸ್ಥಿತಿ ಉಂಟಾಗಿದೆ.

ಜನರ ಹಿತಾಸಕ್ತಿ ಕಾಪಾಡುವಲ್ಲಿ ಸಂಪೂರ್ಣ ಎಡುವಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಏಪ್ರಿಲ್‍ 18 ರಿಂದ 28 ರ ವರೆಗೆ ರಾಜ್ಯದಾದ್ಯಂತ ಪ್ರತಿಭಟನಾ ಅಭಿಯಾನ ಹಮ್ಮಿಕೊಳ್ಳಲು ವಿಮೆನ್ ಇಂಡಿಯಾ ಮೂವ್ಮೆಂಟ್ ತೀರ್ಮಾನಿಸಿದ್ದು ಇದರ ಅಂಗವಾಗಿ ದಿನಾಂಕ 26-04-2025 ರಂದು ಕಾಪುವಿನಲ್ಲಿ ಹಾಗೂ 28-04-2025 ರಂದು ಉಡುಪಿ DC ಕಛೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿದ್ದೇವೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷೆಯಾಗಿರುವ ನಾಝಿಯ ನಸ್ರುಲ್ಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನಾಝಿಯಾ ನಸ್ರುಲ್ಲ, ಜಿಲ್ಲಾಧ್ಯಕ್ಷರು ವಿಮೆನ್ ಇಂಡಿಯಾ ಮೂವ್ಮೆಂಟ್-ಉಡುಪಿ ಜಿಲ್ಲೆ, ನಸೀಮಾ, ಉಪಾಧ್ಯಕ್ಷರು ವಿಮೆನ್ ಇಂಡಿಯಾ ಮೂವ್ಮೆಂಟ್- ಉಡುಪಿ ಜಿಲ್ಲೆ,ನಸೀಮ್ ಫಾತಿಮಾ, ಜಿಲ್ಲಾ ಸಮಿತಿ ಸದಸ್ಯೆ ,ಜೋಹಾರ, ಜಿಲ್ಲಾ ಸಮಿತಿ ಸದಸ್ಯೆ, ರಹಮತುನ್ನಿಸಾ ಜಿಲ್ಲಾ ಸಮಿತಿ ಸದಸ್ಯೆ ಉಪಸ್ಥಿರಿದ್ದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago