ಉಡುಪಿ

ಉಡುಪಿ: ಕೊರೊನಾ ಸಂಕಷ್ಟ : ಗೋಶಾಲೆಗಳಿಗೆ 200 ಕೋಟಿ ರೂ. ಪ್ಯಾಕೇಜ್ ನೀಡಲು ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ -Vishwanews24

ಉಡುಪಿ: ಕೊರೊನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಠ 200 ಕೋಟಿ ರೂ.ಗಳ ನಿರ್ವಹಣಾ ನಿಧಿಯನ್ನು ನೀಡಬೇಕೆಂದು ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರು ಆಗಿರುವ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ.

ಕಳೆದ ಆರೇಳು ತಿಂಗಳುಗಳಿಂದ ಕೊರೊನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳೂ ತೊಂದರೆಗೊಳಗಾಗಿವೆ ಎಂದು ಶ್ರೀಗಳು ಪತ್ರದಲ್ಲಿ ತಿಳಿಸಿದ್ದಾರೆ.

ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕವಾಗಿದೆ. ಉಡುಪಿಯಲ್ಲಿ ನೀಲಾವರ, ಕೊಡವೂರು, ಹೆಬ್ರಿಯಲ್ಲಿ ನಾವು ನಡೆಸುತ್ತಿರುವ ಗೋಶಾಲೆಗಳಿಗೆ ತಿಂಗಳಿಗೆ ಅಂದಾಜು 35 ಲಕ್ಷ ರೂ. ನಿರ್ವಹಣಾ ಖರ್ಚು ಆಗುತ್ತದೆ. ಅದೇ ರೀತಿಯಲ್ಲಿ ದೊಡ್ಡ ಅಥವಾ ಸಣ್ಣ ಮಟ್ಟದ ಗೋಶಾಲೆಗಳನ್ನು ಅನೇಕ ಮಠ, ದೇವಳ ಹಾಗೂ ಮಹನೀಯರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕರ್ತವ್ಯದ ದೃಷ್ಟಿಯಿಂದ ನಡೆಸುತ್ತಾ ಲಕ್ಷಾಂತರ ಗೋವುಗಳನ್ನು ಪೋಷಿಸುತ್ತಿದ್ದಾರೆ. ಧರ್ಮಾಭಿಮಾನಿಗಳ ಸಹಕಾರದಿಂದ ಇದು ಸಾಧ್ಯವಾಗುತ್ತಿತ್ತು. ಆದರೆ ಪ್ರಸ್ತುತ ಭಕ್ತರ ದೇಣಿಗೆಯೂ ಅಷ್ಟಾಗಿ ಬರುತ್ತಿಲ್ಲ. ಎರಡು ತಿಂಗಳಿನಿಂದ ದೇಶದ ಕೆಲವೆಡೆಗಳಲ್ಲಿ ವಿಪರೀತ ಮಳೆಯೂ ಸುರಿಯುತ್ತಿರುವುದರಿಂದ ಮೇವಿನ ಸಂಗ್ರಹಣೆಯೂ ದುಸ್ತರವಾಗುತ್ತಿದೆ ಎಂದಿದ್ದಾರೆ.

ಕೊರೊನಾ ವಿಪತ್ತನ್ನು ಎದುರಿಸಲು ಬೇರೆ ಬೇರೆ ಕ್ಷೇತ್ರಗಳಿಗೆ ಸರಕಾರವು ಆರ್ಥಿಕ ಪ್ಯಾಕೇಜ್ ಘೋಷಿಸಿದಂತೆ ಗೋಶಾಲೆಗಳಿಗೂ ಕನಿಷ್ಠ 200 ಕೋಟಿ ರೂ. ಆದರೂ ತುರ್ತಾಗಿ ನೀಡಿ ಗೋರಕ್ಷಣೆಯ ಕೈಂಕರ್ಯದಲ್ಲಿ ಕೈಜೋಡಿಸಬೇಕು. ಕೇವಲ ಧರ್ಮ‌ಮಾತ್ರವಲ್ಲದೇ ಆರ್ಥಿಕತೆಯ ಹಿತದೃಷ್ಟಿಯಿಂದಲೂ ಗೋರಕ್ಷಣೆಯನ್ನು ಆದ್ಯತೆಯಾಗಿ ಪರಿಗಣಿಸಬೇಕೆಂದು ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

12 minutes ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

43 minutes ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

54 minutes ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

1 hour ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

1 hour ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

2 hours ago