Featured

ಉಡುಪಿ: ಕೊರೊನಾ ಸೋಂಕು ಹೆಚ್ಚಳ ; ಎಂಐಟಿ ಕ್ಯಾಂಪಸ್‌ ಸೀಲ್‌ಡೌನ್ : ಕೆ.ಸುಧಾಕರ್ -Vishwanews24‌

ಉಡುಪಿ: ಕೊರೊನಾ ಸೋಂಕು ಹೆಚ್ಚಳ ; ಎಂಐಟಿ ಕ್ಯಾಂಪಸ್‌ ಸೀಲ್‌ಡೌನ್ : ಕೆ.ಸುಧಾಕರ್ -Vishwanews24

ಉಡುಪಿ : ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಕರ್ನಾಟಕ ಆರೋಗ್ಯ ಇಲಾಖೆ ರಾಜ್ಯದ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿರುವ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಕ್ಯಾಂಪಸನ್ನು ಸೀಲ್‌ಡೌನ್‌ ಮಾಡಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಶುಕ್ರವಾರ ತಿಳಿಸಿದ್ದಾರೆ.

“ಎಂಐಟಿಯಲ್ಲಿ ಈವರೆಗೆ ಕೊರೊನಾ ರೋಗಿಗಳ ಸಂಖ್ಯೆ 770 ಕ್ಕೆ ಏರಿದೆ, ಶುಕ್ರವಾರ 184 ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಮಾರ್ಚ್ 17 ರಂದು ಕಂಟೈನ್ಮೆಂಟ್ ವಲಯವೆಂದು ಘೋಷಿಸಲಾಗಿದ್ದು ಈ ಕ್ಯಾಂಪಸ್‌ನ್ನು ನಾವು ಈಗ ಸೀಲ್‌ಡೌನ್‌ ಮಾಡಿದ್ದೇವೆ” ಸುಧಾಕರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

”ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಆರೋಗ್ಯ ಸಚಿವ ಸುಧಾಕರ್‌ ಹೇಳಿದ್ದಾರೆ.

ಇದನ್ನೂ ಓದಿ : ಉಡುಪಿ : ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಇಳಿಕೆ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಕರಾವಳಿ ಜಿಲ್ಲೆಯ ಸಂಸ್ಥೆಗಳಲ್ಲಿ ಸುಮಾರು 6,000 ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಗಿದ್ದು ಈ ಪೈಕಿ ಅಧಿಕ ಮಂದಿ ಲಕ್ಷಣರಹಿತ ಕೊರೊನಾ ಸೋಂಕಿತರು ಎಂದು ತಿಳಿದು ಬಂದಿದೆ.

ಇನ್ನು “ಕೊರೊನಾ ರೋಗಿಗಳನ್ನು ಪ್ರತ್ಯೇಕಿಸಲಾಗಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಇತರೆ ಚಿಕಿತ್ಸೆ ನಿರ್ಬಂಧಿಸಲಾಗಿದೆ” ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸ್ಫೋಟ ಕಂಡು ಬಂದಿದ್ದು ಶುಕ್ರವಾರ ಒಂದೇ ದಿನ 210 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಈ ಪೈಕಿ 184 ಮಂದಿ ಮಣಿಪಾಲದ ಎಂಐಟಿ ಕ್ಯಾಂಪಸ್‌ನವರು ಆಗಿದ್ದಾರೆ. ಮಣಿಪಾಲದಲ್ಲಿ ಈವರೆಗೆ 706 ಮಂದಿಗೆ ಕೊರೊನಾ ದೃಢಪಟ್ಟಿದೆ. ಕಂಟೈನ್ಮೆಂಟ್ ಝೋನ್‌ನಲ್ಲಿರುವ ಎಲ್ಲರ ಸ್ವಾಬ್ ಟೆಸ್ಟ್ ನಡೆಸಲಾಗುತ್ತಿದೆ. ಎಂಐಟಿ ಕ್ಯಾಂಪಸ್‌ನಲ್ಲಿ ಪಾಸಿಟಿವಿಟಿ ರೇಟ್ ಆಘಾತಕಾರಿಯಾಗಿದ್ದು ಶೇ. 20 ರ ಆಸುಪಾಸು ಇಲ್ಲಿನ ಪಾಸಿಟಿವಿಟಿ ರೇಟ್‌ ಇದೆ.

ಇದನ್ನೂ ಓದಿ :ಉಡುಪಿ : ತಂಬಾಕು ಉತ್ಪನ್ನಗಳ ಬಳಕೆಯಿಂದ ದೂರವಿರಿ-ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸಂಬಂಧಪಟ್ಟ ಆದೇಶ ಕಟ್ಟುನಿಟ್ಟಾಗಿ ಜಾರಿಗೆ ತರುವ ಬಗ್ಗೆ 30 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ನಿರ್ದೇಶಿಸಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

1 hour ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

1 hour ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

2 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

2 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

2 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

3 hours ago