ಉಡುಪಿ: ಕೊರೊನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಠ 200 ಕೋಟಿ ರೂ.ಗಳ ನಿರ್ವಹಣಾ ನಿಧಿಯನ್ನು ನೀಡಬೇಕೆಂದು ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರು ಆಗಿರುವ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ.
ಕಳೆದ ಆರೇಳು ತಿಂಗಳುಗಳಿಂದ ಕೊರೊನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳೂ ತೊಂದರೆಗೊಳಗಾಗಿವೆ ಎಂದು ಶ್ರೀಗಳು ಪತ್ರದಲ್ಲಿ ತಿಳಿಸಿದ್ದಾರೆ.
ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕವಾಗಿದೆ. ಉಡುಪಿಯಲ್ಲಿ ನೀಲಾವರ, ಕೊಡವೂರು, ಹೆಬ್ರಿಯಲ್ಲಿ ನಾವು ನಡೆಸುತ್ತಿರುವ ಗೋಶಾಲೆಗಳಿಗೆ ತಿಂಗಳಿಗೆ ಅಂದಾಜು 35 ಲಕ್ಷ ರೂ. ನಿರ್ವಹಣಾ ಖರ್ಚು ಆಗುತ್ತದೆ. ಅದೇ ರೀತಿಯಲ್ಲಿ ದೊಡ್ಡ ಅಥವಾ ಸಣ್ಣ ಮಟ್ಟದ ಗೋಶಾಲೆಗಳನ್ನು ಅನೇಕ ಮಠ, ದೇವಳ ಹಾಗೂ ಮಹನೀಯರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕರ್ತವ್ಯದ ದೃಷ್ಟಿಯಿಂದ ನಡೆಸುತ್ತಾ ಲಕ್ಷಾಂತರ ಗೋವುಗಳನ್ನು ಪೋಷಿಸುತ್ತಿದ್ದಾರೆ. ಧರ್ಮಾಭಿಮಾನಿಗಳ ಸಹಕಾರದಿಂದ ಇದು ಸಾಧ್ಯವಾಗುತ್ತಿತ್ತು. ಆದರೆ ಪ್ರಸ್ತುತ ಭಕ್ತರ ದೇಣಿಗೆಯೂ ಅಷ್ಟಾಗಿ ಬರುತ್ತಿಲ್ಲ. ಎರಡು ತಿಂಗಳಿನಿಂದ ದೇಶದ ಕೆಲವೆಡೆಗಳಲ್ಲಿ ವಿಪರೀತ ಮಳೆಯೂ ಸುರಿಯುತ್ತಿರುವುದರಿಂದ ಮೇವಿನ ಸಂಗ್ರಹಣೆಯೂ ದುಸ್ತರವಾಗುತ್ತಿದೆ ಎಂದಿದ್ದಾರೆ.
ಕೊರೊನಾ ವಿಪತ್ತನ್ನು ಎದುರಿಸಲು ಬೇರೆ ಬೇರೆ ಕ್ಷೇತ್ರಗಳಿಗೆ ಸರಕಾರವು ಆರ್ಥಿಕ ಪ್ಯಾಕೇಜ್ ಘೋಷಿಸಿದಂತೆ ಗೋಶಾಲೆಗಳಿಗೂ ಕನಿಷ್ಠ 200 ಕೋಟಿ ರೂ. ಆದರೂ ತುರ್ತಾಗಿ ನೀಡಿ ಗೋರಕ್ಷಣೆಯ ಕೈಂಕರ್ಯದಲ್ಲಿ ಕೈಜೋಡಿಸಬೇಕು. ಕೇವಲ ಧರ್ಮಮಾತ್ರವಲ್ಲದೇ ಆರ್ಥಿಕತೆಯ ಹಿತದೃಷ್ಟಿಯಿಂದಲೂ ಗೋರಕ್ಷಣೆಯನ್ನು ಆದ್ಯತೆಯಾಗಿ ಪರಿಗಣಿಸಬೇಕೆಂದು ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…