ಉಡುಪಿ, : ಕೇರಳ ಹಾಗೂ ತಮಿಳುನಾಡು ಗಡಿಯಲ್ಲಿರುವ ವಾಳಯಾರ್ ನಲ್ಲಿ 5 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಅಧಿಕ ಮಕ್ಕಳಲ್ಲಿ ಟೊಮೇಟೋ ಜ್ವರ ಕಂಡುಬಂದಿದ್ದು, ಉಡುಪಿ ಜಿಲ್ಲೆಯಲ್ಲಿ ಈ ರೋಗ ಲಕ್ಷಣ ಪತ್ತೆಯಾಗಿರುವುದಿಲ್ಲ. ಪಕ್ಕದ ಕೇರಳ ರಾಜ್ಯದಲ್ಲಿ ಈ ಜ್ವರವು ಪತ್ತೆಯಾದ ಕಾರಣ ಗಡಿಭಾಗದ ಜಿಲ್ಲೆಗಳು ಈ ಕುರಿತು ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.
ಜ್ವರ ಕಾಣಿಸಿಕೊಳ್ಳುವ ಮಕ್ಕಳ ದೇಹದಲ್ಲಿ ಟೊಮೇಟೋ ಆಕಾರದ ಗುಳ್ಳೆಗಳು ಏಳುವುದರಿಂದ ಇದಕ್ಕೆ ಟೊಮೇಟೋ ಜ್ವರ ಎಂದು ಹೆಸರಿಡಲಾಗಿದ್ದು, ಈ ಜ್ವರವು ವೈರಸ್ನಿಂದ ಹರಡುತ್ತಿದ್ದು, ಈ ಜ್ವರಕ್ಕೂ, ಕೊರೋನಾ ಗೂ ಯಾವುದೇ ಸಂಬಂಧವಿರುವುದಿಲ್ಲ.
ಈ ಜ್ವರವು ಚಿಕೂನ್ಗೂನ್ಯ ಲಕ್ಷಣವನ್ನು ಹೋಲುತ್ತಿದ್ದು, ಜ್ವರ ಹಾಗೂ ಗುಳ್ಳೆಯ ಜೊತೆಗೆ ಕೆಮ್ಮು, ಶೀತ, ನಿರ್ಜಲೀಕರಣ ಉಂಟಾಗುತ್ತದೆ. ಇದು ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದರಿಂದ ಸೋಂಕಿತ ಮಕ್ಕಳು ಕ್ವಾರಂಟೈನ್ ಆಗಬೇಕು ಹಾಗೂ ಗುಳ್ಳೆಗಳನ್ನು ಉಜ್ಜಬಾರದು.
ಜಿಲ್ಲೆಯ ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿಗಳು ಮೇಲ್ಕಂಡ ಲಕ್ಷಣಗಳಿರುವ ಪ್ರಕರಣಗಳು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೇರಳದಿಂದ ಬರುವ ವ್ಯಕ್ತಿಗಳು, ಯಾತ್ರಿಕರು, ಮಕ್ಕಳ ಬಗ್ಗೆ ತೀವ್ರ ನಿಗಾ ವಹಿಸಬೇಕು. ಕೊಲ್ಲೂರು ಮೂಕಾಂಬಿಕಾ ಹಾಗೂ ಜಿಲ್ಲೆಯ ಇತರೆ ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ತಾಣಗಳಲ್ಲಿಯೂ ಕೂಡ ಈ ರೋಗ ಲಕ್ಷಣ ಹೊಂದಿರುವ ಪ್ರಕರಣಗಳ ಕುರಿತು ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಎಲ್ಲಾ ಮಕ್ಕಳ ತಜ್ಞರು ಈ ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಪರೀಕ್ಷೆ ನಡೆಸಿ, ಮಾಹಿತಿ ನೀಡಬೇಕು.
ಸಾರ್ವಜನಿಕರು ಭೀತಿಗೊಳಗಾಗದೇ ಟೊಮೇಟೋ ಜ್ವರದ ಲಕ್ಷಣಗಳ ಬಗ್ಗೆ ಅರಿತು, ಶುದ್ಧತೆಯನ್ನು ಕಾಪಾಡಿಕೊಳ್ಳಬೇಕು ಹಾಗೂ ನಿರ್ಜಲೀಕರಣವಾಗದಂತೆ ಹೆಚ್ಚಿನ ಗಮನ ಹರಿಸಿ, ಶುದ್ಧ ನೀರು ಸೇವಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…