ಉಡುಪಿ : ಕೊರೋನಾ ವೈರಸ್ ತಡೆಗೆ ಮುಂಜಾಗ್ರತಾ ಕ್ರಮ : ಜಿಲ್ಲೆಯಾದ್ಯಂತ 144 (3) ಸೆಕ್ಷನ್ ನಿಷೇಧಾಜ್ಞೆ ಜಾರಿ -Vishwanews24

ಉಡುಪಿ : ಕೊರೋನಾ ವೈರಸ್ ತಡೆಗೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಈ ಮೂಲಕ ಕೊರೋನಾ ವೈರಸ್ ಸೋಂಕು ಜಿಲ್ಲೆಯಲ್ಲಿ ಹರಡದಂತೆ ಮುನ್ನೆಚ್ಚರಿಕಾ ಕ್ರಮವನ್ನು ಜಿಲ್ಲಾಧಿಕಾರಿ ಜಗದೀಶ್ ಕೈಗೊಂಡು, ಆದೇಶ ಹೊರಡಿಸಿದ್ದಾರೆ.

ಉಡುಪಿಯಲ್ಲಿ ಕೊರೊನಾ ವೈರಸ್ ಸೋಂಕಿನ ಶಂಕಿತ ಪ್ರಕರಣಗಳು ದಿನೇ ದಿನೇ ಹೆಚ್ಚು ವರದಿಯಾಗುತ್ತಿವೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಂಡಿರುವ ಜಿಲ್ಲಾಢಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು, ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಜಿಲ್ಲೆಯ ಬೀಜ್, ಪ್ರವಾಸಿತಾಣಗಳಿಗೆ ಪ್ರವಾಸಿಗ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ. ಪೂಜೆ, ವಿಶೇಷ ಸೇವೆಗಳಿಗೆ ಅವಕಾಶ ಇಲ್ಲ. ಜನರ ಆರೋಗ್ಯದ ಹಿತದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಕೊರೋನಾ ತಡೆಗೆ ಮುಂಜಾಗ್ರತಾ ಕ್ರಮ ಎಂಬುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

16 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago