ಉಡುಪಿ: ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿರುವ ಉಡುಪಿ ಕೊಡವೂರು ಸಮೀಪವಿರುವ ನಂದಗೋಕುಲ ಗೋಶಾಲೆಯ ನೂತನ ಕಟ್ಟಡಕ್ಕೆ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಂಗಳವಾರ ಶಿಲಾನ್ಯಾಸ ನೆರವೇರಿಸಿ ಸಂದೇಶ ನೀಡಿದರು .
ದೇವಸ್ಥಾನಗಳಲ್ಲಿ ಶಿಲಾ ವಿಗ್ರಹ ಪ್ರತಿಮೆಗಳಲ್ಲಿ ಭಗವಂತನ ಚೈತನ್ಯವನ್ನು ತುಂಬಿ ಆರಾಧಿಸಲಾಗುತ್ತದೆ. ಗೋವುಗಳಲ್ಲಿ ದೇವಾನುದೇವತೆಗಳ ಸನ್ನಿಧಾನ ನಿತ್ಯ ಜಾಗೃತವಾಗಿರುತ್ತದೆ . ಚೈತನ್ಯ ತುಂಬಿದ ವಿಗ್ರಹದಷ್ಟೇ ಗೋವುಗಳೂ ಪ್ರಮುಖವಾಗಿವೆ . ಆದ್ದರಿಂದ ದೇವಳಗಳ ಜೀರ್ಣೋದ್ಧಾರಕ್ಕೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಗೋಶಾಲೆಗಳ ನಿರ್ಮಾಣ , ನವೀಕರಣಗಳಿಗೂ ನೀಡಬೇಕು ಎಂದು ಗೋವರ್ಧನಗಿರಿ ಟ್ರಸ್ಟ್ ಮುಖ್ಯಸ್ಥರೂ ಹಾಗೂ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದ್ದಾರೆ .
ಕೆ ಎಂ ಎಫ್ ಅಧ್ಯಕ್ಷ ಕೆ ರವಿರಾಜ ಹೆಗ್ಡೆ , ಆಸ್ಟ್ರೇಲಿಯಾ ದಲ್ಲಿ ಯೋಗ ಶಿಕ್ಷಕರಾಗಿರುವ ರಾಜೇಂದ್ರ ಎಂಕಣ್ಣಮೂಲೆ ಶುಭ ಕೋರಿ ಮಾತಾಡಿದರು . ಬಡಾನಿಡಿಯೂರಿನ ಬಾಲಯ್ಯ ಕುಟುಂಬಿಕರ ಪಂಜುರ್ಲಿ ಟ್ರಸ್ಟ್ ಮುಖ್ಯಸ್ಥ , ದಾನಿ ಉಮೇಶ್ ರಾವ್ , ಕೊಡವೂರು ಶಂಕರನಾರಾಯಣ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ ಸುಧೀರ್ ರಾವ್ , ನಗರಸಭಾ ಸದಸ್ಯ ವಿಜಯ್ ಕೊಡವೂರು , ಡಾ ಸರ್ವೋತ್ತಮ ಉಡುಪ , ನಾಗರಾಜ ಪುರಾಣಿಕ್ , ಇಂಜಿನಿಯರ್ ರಾಜೇಂದ್ರ ಮಯ್ಯ , ಚಂದ್ರಶೇಖರ್ , ಗೋಶಾಲೆ ನಿರ್ವಾಹಕಿ ಪ್ರಮೀಳಾ ಜೋಶಿ ಮೊದಲಾದವರು ಉಪಸ್ಥಿತರಿದ್ದು ಶಿಲಾನ್ಯಾಸ ನೆರವೇರಿಸಿದರು .
ಈ ಗೋಶಾಲೆಯು ಒಂದೂವರೆ ಎಕ್ರೆ ಪ್ರದೇಶದಲ್ಲಿ 1984 ರಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸ್ಥಾಪಿಸಿದ ಮೊದಲ ಗೋಶಾಲೆಯಾಗಿದ್ದು 150 ಗೋವುಗಳು ಪೋಷಿಸಲ್ಪಡುತ್ತಿವೆ .
ಪ್ರಸ್ತುತ ನೂತನ ಒಂದು ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಟ್ರಸ್ಟ್ ವ್ಯವಸ್ಥಾಪಕ ರಘುರಾಮಾಚಾರ್ಯ ವಿವರಿಸಿದರು .
ಸ್ಥಳದಲ್ಲೇ ದನಸಹಾಯ ನೀಡಿದ ಮಹನೀಯರು : ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಸ್ಟ್ರೇಲಿಯಾ ದ ಯೋಗ ಶಿಕ್ಷಕ ರಾಜೇಂದ್ರ ಎಂಕಣ್ಣಮೂಲೆ ಎರಡು ಲಕ್ಷರೂ , ಕೆ ಎಂ ಎಫ್ ಪರವಾಗಿ ಅಧ್ಯಕ್ಷ ರವಿರಾಜ ಹೆಗ್ಡೆ ಒಂದು ಲಕ್ಷ ರೂ ದೇಣಿಗೆ ಹಸ್ತಾಂತರಿಸಿದರು
ವಾಸುದೇವ ಭಟ್ ಪೆರಂಪಳ್ಳಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು . . ವೇಣುಗೋಪಾಲ ಸಾಮಗರು ಧಾರ್ಮಿಕ ವಿಧಿ ನೆರವೇರಿಸಿದರು. ಕೃಷ್ಣ ಭಟ್ , ವಿಷ್ಣುಮೂರ್ತಿ ಆಚಾರ್ಯ , ಪ್ರಾಣೇಶ್ ಜೋಶಿ ಸಹಕರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…