Featured

ಉಡುಪಿ : ಕೊರೊನಾ ಹೇಳಿಕೊಟ್ಟ ಸ್ವಾವಲಂಬಿ ಪಾಠ ನಿರಂತರ ಜೀವನದಲ್ಲಿ ಪಾಲಿಸೋಣ : ಈಶಪ್ರೀಯ ತೀರ್ಥ ಸ್ವಾಮೀಜಿ – Vishwanews24

ಕೋವಿಡ್-19 ಎರಡು ವರ್ಷ ಸಾಕಷ್ಟು ಪಾಠ ಕಲಿಸಿದೆ..

ನಮ್ಮ ಊರಿನ ಸಂಸ್ಕೃತಿ ಉಳಿಯಲು ನಾವೇ ಉದ್ಯೋಗ ಸೃಷ್ಟಿ ಮಾಡಬೇಕು..

ಯಾವುದೋ ನಾಡಿಗೆ ಹೋಗುವ ಬದಲು ಇಲ್ಲೇ ಇದ್ದು ಉದ್ಯೋಗ ಮಾಡಿಕೊಂಡು ಇರಬೇಕು..

ಉಡುಪಿ: ಯಾವುದೋ ಊರು, ಯಾವುದೋ ನಾಡಿಗೆ ಹೋಗುವ ಬದಲು ಇಲ್ಲೇ ಇದ್ದು ಉದ್ಯೋಗ ಮಾಡಿಕೊಂಡು ಇರಬೇಕು ಎಂದು ಉಡುಪಿ ಪರ್ಯಾಯ ಮಠಾಧೀಶ ಈಶಪ್ರೀಯ ತೀರ್ಥ ಸ್ವಾಮೀಜಿ ಹೇಳಿದರು.

ಎರಡು ವರ್ಷದ ಪರ್ಯಾಯ ಪೂಜಾಧಿಕಾರ ಬಿಟ್ಟುಕೊಡಲು ಒಂದು ವಾರ ಬಾಕಿಯಿದ್ದು, ಈ ಕುರಿತು ಕೃಷ್ಣ ಮಠದಲ್ಲಿ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಸ್ವಾಮೀಜಿ ಮಾತನಾಡಿದ್ದು, ನಮ್ಮ ಊರಿನ ಸಂಸ್ಕೃತಿ ಉಳಿಯಲು ನಾವೇ ಉದ್ಯೋಗ ಸೃಷ್ಟಿ ಮಾಡಬೇಕು. ಯಾವುದೋ ಊರು, ಯಾವುದೋ ನಾಡಿಗೆ ಹೋಗುವ ಬದಲು ಇಲ್ಲೇ ಇದ್ದು ಉದ್ಯೋಗ ಮಾಡಿಕೊಂಡು ಇರಬೇಕು. ಕುಟುಂಬ ಬಳಗದ ಜೊತೆ ಯುವ ಜನಾಂಗ ಇರಬೇಕಾದ ಅನಿವಾರ್ಯತೆ ಇದೆ ಎಂದರು.

ಕೋವಿಡ್-19 ಎರಡು ವರ್ಷ ಸಾಕಷ್ಟು ಪಾಠ ಕಲಿಸಿದೆ. ಕೊರೊನಾ ಹೇಳಿಕೊಟ್ಟ ಸ್ವಾವಲಂಬಿ ಪಾಠ ನಿರಂತರ ಜೀವನದಲ್ಲಿ ಪಾಲಿಸೋಣ. ನಮ್ಮ ಊರು, ನಮ್ಮ ಜನರ ಕಾಳಜಿ ವಹಿಸೋಣ ಎಂದು ಸಂದೇಶ ನೀಡಿದರು.

ಕೃಷ್ಣ ಮಠದ ಆವರಣ ಬದಲಾವಣೆ ಮಾಡಿದ್ದೇವೆ. ಶುಚಿತ್ವ ಪ್ಲ್ಯಾಸ್ಟಿಕ್ ಬಳಕೆ ಕಡಿಮೆ ಮಾಡುವ ಬಗ್ಗೆ ಅರಿವು ಮೂಡಿಸಿದ್ದೇವೆ. ಆ ನಿಟ್ಟಿನಲ್ಲಿ ಎರಡು ವರ್ಷ ಪ್ರಯತ್ನ ಮಾಡಿದ್ದೇವೆ. ಜನರಲ್ಲಿ ಸಾಕಷ್ಟು ಬದಲಾವಣೆ ನೋಡಿದ್ದೇವೆ. ತಮ್ಮ ಜೀವನದಲ್ಲಿ ಅನುಷ್ಠಾನ ಮಾಡಿಕೊಂಡಿದ್ದೇವೆ ಎಂದರು.

ಮನುಷ್ಯ ಜೀವನದಲ್ಲಿ ಯಾತ್ರೆ ಮಾಡುವ ಸಂಸ್ಕೃತಿ ಬೆಳೆಸಬೇಕು. ಹೊರಗಿನದ್ದು, ನೋಡಿ ಉತ್ತಮವಾದದನ್ನು ತೆಗೆದುಕೊಂಡು ನಮ್ಮತನ ಉಳಿಸುವ ಅಗತ್ಯ ಇದೆ. ಅದಮಾರು ಮಠದ ಎರಡು ವರ್ಷದ ಪರ್ಯಾಯ ಸಂದರ್ಭದಲ್ಲಿ ಮಾಧ್ಯಮ ಚೆನ್ನಾಗಿ ಕೆಲಸ ಮಾಡಿದೆ. ಮಠದ ಅಭಿಪ್ರಾಯ ಜನಕ್ಕೆ ಮುಟ್ಟಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಎರಡು ವರುಷಗಳ ಹಿಂದೆ ಪರ್ಯಾಯ ಪೀಠ ಏರುವ ಸಂದರ್ಭದಲ್ಲಿ ಯಾವುದೇ ಸಂಕಲ್ಪ ಮಾಡಿರಲಿಲ್ಲ. ಕಾಲ ಕಾಲಕ್ಕೆ ಆಗಬೇಕಾದ ಕೆಲಸ ಮಾಡಿದ್ದೇವೆ. ಎಲ್ಲವೂ ಕೃಷ್ಣನ ಪಾದಕ್ಕೆ ಸಲ್ಲಿಕೆಯಾಗಿದೆ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago