Featured

ಉಡುಪಿ : ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಬಾವುಟ ಪ್ರದರ್ಶನ ಮಾಡಬೇಕಿತ್ತೇ ? :ಸುನೀಲ್ ಕುಮಾರ್ – vishwanews24

ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಬಾವುಟ ಪ್ರದರ್ಶನ ಮಾಡಬೇಕಿತ್ತೇ ?

ಹಿಂದು ಆಚರಣೆಗಳಲ್ಲಿ ತಪ್ಪು ಹುಡುಕುವುದೇ ಕಾಂಗ್ರೆಸ್‌ಗೆ ಚಟವಾಗಿದೆ : ಸುನೀಲ್ ಕುಮಾರ್ ಆಕ್ರೋಶ

ಕಾರ್ಕಳ : ಉಡುಪಿ ಪರ್ಯಾಯದ ಮೆರವಣಿಗೆಯಲ್ಲಿ ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಬಾವುಟ ಪ್ರದರ್ಶನ ಮಾಡಬೇಕಿತ್ತೇ ? ಎಂದು ಮಾಜಿ ಸಚಿವ ವಿ ಸುನೀಲ್ ಕುಮಾರ್ ಪರ್ಯಾಯ ಮೆರವಣಿಗೆಯಲ್ಲಿ ಧ್ವಜ ವಿವಾದಕ್ಕೆ ಪ್ರತಿಕ್ರಿಯಿಸುತ್ತಾ ಪ್ರಶ್ನಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆಗೊಳಿರುವ ಅವರು ಉಡುಪಿ ಪರ್ಯಾಯದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಪ್ರಕರಣ ಕಾಂಗ್ರೆಸ್ ನಾಯಕರ ಕ್ಷುದ್ರ ಮನಸ್ಥಿತಿಗೆ ಇದು ಕೈಗನ್ನಡಿ. ಹಿಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಬಿಟ್ಟು ಕಾಂಗ್ರೆಸ್ ಅಥವಾ ಹಸಿರು ಧ್ವಜ ಪ್ರದರ್ಶಿಸುವುದು ಮಾತ್ರ ಧರ್ಮ ನಿರಪೇಕ್ಷತೆಯೇ ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮಾನವ ಹಕ್ಕು ಹಾಗೂ ಕಾನೂನು ವಿಭಾಗದ ಅಧ್ಯಕ್ಷ ಹರೀಶ್ ಶೆಟ್ಟಿ ಸಿಎಂ ಹಾಗೂ ಡಿಸಿಎಂಗೆ ಪತ್ರ ಬರೆದು ಡಿಸಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಉಡುಪಿ ಪರ್ಯಾಯ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳು ಮೊದಲಿನಿಂದಲೂ ಭಾಗವಹಿಸಿದ್ದನ್ನು ನಾವು ನೋಡಿದ್ದೇವೆ. ಆದರೆ ಈ ಬಾರಿ ಮಾತ್ರ ಕಾಂಗ್ರೆಸ್ ಕಣ್ಣಿಗೆ ಅದ್ಯಾವ ಲೋಪ ಕಂಡಿತು ? ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದು ಆಚರಣೆಗಳಲ್ಲಿ ತಪ್ಪು ಹುಡುಕುವುದೇ ಕಾಂಗ್ರೆಸ್‌ಗೆ ಚಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

20 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

23 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

23 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

23 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

23 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

24 hours ago