ಉಡುಪಿ: ಮೆಹಂದಿ ಕಾರ್ಯಕ್ರಮಕ್ಕೆ ಡಿಜೆ ಬಳಸಿದ್ದಾರೆ ಎಂದು ಕೊರಗ ಸಮುದಾಯದವರ ಮೇಲೆ ದೌರ್ಜನ್ಯ ಮಾಡಿದ ಪೊಲೀಸರನ್ನು ಕೇವಲ ಅಮಾನತು ಅಥವಾ ವರ್ಗಾವಣೆ ಮಾಡಿದರೆ ಸಾಲದು ಬದಲಾಗಿ ಅವರನ್ನು ಸೇವೆಯಿಂದಲೇ ವಜಾ ಮಾಡಬೇಕು ಮತ್ತು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಕರ್ನಾಟಕ ಕೇರಳ ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ ಸರಕಾರವನ್ನು ಆಗ್ರಹಿಸಿದೆ.
ಈ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷೆ ಅಮ್ಮಣ್ಣಿ ಬೆಳ್ವೆ ನಮ್ಮ ಸಮುದಾಯದವರು ಪುರಾತನ ಕಾಲದಿಂದಲೂ ಅಜಲು, ಅಸ್ಪಶ್ಯತೆಯಿಂದ ಬಹಳ ಹಿಂದುಳಿದವರಾಗಿದ್ದು ಈ ಕಾಲಘಟ್ಟದಲ್ಲಿಯೂ ಸಾಮಾಜಿಕವಾಗಿ ಅಂಚಿಗೆ ತಳ್ಳಲ್ಪಟ್ಟಿದೆ. ಅಲ್ಲದೇ ಸರ್ಕಾರವೂ ನಮ್ಮ ಸಮುದಾಯವನ್ನು ಪಿ.ವಿ.ಟಿ.ಜಿ ಎಂದು ಗುರುತಿಸಿದೆ. ಈ ಹಿಂದಿನಿಂದಲೂ ಶೋಷಣೆಗೆ ಒಳಗಾಗುತ್ತಾ ಬಂದಿದ್ದೇವೆ.
ಒಂದು ಕಡೆ ಆರೋಗ್ಯದ ಸಮಸ್ಯೆಯಿಂದಲೂ ಕೂಡಾ ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಿರುವಾಗ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದಲ್ಲಿ ನಮ್ಮ ಕೊರಗ ಸಮುದಾಯದವರು ಮದುವೆ ಮೆಹೆಂದಿ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಹಾಕಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ಕೋಟ ಪೋಲಿಸ್ ಠಾಣೆಯ ಸಬ್ ಇನ್ಸಪೆಕ್ಟರ್ ಹಾಗೂ ಒಂಭತ್ತು ಜನ ಸಿಬ್ಬಂದಿಗಳು ಮಹಂದಿ ಮನೆಗೆ ನುಗ್ಗಿ ನಮ್ಮ ಸಮುದಾಯದವರನ್ನು ಮನುಷ್ಯರು ಅಂತ ನೋಡದೆ ಮಹಿಳೆಯರು, ಮಕ್ಕಳು, ಹಿರಿಯರು ಅಂತ ನೋಡದೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ನೆಲಕ್ಕೆ ಉರುಳಿಸಿ ಬೂಟು ಕಾಲಿನಿಂದ ಒದ್ದು ಲಾಟಿಯಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆ. ಕೈ, ಕಾಲು ಬೆನ್ನಿನಲ್ಲಿ ತಲೆಯಲ್ಲಿ ಬಾಸುಂಡೆ ಬರುವಂತೆ ಭಾರಿಸಿದ್ದಾರೆ. ನಂತರ 4 ಮಂದಿ ನಮ್ಮವರನ್ನು ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗಿ ಹಾಕಿದವರ ಬಟ್ಟೆಯನ್ನು ಬಿಚ್ಚಲು ಹೇಳಿ ಲಾಟಿಯಿಂದ ಹಿಗ್ಗ ಮುಗ್ಗ ಥಳಿಸಿದ್ದಾರೆ.
ಹಾಗಾದರೆ ನಮ್ಮವರು ಮಾಡಿದ ತಪ್ಪಾದರೂ ಏನು ? ನಮ್ಮ ಸಮುದಾಯದವರೆಂದರೆ ಅಷ್ಟೊಂದು ತಾತ್ಸಾರವೇ ನಮ್ಮ ಸಮುದಾಯದವರೆಂದರೆ ಪ್ರಾಣಿಗಳಿಗಿಂತಲೂ ಹೀನವೇ? ಆದುದರಿಂದ ನಮ್ಮ ಸಮುದಾಯದವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಕೋಟ ಪೋಲಿಸ್ ಠಾಣೆಯ ಸಿಬ್ಬಂದಿಗಳನ್ನು ಈ ಕೂಡಲೇ ಕೆಲಸದಿಂದ ಖಾಯಂ ವಜಾ ಮಾಡಬೇಕು ಹಾಗೂ ಹಲ್ಲೆ ನಡೆಸಿದ ಸಬ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗಳನ್ನು ಬಂಧಿಸಿ, ತನಿಖೆಗೆ ಒಳಪಡಿಸಬೇಕಾಗಿ ವಿನಂತಿ, ಹಲ್ಲೆಗೊಳಗಾದ ಕುಟುಂಬಕ್ಕೆ ಪರಿಹಾರ ಒದಗಿಸಿಕೊಡಬೇಕು ಇಲ್ಲದಿದ್ದಲ್ಲಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ಮುಂದಿನ 7 ದಿನಗಳ ಒಳಗೆ ಧರಣಿ ಸತ್ಯಾಗ್ರಹ ಮಾಡಲಿದ್ದೇವೆ ಎಂದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…