Featured

ಉಡುಪಿ: ಕೊನೆಯ ಚುನಾವಣೆ ಎಂದು ಹೇಳುವ ಗಿರಾಕಿಗಳನ್ನು ಎಂದಿಗೂ ನಂಬಬೇಡಿ : ಪ್ರಮೋದ್ ಮಧ್ವರಾಜ್ – Vishwanews24

ಉಡುಪಿ: ಕೊನೆಯ ಚುನಾವಣೆ ಎಂದು ಹೇಳುವ ಗಿರಾಕಿಗಳನ್ನು ಎಂದಿಗೂ ನಂಬಬೇಡಿ : ಪ್ರಮೋದ್ ಮಧ್ವರಾಜ್

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯವರು, ಇದು ತನ್ನ ಕೊನೆಯ ಚುನಾವಣೆ ಎಂದು ಹೇಳುತ್ತಿದ್ದಾರೆ. ಕೊನೆಯ ಚುನಾವಣೆ ಎಂದು ಹೇಳುವ ಗಿರಾಕಿಗಳನ್ನು ಎಂದಿಗೂ ನಂಬಬೇಡಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತದಾರರಿಗೆ ಕರೆ ನೀಡಿದರು.

ಅವರು ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನ ನಡೆಯುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಸೊರಕೆಯವರು ಸತ್ಯ ಅಥವಾ ಸುಳ್ಳು ಹೇಳುತ್ತಿದ್ದರೂ, ಮತದಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ. ಸತ್ಯ ಎಂದಾದರೇ ಅದೃಶವಶಾತ್ ಅವರು ಗೆದ್ದರೇ, ಜನರ ಸೇವೆ ಮಾಡದೇ ಅವರ ಹೆಂಡತಿ, ಮಕ್ಕಳ ಹೊಟ್ಟೆಯನ್ನು ತುಂಬಿಸುತ್ತಾ ಕಾಲ ಕಳೆಯುತ್ತಾರೆ. ಸುಳ್ಳು ಎಂದಾದಲ್ಲಿ ಜನರಿಗೆ ಮೋಸ ಮಾಡಿದಂತಾಗುತ್ತದೆ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2014 ರಲ್ಲಿ ವಿಧಾನಸಭೆಯಲ್ಲಿ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದರು. ಆ ನಂತರ 2018 ರಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಈಗ ಮತ್ತೇ ಎರಡು ಕ್ಷೇತ್ರಕ್ಕೆ ಟಿಕೆಟ್ ಕೇಳಿದ ಅವರಿಗೆ ಒಂದು ಕ್ಷೇತ್ರದಲ್ಲಿ ಮಾತ್ರ ಪಕ್ಷ ಟಿಕೆಟ್ ನೀಡಿದೆ. ಮಾಜಿ ಪ್ರಧಾನಿ ದೇವೆಗೌಡರು ಕಳೆದ 30 ವರ್ಷಗಳಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಾ, ಇಂದಿಗೂ ಸ್ಪರ್ಧಿಸುವುದನ್ನು ಕೊನೆಗೊಳಿಸಿಲ್ಲ ಎಂದು ವ್ಯಂಗಿಸಿದರು.

ಹಿಂದುತ್ವಕ್ಕೆ ವಿರೋಧಿಯಾಗಿರುವ ಕಾಂಗ್ರೆಸ್ ಪಕ್ಷ. ಅದರ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದರೇ ಸನಾತನ ಧರ್ಮವನ್ನು ಅನುಷ್ಠಾನಕ್ಕೆ ತರುತ್ತಾರೆ. ಇದು ಅನುಷ್ಠಾನಕ್ಕೆ ಬರಲೂ ಬಿಡಬಾರದು ಎಂದು ಕರೆ ನೀಡಿದ್ದರು. ಜಗತ್ತು ಗೌರವಿಸುವ ಸನಾತನ ಧರ್ಮದ ವಿರೋಧಿಯಾಗಿರುವ ಇವರುಗಳು, ಕೇವಲ ಹಿಂದುತ್ವದ ವಿರೋಧಿಗಳಲ್ಲ, ಬದಲಾಗಿ ಹಿಂದುಗಳ ವಿರೋಧಿಗಳು ಎಂದವರು ಹೇಳಿದರು.

2024 ರಲ್ಲಿ ನರೇಂದ್ರ ಮೋದಿಯವರ ಸರಕಾರವು ಅಧಿಕಾರಕ್ಕೆ ಬರಬೇಕೆಂದರೇ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಕಾರವು ಅಧಿಕಾರಕ್ಕೆ ಬರಬೇಕು. ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಗೆ ಇದು ಮುನ್ನುಡಿಯಾಗಲಿದೆ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಭಾಜಪ ಅಭ್ಯರ್ಥಿಗಳನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸಿ ಎಂದವರು ಹೇಳಿದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

8 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

16 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

16 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

17 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

17 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

17 hours ago