Featured

ಉಡುಪಿ : ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ – Vishwanews24

ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ

ಉಡುಪಿ: ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಲವ್ ಜಿಹಾದ್ ಕುರಿತಂತೆ ಮೂಡಿ ಬಂದ ಈ ಸಿನಿಮಾದ ಬಿಡುಗಡೆಗೆ ಪಶ್ಚಿಮ ಬಂಗಾಳದಲ್ಲಿ ನಿಷೇಧ ಹೇರಿರುವ ಘಟನೆಯೂ ನಡೆದಿದೆ. ಅಲ್ಲದೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ ನೀಡಿರುವ ಬೆಳವಣಿಗೆಯೂ ನಡೆದಿದೆ. ಸಾಕಷ್ಟು ಟೀಕೆ, ಆರೋಪಗಳ ನಡುವೆ ಈ ಸಿನಿಮಾ ಮಾತ್ರ ಗಲ್ಲಾ ಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದೆ.

ಹಿಂದುಪರ ಸಂಘಟನೆಗಳು ಸೇರಿದಂತೆ ಅನೇಕರು ಒಂದು ಬಾರಿ ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ. ಮತಾಂತರ ಪಿಡುಗಿನ ಬಗ್ಗೆ ಅರಿತುಕೊಳ್ಳಿ ಎಂಬ ಸಂದೇಶ ರವಾನಿಸಿದ್ದಾರೆ. ಇದೀಗ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ
ಕೊಲ್ಲೂರು ಕ್ಷೇತ್ರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಕೇರಳ ರಾಜ್ಯದಿಂದ ಭಕ್ತರು ಮೂಕಾಂಬಿಕಾ ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಹೀಗಾಗಿ ದೇವಾಲಯದ ದ್ವಾರ ಹಾಗೂ ಆವರಣ ಭಾಗದಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಸಿನಿಮಾದ ಕುರಿತಾದ ಬ್ಯಾನರ್ ಅಳವಡಿಸಿದ್ದಾರೆ. ‘ಮಲಯಾಳಿ ಭಕ್ತರಿಗೆ ಸ್ವಾಗತ, ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ದಿ ಕೇರಳ ಸ್ಟೋರಿ ನೋಡಿ’ ಎಂದು ಬ್ಯಾನರ್​ನಲ್ಲಿ ಬರೆಯಲಾಗಿದೆ.

ಸದ್ಯ ಆಂಗ್ಲ ಭಾಷೆಯಲ್ಲಿ ಅಳವಡಿಸಿರುವ ಈ ಬ್ಯಾನರ್ ಕೊಲ್ಲೂರು ದೇವಸ್ಥಾನಕ್ಕೆ ಬರುವ ಭಕ್ತರ ಗಮನ ಸೆಳೆಯುತ್ತಿದೆ. ವಿನೋದ್ ಕೊಲ್ಲೂರು, ವಿಜಯ ಬಳಗಾರ್, ಸಂತೋಷ್ ಭಟ್, ಪ್ರಕಾಶ್ ಹಳ್ಳಿ ಬೇರು, ಹರೀಶ್ ಶೆಟ್ಟಿ ನೇತೃತ್ವದಲ್ಲಿ ಈ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

3 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

11 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

11 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

12 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

12 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

12 hours ago