ಉಡುಪಿ: ಒಂದೆಡೆ ಕೊರೋನಾದಿಂದಾಗಿ ಒಂದಷ್ಟು ನಿಯಮಗಳು. ಮತ್ತೊಂದೆಡೆ ಎರಡು ದಿನಗಳಿಂದ ಸುರಿಯುತ್ತಿರುವ ಬಾರೀ ಮಳೆಯ ನಡುವೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಲೀಲೋತ್ಸವ ಸಾಂಪ್ರದಾಯಿಕವಾಗಿಯೇ ವಿಜೃಂಭಣೆಯಿಂದ ನಡೆಯಿತು.
ಮಳೆ ನಡುವೆಯೇ ಚಿನ್ನದ ರಥದಲ್ಲಿ ಶ್ರೀಕೃಷ್ಣನ ಮೃತ್ತಿಕಾ ಮೂರ್ತಿಯ ಉತ್ಸವ ನಡೆಸಲಾಯಿತು. ಕೊರೋನಾ ನಿಯಮದ ಅನುಸಾರ ಕೃಷ್ಣ ಮಠದ ಮತ್ತು ಅಷ್ಟಮಠಗಳ ಸಿಬ್ಬಂದಿಗಳು, ಗೊಲ್ಲ ಸಮುದಾಯದವರು ಕೃಷ್ಣನ ಉತ್ಸವದಲ್ಲಿ ಸಾಂಪ್ರದಾಯಿಕವಾಗಿ ಪಾಲ್ಗೊಳ್ಳುವ ಅವಕಾಶ ಕೊಡಲಾಗಿತ್ತು.
ರಥಬೀದಿಯ ಆರು ಗೇಟುಗಳಲ್ಲೂ ಪೊಲೀಸರ ನಿಯೋಜನೆ ಇದ್ದು, ಸಾರ್ವಜನಿಕರಿಗೆ ರಥಬೀದಿ ಪ್ರವೇಶ ನಿರ್ಬಂಧ ಹೇರಲಾಗಿತ್ತು.
ಈ ಹಿಂದಿನ ಸಂಪ್ರದಾಯಕ್ಕೆ ಯಾವುದೇ ಚ್ಯುತಿ ಬಾರದ ರೀತಿಯಲ್ಲಿ ಮೊಸರು ಕುಡಿಕೆ ಉತ್ಸವ ನಡೆದಿದ್ದು ಅಷ್ಟ ಮಠಾಧೀಶರು ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಮಂಗಳ ವಾದ್ಯಗಳ ಜೊತೆ ಕೃಷ್ಣ ದೇವರನ್ನು ಮೆರವಣಿಗೆ ಕೊಂಡೊಯ್ಯಲಾಯಿತಾದರೂ ಸಾರ್ವಜನಿಕರಿಗೆ ಉತ್ಸವದಲ್ಲಿ ಪಾಲ್ಗೊಳ್ಳಲು ಪೋಲಿಸರು ಅವಕಾಶ ನಿರಾಕರಿಸಿದ್ದರು.
ಅಷ್ಟಮಿಯ ಪ್ರಮುಖ ಆಕರ್ಷಣೆಯಾದ ವೇಷಗಳು ಈ ಬಾರಿ ಉತ್ಸವದಲ್ಲಿ ಕಂಡು ಬರಲಿಲ್ಲ. ಉತ್ಸವದ ಬಳಿಕ ಮಧ್ವ ಸರೋವರದಲ್ಲಿ ಮೃತ್ತಿಕಾ ವಿಗ್ರಹದ ವಿಸರ್ಜನೆ ನಡೆಸಲಾಯಿತು
ಶುಕ್ರವಾರದಂದು ಶ್ರೀ ಕೃಷ್ಣಮಠದಲ್ಲಿ ಪಾರಂಪರಿಕ ಸಂಪ್ರದಾಯಗಳಂತೆ ವಿಟ್ಲಪಿಂಡಿ ಉತ್ಸವ ನಡೆಯಿತು. ಕೋವಿಡ್ ನಿಯಮಾವಳಿಯಂತೆ ಭಕ್ತರಿಗೆ ರಥಬೀದಿಗೆ ಪ್ರವೇಶಕ್ಕೆ ಅವಕಾಶವಿರಲಿಲ್ಲ. ಮಠದ ವೈದಿಕರು, ಗೊಲ್ಲರು, ಸಿಬ್ಬಂದಿಗಳು ಮಾತ್ರ ಸರಳವಾಗಿ ಸಾಂಪ್ರದಾಯಿಕವಾಗಿ ಆಚರಣೆ ನಡೆಸಿದರು.
ಪರ್ಯಾಯ ಅದಮಾರು ಮಠಾಧೀಶರು ಕಡಗೋಲು ಕೃಷ್ಣನ ಮೂರ್ತಿಯನ್ನು ಚಿನ್ನದ ರಥದಲ್ಲಿಟ್ಟು ಪ್ರದಕ್ಷಿಣೆ ತರುವಾಗ ಮಠದ ಗೊಲ್ಲರು ಮೊಸರುಕುಡಿಕೆಗಳನ್ನು ಒಡೆಯುತ್ತಾ ಸಾಗಿದರು.
ಒಟ್ಟಿನಲ್ಲಿ ಈ ಬಾರಿ ವಿಟ್ಲಪಿಂಡಿ ಸಂಪ್ರದಾಯಬದ್ಧವಾಗಿ ನೆರವೇರಿದ್ದು ಸರಳವಾಗಿ ನಡೆಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…