ಉಡುಪಿ: ಕೋಟ ಕೊರಗರ ಮೇಲೆ ಹಲ್ಲೆಯ ಘಟನೆಗೆ ಸಂಬಂಧಿಸಿ ಕೋಟ ಠಾಣಾಧಿಕಾರಿ ಸಂತೋಷ್ ಬಿ ಪಿ ಅವರನ್ನು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅವರು ಆದೇಶ ಹೊರಡಿಸಿದ್ದಾರೆ ಅಲ್ಲದೆ ಉಳಿದ ಐದು ಸಿಬಂದಿಗಳನ್ನು ಜಿಲ್ಲೆಯ ಬೇರೆ ಠಾಣೆಗಳಿಗೆ ವರ್ಗಾವಣೆಗೊಳಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.
ಸೋಮವಾರ ರಾತ್ರಿ ಕೊಟ್ಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮನೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಹಾಕಿದ್ದಾರೆ ಎಂಬ ಸಾರ್ವಜನಿಕರ ದೂರಿನ ಅನ್ವಯ ತೆರಳಿದ್ದ ಪಿಎಸ್ ಐ ಮತ್ತವರ ತಂಡ ಅಲ್ಲಿದ್ದ ಜನರ ಮೇಲೆ ಲಾಠಿ ಪ್ರಹಾರ ನಡೆಸಿದ್ದು ಘಟನೆಯಲ್ಲಿ ಮದುಮಗ ಸೇರಿ ಹಲವರು ಗಾಯಗೊಂಡಿದ್ದರು. ಪೊಲೀಸರ ದೌರ್ಜನ್ಯದ ಕುರಿತು ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಡಿವೈಎಸ್ಪಿ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಅವರು ತನಿಖೆಗೆ ಆದೇಶ ನೀಡಿದ್ದು ಅದರ ಬೆನ್ನಲ್ಲೇ ಪಶ್ಚಿಮ ವಲಯ ಐಜಿಪಿ ಜ್ಯೋತಿ ಪ್ರಕಾಶ್ ರೈ ಅವರು ಎಸ್ ಐ ಅವರನ್ನು ಅಮಾನತು ಮಾಡಿ ಉಳಿದ ಐವರು ಪೊಲೀಸರಿಗೆ ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡುವಂತೆ ಆದೇಶ ನೀಡಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…