ಉಡುಪಿ: ರಾಜ್ಯದಲ್ಲಿ ಹಿಜಬ್- ಕೇಸರಿ ಫೈಟ್ ಜೋರಾಗಿದ್ದು, ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಈ ಮಧ್ಯೆ ವಿದ್ಯಾರ್ಥಿಗಳು ಮಾತ್ರ ತಮ್ಮ ಹೋರಾಟ ಮುಂದುವರಿಸುತ್ತಲೇ ಇದ್ದಾರೆ. ಇಂದು ನಗರದ ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಪೇಟ, ಶಾಲಿನೊಂದಿಗೆ ಕಾಲೇಜಿಗೆ ಆಗಮಿಸಿದ್ದಾರೆ.
ಬುರ್ಖಾ, ಹಿಜಬ್ ಧರಿಸಿ ವಿದ್ಯಾರ್ಥಿನಿಯರು ಬಂದರೆ, ಕೇಸರಿ ಪೇಟ, ಕೇಸರಿ ಶಾಲು ತೊಟ್ಟು ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದಾರೆ.
ರಾಜ್ಯಾದ್ಯಂತ ಹಿಜಬ್ ಧರಿಸುವ ಹಕ್ಕಿಗಾಗಿ ಹೋರಾಟ ನಡೆಯುತ್ತಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಧಾರ್ಮಿಕ ಹಕ್ಕು ಎರಡು ಧರ್ಮಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದ್ದು ಇಂದು ಪ್ರಕರಣದ ವಿಚಾರಣೆ ಆರಂಭವಾಗಲಿದೆ.
ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್‍ಗೆ ನಿರ್ಬಂಧ ಹೇರಿದ್ದನ್ನ ವಿರೋಧಿಸಿ, ಕೆಲ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇವತ್ತು ಹೈಕೋರ್ಟ್ ಕಟಕಟೆಗೆ ಈ ಪ್ರಕರಣ ಬರಲಿದೆ. ಸುಪ್ರೀಂಕೋರ್ಟ್, ಕೇರಳ, ಮದ್ರಾಸ್ ಹೈಕೋರ್ಟ್‍ಗಳು ಇಂಥದ್ದೇ ಪ್ರಕರಣಗಳಲ್ಲಿ ವಸ್ತ್ರ ಸಂಹಿತೆಯನ್ನ ಎತ್ತಿ ಹಿಡಿದಿವೆ. ಹೀಗಾಗಿ ಉಡುಪಿ ಪ್ರಕರಣದಲ್ಲಿ ಹೈಕೋರ್ಟ್ ಯಾವ ಆದೇಶ ನೀಡಲಿದೆ ಅನ್ನೋದು ಎಲ್ಲರ ಕುತೂಹಲ ಕೆರಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…