ಉಡುಪಿ : ಕೊರೊನಾ ಹಾಗೂ ವರುಣನ ಅರ್ಭಟದ ಮಧ್ಯೆ ಕೃಷ್ಣ ನಗರಿಯಲ್ಲಿ ಸರಳ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಲೀಲೋತ್ಸವ ಸಂಪನ್ನ -Vishwanews24

ಉಡುಪಿ : ಕೊರೊನಾ ಹಾಗೂ ವರುಣನ ಅರ್ಭಟದ ಮಧ್ಯೆ ಕೃಷ್ಣ ನಗರಿಯಲ್ಲಿ ಸರಳ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಲೀಲೋತ್ಸವ ಸಂಪನ್ನ -Vishwanews24

ಉಡುಪಿ: ಒಂದೆಡೆ ಕೊರೋನಾದಿಂದಾಗಿ ಒಂದಷ್ಟು ನಿಯಮಗಳು. ಮತ್ತೊಂದೆಡೆ ಎರಡು ದಿನಗಳಿಂದ ಸುರಿಯುತ್ತಿರುವ ಬಾರೀ ಮಳೆಯ ನಡುವೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಲೀಲೋತ್ಸವ ಸಾಂಪ್ರದಾಯಿಕವಾಗಿಯೇ ವಿಜೃಂಭಣೆಯಿಂದ ನಡೆಯಿತು.

ಮಳೆ ನಡುವೆಯೇ ಚಿನ್ನದ ರಥದಲ್ಲಿ ಶ್ರೀಕೃಷ್ಣನ ಮೃತ್ತಿಕಾ ಮೂರ್ತಿಯ ಉತ್ಸವ ನಡೆಸಲಾಯಿತು. ಕೊರೋನಾ ನಿಯಮದ ಅನುಸಾರ ಕೃಷ್ಣ ಮಠದ ಮತ್ತು ಅಷ್ಟಮಠಗಳ ಸಿಬ್ಬಂದಿಗಳು, ಗೊಲ್ಲ ಸಮುದಾಯದವರು ಕೃಷ್ಣನ ಉತ್ಸವದಲ್ಲಿ ಸಾಂಪ್ರದಾಯಿಕವಾಗಿ ಪಾಲ್ಗೊಳ್ಳುವ ಅವಕಾಶ ಕೊಡಲಾಗಿತ್ತು.

ರಥಬೀದಿಯ ಆರು ಗೇಟುಗಳಲ್ಲೂ ಪೊಲೀಸರ ನಿಯೋಜನೆ ಇದ್ದು, ಸಾರ್ವಜನಿಕರಿಗೆ ರಥಬೀದಿ ಪ್ರವೇಶ ನಿರ್ಬಂಧ ಹೇರಲಾಗಿತ್ತು.
ಈ ಹಿಂದಿನ ಸಂಪ್ರದಾಯಕ್ಕೆ ಯಾವುದೇ ಚ್ಯುತಿ ಬಾರದ ರೀತಿಯಲ್ಲಿ ಮೊಸರು ಕುಡಿಕೆ ಉತ್ಸವ ನಡೆದಿದ್ದು ಅಷ್ಟ ಮಠಾಧೀಶರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಮಂಗಳ ವಾದ್ಯಗಳ ಜೊತೆ ಕೃಷ್ಣ ದೇವರನ್ನು ಮೆರವಣಿಗೆ ಕೊಂಡೊಯ್ಯಲಾಯಿತಾದರೂ ಸಾರ್ವಜನಿಕರಿಗೆ ಉತ್ಸವದಲ್ಲಿ ಪಾಲ್ಗೊಳ್ಳಲು ಪೋಲಿಸರು ಅವಕಾಶ ನಿರಾಕರಿಸಿದ್ದರು.

ಅಷ್ಟಮಿಯ ಪ್ರಮುಖ ಆಕರ್ಷಣೆಯಾದ ವೇಷಗಳು ಈ ಬಾರಿ ಉತ್ಸವದಲ್ಲಿ ಕಂಡು ಬರಲಿಲ್ಲ. ಉತ್ಸವದ ಬಳಿಕ ಮಧ್ವ ಸರೋವರದಲ್ಲಿ ಮೃತ್ತಿಕಾ ವಿಗ್ರಹದ ವಿಸರ್ಜನೆ ನಡೆಸಲಾಯಿತು

ಶುಕ್ರವಾರದಂದು ಶ್ರೀ ಕೃಷ್ಣಮಠದಲ್ಲಿ ಪಾರಂಪರಿಕ ಸಂಪ್ರದಾಯಗಳಂತೆ ವಿಟ್ಲಪಿಂಡಿ ಉತ್ಸವ ನಡೆಯಿತು. ಕೋವಿಡ್ ನಿಯಮಾವಳಿಯಂತೆ ಭಕ್ತರಿಗೆ ರಥಬೀದಿಗೆ ಪ್ರವೇಶಕ್ಕೆ ಅವಕಾಶವಿರಲಿಲ್ಲ. ಮಠದ ವೈದಿಕರು, ಗೊಲ್ಲರು, ಸಿಬ್ಬಂದಿಗಳು ಮಾತ್ರ ಸರಳವಾಗಿ ಸಾಂಪ್ರದಾಯಿಕವಾಗಿ ಆಚರಣೆ ನಡೆಸಿದರು.

ಪರ್ಯಾಯ ಅದಮಾರು ಮಠಾಧೀಶರು ಕಡಗೋಲು ಕೃಷ್ಣನ ಮೂರ್ತಿಯನ್ನು ಚಿನ್ನದ ರಥದಲ್ಲಿಟ್ಟು ಪ್ರದಕ್ಷಿಣೆ ತರುವಾಗ ಮಠದ ಗೊಲ್ಲರು ಮೊಸರುಕುಡಿಕೆಗಳನ್ನು ಒಡೆಯುತ್ತಾ ಸಾಗಿದರು.

ಒಟ್ಟಿನಲ್ಲಿ ಈ ಬಾರಿ ವಿಟ್ಲಪಿಂಡಿ ಸಂಪ್ರದಾಯಬದ್ಧವಾಗಿ ನೆರವೇರಿದ್ದು ಸರಳವಾಗಿ ನಡೆಯಿತು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago