Featured

ಉಡುಪಿ : ಕೊರಗ ಸಮುದಾಯದ ಮೇಲೆ ಪೊಲೀಸರಿಂದ ಹಲ್ಲೆ : ಕೋಟ ಎಸ್ಐ ಅಮಾನತು , ಐವರು ಸಿಬ್ಬಂದಿ ವರ್ಗಾವಣೆ – Vishwanews24

ಉಡುಪಿ : ಕೊರಗ ಸಮುದಾಯದ ಮೇಲೆ ಪೊಲೀಸರಿಂದ ಹಲ್ಲೆ : ಕೋಟ ಎಸ್ಐ ಅಮಾನತು , ಐವರು ಸಿಬ್ಬಂದಿ ವರ್ಗಾವಣೆ – Vishwanews24

ಉಡುಪಿ: ಕೋಟ ಕೊರಗರ ಮೇಲೆ ಹಲ್ಲೆಯ ಘಟನೆಗೆ ಸಂಬಂಧಿಸಿ ಕೋಟ ಠಾಣಾಧಿಕಾರಿ ಸಂತೋಷ್‌ ಬಿ ಪಿ ಅವರನ್ನು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅವರು ಆದೇಶ ಹೊರಡಿಸಿದ್ದಾರೆ ಅಲ್ಲದೆ ಉಳಿದ ಐದು ಸಿಬಂದಿಗಳನ್ನು ಜಿಲ್ಲೆಯ ಬೇರೆ ಠಾಣೆಗಳಿಗೆ ವರ್ಗಾವಣೆಗೊಳಿಸಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌ ವಿಷ್ಣುವರ್ಧನ್‌ ಮಾಹಿತಿ ನೀಡಿದ್ದಾರೆ.

ಸೋಮವಾರ ರಾತ್ರಿ ಕೊಟ್ಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮನೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಹಾಕಿದ್ದಾರೆ ಎಂಬ ಸಾರ್ವಜನಿಕರ ದೂರಿನ ಅನ್ವಯ ತೆರಳಿದ್ದ ಪಿಎಸ್‌ ಐ ಮತ್ತವರ ತಂಡ ಅಲ್ಲಿದ್ದ ಜನರ ಮೇಲೆ ಲಾಠಿ ಪ್ರಹಾರ ನಡೆಸಿದ್ದು ಘಟನೆಯಲ್ಲಿ ಮದುಮಗ ಸೇರಿ ಹಲವರು ಗಾಯಗೊಂಡಿದ್ದರು. ಪೊಲೀಸರ ದೌರ್ಜನ್ಯದ ಕುರಿತು ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಡಿವೈಎಸ್ಪಿ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌ ವಿಷ್ಣುವರ್ಧನ್‌ ಅವರು ತನಿಖೆಗೆ ಆದೇಶ ನೀಡಿದ್ದು ಅದರ ಬೆನ್ನಲ್ಲೇ ಪಶ್ಚಿಮ ವಲಯ ಐಜಿಪಿ ಜ್ಯೋತಿ ಪ್ರಕಾಶ್‌ ರೈ ಅವರು ಎಸ್‌ ಐ ಅವರನ್ನು ಅಮಾನತು ಮಾಡಿ ಉಳಿದ ಐವರು ಪೊಲೀಸರಿಗೆ ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡುವಂತೆ ಆದೇಶ ನೀಡಿದ್ದಾರೆ.

 

Vishwa News 24

Recent Posts

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

29 minutes ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

33 minutes ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

1 hour ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

1 hour ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

2 hours ago