Featured

ಉಡುಪಿ: ‘ಕೊರೊನಾ ಸೋಂಕಿಗೆ ರಾಜ್ಯದ 31 ಪತ್ರಕರ್ತರು ಬಲಿ’ :  ಶಿವಾನಂದ ತಗಡೂರು -Vishwanews24

ಉಡುಪಿ: ‘ಕೊರೊನಾ ಸೋಂಕಿಗೆ ರಾಜ್ಯದ 31 ಪತ್ರಕರ್ತರು ಬಲಿ’ :  ಶಿವಾನಂದ ತಗಡೂರು -Vishwanews24

ಉಡುಪಿ : “ರಾಜ್ಯದಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿರುವ ಹಲವು ಪತ್ರಕರ್ತರಲ್ಲಿ ಒಟ್ಟು 31 ಪತ್ರಕರ್ತರು ಮೃತಪಟ್ಟಿದ್ದು, ಇವರಿಗೆ ಸರಕಾರದಿಂದ ತಲಾ 5ಲಕ್ಷ ರೂ. ಪರಿಹಾರ ಹಾಗೂ ಎರಡು ಕುಟುಂಬಗಳಿಗೆ ಮನೆ ಒದಗಿಸುವಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಶ್ರಮಿಸಿದೆ” ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಗೆ ಅಧಿಕೃತವಾಗಿ ಭೇಟಿ ನೀಡಿದ ಹಿನ್ನೆಲೆಯಲ್ಲಿ ಇಂದು ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ಪತ್ರಕರ್ತರನ್ನುದ್ದೇಶಿಸಿ ಮಾತನಾಡುತಿದ್ದರು.

“ರಾಜ್ಯದಲ್ಲಿ ಸುಮಾರು 8000 ಮಂದಿ ಸಂಘದ ಸದಸ್ಯತ್ವ ಪಡೆದುಕೊಂಡಿದ್ದಾರೆ. ಕೊರೊನಾ ಸಂದಿಗ್ನ ಸ್ಥಿತಿಯಲ್ಲೂ ವೃತ್ತಿ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಿದ ಪತ್ರಕರ್ತರು ಕೊರೊನಾಗೆ ಬಲಿಯಾಗಿದ್ದಾರೆ. ಮೃತ ಕುಟುಂಬಕ್ಕೆ ಆಸರೆಯಾಗಬೇಕೆಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ 5 ಲಕ್ಷ ರೂ. ಪರಿಹಾರ ಕೊಡುವಂತೆ ಮನವಿ ಮಾಡಲಾಗಿತ್ತು. ಇದರಿಂದ ಮೃತ ಒಟ್ಟು 31 ಪತ್ರಕರ್ತರ ಕುಟುಂಬಗಳಿಗೆ ಪರಿಹಾರ ಸಿಕ್ಕಿದೆ” ಎಂದರು.

“ಕೊರೊನಾ ಕಾರಣಕ್ಕೆ ಕಳೆದ ಒಂದೂವರೆ ವರ್ಷದಿಂದ ರಾಜ್ಯಮಟ್ಟದ ಪತ್ರಿಕೆ, ದೃಶ್ಯ ಮಾಧ್ಯಮ ಸೇರಿದಂತೆ ಸ್ಥಳೀಯ ಪತ್ರಿಕೆಗಳಿಗೆ ಬಾಕಿ ಇಟ್ಟಿರುವ 56 ಕೋಟಿ ರೂ. ಸರಕಾರಿ ಜಾಹೀರಾತು ಬಿಲ್‌ ಅನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಿದೆ” ಎಂದು ಹೇಳಿದರು.

ಏಷ್ಯನ್ ಕಾರ್ಯನಿರತ ಪತ್ರಕರ್ತರ ಸಂಘದ ಸಂಚಾಲಕ ಮದನ್ ಗೌಡ ಮಾತನಾಡಿ, “ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ರಾಜ್ಯ ಸರಕಾರ ನೀಡಿರುವ 2 ಕೋಟಿ ರೂ. ವೌಲ್ಯದ ನಿವೇಶನದಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದರ ಶಂಕು ಸ್ಥಾಪನೆ ಶೀಘ್ರವೇ ನಡೆಸಲಾಗುವುದು” ಎಂದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಂಘ ಹಾಗೂ ಪ್ರತಕರ್ತರ ಬೇಡಿಕೆಗಳ ಮನವಿಯನ್ನು ರಾಜ್ಯಾಧ್ಯಕ್ಷರಿಗೆ ಸಲ್ಲಿಸಲಾಯಿತು. ನಮ್ಮ ಕುಂದಾಪ್ರ ಕನ್ನಡ ಗಲ್ಫ್ ಬಳಗ ವತಿಯಿಂದ ನೀಡಲಾದ ಫೇಸ್ ಶೀಲ್ಡ್‌ಗಳನ್ನು ಪತ್ರಕರ್ತರಿಗೆ ವಿತರಿಸಲಾಯಿತು. ಬಳಿಕ ರಾಜ್ಯಾಧ್ಯಕ್ಷರೊಂದಿಗೆ ಪತ್ರಕರ್ತರ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಚರ್ಚಿಸಲಾಯಿತು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತರಾದ ರಾಕೇಶ್ ಕುಂಜೂರು ಹಾಗೂ ದೀಪಕ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

16 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago