ಉಡುಪಿ: ಇತ್ತೀಚಿಗೆ ಅಧಿಕಾರಕ್ಕಾಗಿ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದರೆ ನಿಜವಾಗಿಯೂ ನಾಚಿಕೆ ಯಾಗುತ್ತದೆ. ಕೋವಿಡ್- 19 ನಿಂದ ಕಳೆದ ಒಂದುವರೆ ವರ್ಷದಿಂದ ರಾಜ್ಯದ ಜನರು ಹೈರಾಣರಾಗಿದ್ದಾರೆ. ಅದರಲ್ಲೂ ಮಧ್ಯಮವರ್ಗ, ಬಡವರನ್ನು ಕೇಳುವವರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಕೊರೋನಾ ಹಾವಳಿಯಿಂದ ನಾವುಗಳು ಬದುಕಬಲ್ಲೆವೇ? ಎಂಬ ಭಯದಲ್ಲಿ ಇರುವ ಮತದಾರರಿಗೆ ಧೈರ್ಯ ತುಂಬುವ ಬದಲು, ಇಂಥಾ ತುರ್ತು ಪರಿಸ್ಥಿತಿಯಲ್ಲಿಯೂ ತಮ್ಮ ಅಧಿಕಾರದ ಆಸೆಗಾಗಿ ಮುಖ್ಯಮಂತ್ರಿ ಯನ್ನು ಬದಲಾಯಿಸಲು ಹೊರಟಿರುವುದು ನಾಚಿಕೆಯಾಗಬೇಕು. ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಜನಸೇವಕರೇ ಹೊರತು ರಾಜನಲ್ಲ!, ಎಂಬುದನ್ನು ಮನಗಾಣಬೇಕು.
ಜನರ ಹಿತಾಸಕ್ತಿಗಿಂತ ಅಧಿಕಾರವೇ ನಿಮಗೆ ಮುಖ್ಯವಾದರೆ, ಕೂಡಲೇ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ಮರು ಚುನಾವಣೆಯಲ್ಲಿ ಆಯ್ಕೆಯಾಗಿ ಎಂದು ರಾಜ್ಯ ಬಿಜೆಪಿ ಶಾಸಕರಿಗೆ ಶ್ರೀರಾಮಸೇನೆಯ ಉಡುಪಿ ಜಿಲ್ಲಾಧ್ಯಕ್ಷರಾದ ಜಯರಾಂ ಅಂಬೆಕಲ್ಲು ಆಗ್ರಹಿಸಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…