Featured

ಉಡುಪಿ: ಕೊರೋನಾ ಮಾರ್ಗಸೂಚಿಯಂತೆ ಜಿಲ್ಲೆಯಾದ್ಯಂತ ಕ್ರೈಸ್ತ ಭಾಂಧವರಿಂದ ಮೊಂತಿ ಫೆಸ್ತ್‌ ಆಚರಣೆ -Vishwanews24

ಉಡುಪಿ: ಕೊರೋನಾ ಮಾರ್ಗಸೂಚಿಯಂತೆ ಜಿಲ್ಲೆಯಾದ್ಯಂತ ಕ್ರೈಸ್ತ ಭಾಂಧವರಿಂದ ಮೊಂತಿ ಫೆಸ್ತ್‌ ಆಚರಣೆ -Vishwanews24

 

ಉಡುಪಿ: ಕೊರೋನಾ ಭೀತಿಯ ನಡುವೆ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ತ್ ಅನ್ನು ಜಿಲ್ಲೆಯಾದ್ಯಂತ ಕ್ರೆಸ್ತ ಸಮುದಾಯದ ಜನರು ಭಕ್ತಿ ಭಾವದಿಂದ ಸರಳ ರೀತಿಯಲ್ಲಿ ಬುಧವಾರ ಆಚರಿಸಿದರು.

ಕೋರೊನಾ ಹಿನ್ನಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಸಾರ್ವಜನಿಕವಾಗಿ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿ ಮೆರವಣಿಗೆಯಲ್ಲಿ ತರುವುದನ್ನು ನೀಷೇಧಿಸಿದ್ದು ಧರ್ಮಗುರುಗಳು ಚರ್ಚಿನಲ್ಲಿಯೇ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು.

ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಭತ್ತದ ತೆನೆಯನ್ನು ಆರ್ಶಿವದಿಸಿ ಪವಿತ್ರ ಬಲಿಪೂಜೆಯಲ್ಲಿ ಪಾಲ್ಗೊಂಡರು. ಪವಿತ್ರ ಬಲಿಪೂಜೆಯಲ್ಲಿ ಧರ್ಮಗುರುಗುಳು ಕುಟುಂಬ ಜೀವನ ಹಾಗೂ ಸಮಾಜದಲ್ಲಿ ಮಹಿಳೆಯ ಸ್ಥಾನಮಾನದ ಕುರಿತು ಪ್ರವಚನ ನೀಡಿದರು.

ಉಡುಪಿ ಕ್ರೆಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ ಅವರು ಮೂಡುಬೆಳ್ಳೆ ಸಮೀಪದ ಕುಂತಲನಗರ ಸಂತ ಅಂತೋನಿಯವರ ಚರ್ಚಿನಲ್ಲಿ ಹಬ್ಬದ ಬಲಿಪೂಜೆ ಅರ್ಪಿಸಿ ಹೊಸ ತೆನೆಗಳನ್ನು ಆಶೀರ್ವದಿಸಿ ಹಬ್ಬದ ಸಂದೇಶ ನೀಡಿದರು.

ಉಡುಪಿಯ ಶೋಕ ಮಾತಾ ಇಗರ್ಜಿಯಲ್ಲಿ ಜರುಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಂ. ಚಾರ್ಲ್ಸ್‌ ಮಿನೇಜಸ್‌ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಲ್ಯಾಣಪುರ ಮಿಲಾಗ್ರಿಸ್‌ ಕ್ಯಾಥೆಡ್ರಲ್‌ ನಲ್ಲಿ ವಂ|ವಲೇರಿಯನ್‌ ಮೆಂಡೊನ್ಸಾ, ಶಿರ್ವ ಆರೋಗ್ಯ ಮಾತಾ ಇಗರ್ಜಿಯಲ್ಲಿ ವಂ|ಡೆನಿಸ್‌ ಡೆಸಾ, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ವಂ|ಸ್ಟಾನಿ ತಾವ್ರೋ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್‌ ಬಾಸಿಲಿಕಾದಲ್ಲಿ ವಂ|ಆಲ್ಬನ್‌ ಡಿಸೋಜಾ ನೇತೃತ್ವದಲ್ಲಿ ಹಬ್ಬದ ಪ್ರಯುಕ್ತ ಬಲಿಪೂಜೆ ನಡೆದವು. ಇದಲ್ಲದೆ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಸಹ ಹಬ್ಬದ ಬಲಿಪೂಜೆಯನ್ನು ಆಯಾಚರ್ಚುಗಳ ಧರ್ಮಗುರುಗಳ ನೇತೃತ್ವದಲ್ಲಿ ನಡೆದವು.

ಬಲಿಪೂಜೆಯ ಬಳಿಕ ಧರ್ಮಗುರುಗಳು ಪ್ರತಿ ಕುಟುಂಬಕ್ಕೆ ಆಶೀರ್ವದಿಸಿದ ಹೊಸ ಭತ್ತದ ತೆನೆಯನ್ನು ನೀಡಿ ಹರಸಿದರು. ಇದೇ ವೇಳೆ ಚಿಕ್ಕ ಮಕ್ಕಳಿಗೆ ಸಿಹಿತಿಂಡಿ, ಕಬ್ಬುಗಳನ್ನು ಸಹ ವಿತರಿಸಲಾಯಿತು. ಇಗರ್ಜಿಯಿಂದ ಭಕ್ತಿಯಿಂದ ಕೊಂಡು ಬಂದ ಭತ್ತದ ತೆನೆಯನ್ನು ಕುಟುಂಬದ ಹಿರಿಯರು ಮನೆಗೆ ತಂದು ದೇವರ ಪೀಠದ ಮೇಲಿಟ್ಟು ಪ್ರಾರ್ಥನೆ ಸಲ್ಲಿಸಿ, ಹೊಸ ಭತ್ತದ ತೆನೆಗಳನ್ನು ಸುಲಿದು ಕುಟುಂಬದ ಸದಸ್ಯರೊಂದಿಗೆ ಪಾಯಸ ಅಥವಾ ಹಾಲಿನೊಂದಿಗೆ ಸೇವಿಸಿದರು. ಅಲ್ಲದೆ ಮನೆಗಳಲ್ಲಿ ಸಂಪೂರ್ಣ ಸಸ್ಯಹಾರದ ಭೋಜನವನ್ನು ತಯಾರಿಸಿ ಕುಟುಂಬದ ಎಲ್ಲಾ ಸದಸ್ಯರು ನೆಲದ ಮೇಲೆ ಕುಳಿತು ಬಾಳೆ ಎಲೆಯಲ್ಲಿ ಸೇವಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago