Featured

ಉಡುಪಿ : ಕೇವಲ ಅಮಾನತು ಅಥವಾ ವರ್ಗಾವಣೆ ಮಾಡಿದರೆ ಸಾಲದು ಬದಲಾಗಿ ಅವರನ್ನು ಸೇವೆಯಿಂದಲೇ ವಜಾ ಮಾಡಬೇಕು ಮತ್ತು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು : ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ – Vishwanews24

ನಮ್ಮವರು ಮಾಡಿದ ತಪ್ಪಾದರೂ ಏನು ? ನಮ್ಮ ಸಮುದಾಯದವರೆಂದರೆ ಪ್ರಾಣಿಗಳಿಗಿಂತಲೂ ಹೀನವೇ?..

ಕೇವಲ ಅಮಾನತು ಅಥವಾ ವರ್ಗಾವಣೆ ಮಾಡಿದರೆ ಸಾಲದು ಬದಲಾಗಿ ಅವರನ್ನು ಸೇವೆಯಿಂದಲೇ ವಜಾ ಮಾಡಬೇಕು ಮತ್ತು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು..

ಕರ್ನಾಟಕ ಕೇರಳ ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ ಆಗ್ರಹ ..

ಉಡುಪಿ: ಮೆಹಂದಿ ಕಾರ್ಯಕ್ರಮಕ್ಕೆ ಡಿಜೆ ಬಳಸಿದ್ದಾರೆ ಎಂದು ಕೊರಗ ಸಮುದಾಯದವರ ಮೇಲೆ ದೌರ್ಜನ್ಯ ಮಾಡಿದ ಪೊಲೀಸರನ್ನು ಕೇವಲ ಅಮಾನತು ಅಥವಾ ವರ್ಗಾವಣೆ ಮಾಡಿದರೆ ಸಾಲದು ಬದಲಾಗಿ ಅವರನ್ನು ಸೇವೆಯಿಂದಲೇ ವಜಾ ಮಾಡಬೇಕು ಮತ್ತು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಕರ್ನಾಟಕ ಕೇರಳ ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ ಸರಕಾರವನ್ನು ಆಗ್ರಹಿಸಿದೆ.

ಈ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷೆ ಅಮ್ಮಣ್ಣಿ ಬೆಳ್ವೆ ನಮ್ಮ ಸಮುದಾಯದವರು ಪುರಾತನ ಕಾಲದಿಂದಲೂ ಅಜಲು, ಅಸ್ಪಶ್ಯತೆಯಿಂದ ಬಹಳ ಹಿಂದುಳಿದವರಾಗಿದ್ದು ಈ ಕಾಲಘಟ್ಟದಲ್ಲಿಯೂ ಸಾಮಾಜಿಕವಾಗಿ ಅಂಚಿಗೆ ತಳ್ಳಲ್ಪಟ್ಟಿದೆ. ಅಲ್ಲದೇ ಸರ್ಕಾರವೂ ನಮ್ಮ ಸಮುದಾಯವನ್ನು ಪಿ.ವಿ.ಟಿ.ಜಿ ಎಂದು ಗುರುತಿಸಿದೆ. ಈ ಹಿಂದಿನಿಂದಲೂ ಶೋಷಣೆಗೆ ಒಳಗಾಗುತ್ತಾ ಬಂದಿದ್ದೇವೆ.

ಒಂದು ಕಡೆ ಆರೋಗ್ಯದ ಸಮಸ್ಯೆಯಿಂದಲೂ ಕೂಡಾ ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಿರುವಾಗ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದಲ್ಲಿ ನಮ್ಮ ಕೊರಗ ಸಮುದಾಯದವರು ಮದುವೆ ಮೆಹೆಂದಿ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಹಾಕಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ಕೋಟ ಪೋಲಿಸ್ ಠಾಣೆಯ ಸಬ್ ಇನ್ಸಪೆಕ್ಟರ್ ಹಾಗೂ ಒಂಭತ್ತು ಜನ ಸಿಬ್ಬಂದಿಗಳು ಮಹಂದಿ ಮನೆಗೆ ನುಗ್ಗಿ ನಮ್ಮ ಸಮುದಾಯದವರನ್ನು ಮನುಷ್ಯರು ಅಂತ ನೋಡದೆ ಮಹಿಳೆಯರು, ಮಕ್ಕಳು, ಹಿರಿಯರು ಅಂತ ನೋಡದೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ನೆಲಕ್ಕೆ ಉರುಳಿಸಿ ಬೂಟು ಕಾಲಿನಿಂದ ಒದ್ದು ಲಾಟಿಯಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆ. ಕೈ, ಕಾಲು ಬೆನ್ನಿನಲ್ಲಿ ತಲೆಯಲ್ಲಿ ಬಾಸುಂಡೆ ಬರುವಂತೆ ಭಾರಿಸಿದ್ದಾರೆ. ನಂತರ 4 ಮಂದಿ ನಮ್ಮವರನ್ನು ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗಿ ಹಾಕಿದವರ ಬಟ್ಟೆಯನ್ನು ಬಿಚ್ಚಲು ಹೇಳಿ ಲಾಟಿಯಿಂದ ಹಿಗ್ಗ ಮುಗ್ಗ ಥಳಿಸಿದ್ದಾರೆ.

ಹಾಗಾದರೆ ನಮ್ಮವರು ಮಾಡಿದ ತಪ್ಪಾದರೂ ಏನು ? ನಮ್ಮ ಸಮುದಾಯದವರೆಂದರೆ ಅಷ್ಟೊಂದು ತಾತ್ಸಾರವೇ ನಮ್ಮ ಸಮುದಾಯದವರೆಂದರೆ ಪ್ರಾಣಿಗಳಿಗಿಂತಲೂ ಹೀನವೇ? ಆದುದರಿಂದ ನಮ್ಮ ಸಮುದಾಯದವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಕೋಟ ಪೋಲಿಸ್ ಠಾಣೆಯ ಸಿಬ್ಬಂದಿಗಳನ್ನು ಈ ಕೂಡಲೇ ಕೆಲಸದಿಂದ ಖಾಯಂ ವಜಾ ಮಾಡಬೇಕು ಹಾಗೂ ಹಲ್ಲೆ ನಡೆಸಿದ ಸಬ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗಳನ್ನು ಬಂಧಿಸಿ, ತನಿಖೆಗೆ ಒಳಪಡಿಸಬೇಕಾಗಿ ವಿನಂತಿ, ಹಲ್ಲೆಗೊಳಗಾದ ಕುಟುಂಬಕ್ಕೆ ಪರಿಹಾರ ಒದಗಿಸಿಕೊಡಬೇಕು ಇಲ್ಲದಿದ್ದಲ್ಲಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ಮುಂದಿನ 7 ದಿನಗಳ ಒಳಗೆ ಧರಣಿ ಸತ್ಯಾಗ್ರಹ ಮಾಡಲಿದ್ದೇವೆ ಎಂದರು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

3 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

9 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

11 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

11 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

12 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

12 hours ago