Featured

ಉಡುಪಿ : ಕೋರ್ಟ್​ ಮೆಟ್ಟಿಲೇರಲಾಗದ ವೃದ್ಧೆಯ ಬಳಿ ಬಂದು ವಿಚಾರಣೆ ನಡೆಸಿದ ನ್ಯಾಯಾಧೀಶರು – Vishwanews24

ಉಡುಪಿ : ಕೋರ್ಟ್​ ಮೆಟ್ಟಿಲೇರಲಾಗದ ವೃದ್ಧೆಯ ಬಳಿ ಬಂದು ವಿಚಾರಣೆ ನಡೆಸಿದ ನ್ಯಾಯಾಧೀಶರು

ಉಡುಪಿ :ನ್ಯಾಯಾಲಯದ ಮೆಟ್ಟಿಲು ಹತ್ತಲಾಗದೆ ರಿಕ್ಷಾದಲ್ಲಿ ಕುಳಿತ 80 ವರ್ಷದ ವೃದ್ದೆಯ ಬಳಿಗೆ ನ್ಯಾಯಾಧೀಶರು ತೆರಳಿ, ಪ್ರಕರಣದ ಹೇಳಿಕೆ ಆಲಿಸಿರುವ ಅಪರೂಪದ ಘಟನೆ ಉಡುಪಿಯಲ್ಲಿ ನಡೆದಿದೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೆಶನದ ಮೇರೆಗೆ ಜೂನ್ 25ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ನ್ನು ಆಯೋಜಿಸಲಾಗಿತ್ತು.

2011ರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕ್ ಅದಾಲತ್‌ನಲ್ಲಿ ಭಾಗಿಯಾಗಲು 80 ವರ್ಷದ ವೃದ್ದೆ ದೇವಕಿ ಶೆಡ್ತಿ ಆಟೋ ರಿಕ್ಷಾದಲ್ಲಿ ನ್ಯಾಯಾಲಯಕ್ಕೆ ತೆರಳಿದ್ದರು. ಈ ವೇಳೆ, ಆಕೆಗೆ ನ್ಯಾಯಾಲಯದ ಮೆಟ್ಟಿಲು ಹತ್ತಲಾಗದ ಕಾರಣ, ತಮ್ಮ ಮಗಳು ಜಯಂತಿಯವರಿಗೆ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ಅಧಿಕಾರವನ್ನು ನೀಡಿದ್ದರು.

ಜಿಪಿಎ ನೀಡಿದ್ದರಿಂದ ವೃದ್ದೆ ದೇವಕಿ ಶೆಡ್ತಿ ಪರವಾಗಿ ಅವರ ಮಗಳು ವಾದವನ್ನು ಆಲಿಸಲು ನ್ಯಾಯಾಲಯದ ಒಳಗೆ ಹೋಗಿದ್ದರು. ವಿಷಯ ತಿಳಿದ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಜೀತು ಆರ್ ಎಸ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಶರ್ಮಿಳಾ ಎಸ್ ಮತ್ತು ನ್ಯಾಯವಾದಿ ಮಿತೇಶ್ ಶೆಟ್ಟಿ ಹಾಗೂ ಎರಡು ಕಡೆಯ ವಕೀಲರುಗಳು, ದೇವಕಿ ಶೆಡ್ತಿ ಕುಳಿತಿದ್ದ ರಿಕ್ಷಾದ ಬಳಿ ಬಂದು ಅವರ ಹೇಳಿಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಪ್ರಕರಣವನ್ನು ಇತ್ಯರ್ಥಗೊಳಿಸಿದ್ದಾರೆ.

ನ್ಯಾಯಾಧೀಶರ ಸರಳತೆಗೆ ರಾಜ್ಯದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

ಈ ಬಾರಿಯ ಅದಾಲತ್‌ನಲ್ಲಿ ಒಂದೇ ದಿನ ಒಟ್ಟು 30,773 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

23 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

23 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

23 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

24 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

24 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago