Featured

ಉಡುಪಿ : ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ನಿಯಂತ್ರಣಕ್ಕೆ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಲು ಸನ್ನದ್ಧರಾಗಿ: ಜಿಲ್ಲಾಧಿಕಾರಿ – Vishwanews24

ಉಡುಪಿ : ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ನಿಯಂತ್ರಣಕ್ಕೆ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಲು ಸನ್ನದ್ಧರಾಗಿ: ಜಿಲ್ಲಾಧಿಕಾರಿ – Vishwanews24

ಉಡುಪಿ, : ಕೋವಿಡ್ ಸೋಂಕಿನ ರೂಪಾಂತರ ವೈರಸ್ ಆದ ಓಮಿಕ್ರಾನ್ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ಈ ಹಿಂದೆ ಕೋವಿಡ್ ಅಲೆಗಳನ್ನು ನಿಯಂತ್ರಿಸಲು ರಚಿಸಿರುವ ಸಮಿತಿಗಳನ್ನು ಪುನಾರಾರಂಭಿಸಿ, ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ತಿಳಿಸಿದ್ದಾರೆ.

ಅವರು ಬುಧವಾರ ಸಂಜೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ, ಜಿಲ್ಲೆಯಲ್ಲಿ ಓಮಿಕ್ರಾನ್ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ನಡೆದ ವರ್ಚುವಲ್ ಮೀಟಿಂಗ್ ನಲ್ಲಿ ಮಾತನಾಡಿದರು.ಈಗಾಗಲೇ ವಿಶ್ವದ 11 ದೇಶಗಳಲ್ಲಿ ಹೊಸ ರೂಪಾಂತರಿ ತಳಿಯಾದ ಓಮಿಕ್ರಾನ್ ವ್ಯಾಪಕವಾಗಿ ಹರಡಿದ್ದು, ವಿದೇಶಿ ಪ್ರಯಾಣಿಕರಿಂದ ರಾಜ್ಯದಲ್ಲಿ ಸಹ ಹರಡುವ ಸಾಧ್ಯತೆಗಳಿದ್ದು, ಹೊಸ ತಳಿಯು ಹರಡುವ ವೇಗವು ಹೆಚ್ಚಿರುವ ಹಿನ್ನಲೆ, ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವುದು ಅವಶ್ಯವಾಗಿದೆ ಎಂದರು.

ಓಮಿಕ್ರಾನ್ ದೃಡಪಟ್ಟ ರಾಷ್ಟçಗಳಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು ತಪ್ಪದೇ ಪರೀಕ್ಷೆಗೆ ಒಳಪಡಿಸಬೇಕು. ಒಂದೊಮ್ಮೆ ಅವರ ಪರೀಕ್ಷಾ ವರದಿಯು ನೆಗೆಟಿವ್ ಬಂದಲ್ಲಿ ಅವರನ್ನು 7 ದಿನಗಳ ಹೋಂ ಕ್ವಾರಂಟೈನ್ ಮಾಡಬೇಕು. ಪಾಸಿಟಿವ್ ಬಂದಲ್ಲಿ ಅವರುಗಳನ್ನು 14 ದಿನಗಳ ಕಾಲ ಸಾಂಸ್ಥಿಕ ಐಸೋಲೇಶನ್/ಆಸ್ಪತ್ರೆಗೆ ದಾಖಲಿಸಬೇಕು ಎಂದ ಅವರು, ಕಳೆದ 15 ದಿನಗಳಿಂದ ಜಿಲ್ಲೆಗೆ ವಿದೇಶದಿಂದ ಬಂದಿರುವವರ ಮಾಹಿತಿಗಳನ್ನು, ಮಂಗಳೂರು ಹಾಗೂ ಬೆಂಗಳೂರು ವಿಮಾನ ನಿಲ್ಧಾಣಗಳಿಂದ ಪಡೆದು, ಅವರುಗಳನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದರು.

ಜನ ಸಾಮಾನ್ಯರು ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಪಾಡುವುದು, ಕೈ ತೊಳೆಯುವುದು ಸೇರಿದಂತೆ ಕೋವಿಡ್ ನ ಸರಳ ಮಾರ್ಗಸೂಚಿಗಳನ್ನು ತಪ್ಪದೇ ಪಾಲನೆ ಮಾಡಬೇಕು. ತಮ್ಮ ನೆರೆ ಹೊರೆಯವರು ವಿದೇಶದಿಂದ ಬಂದಿದ್ದಲ್ಲಿ ಅವರ ಮಾಹಿತಿಗಳನ್ನು ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂದರು.

ಮುಂದಿನ ದಿನಗಳಲ್ಲಿ ಸೋಂಕು ಹೆಚ್ಚಾದಲ್ಲಿ ಅವುಗಳ ನಿರ್ವಹಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು. ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ಸ್ಥಳಗಳನ್ನು ಗುರುತಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಚಿಕಿತ್ಸೆಗೆ ಬೆಡ್ಗಳ ಕೊರತೆಯಾಗದಂತೆ ಮಾಹಿತಿಗಳನ್ನು ಹಾಗೂ ಬೆಡ್ ಲಭ್ಯತೆಗಳ ಬಗ್ಗೆ ಈಗಲೇ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ, ಪರಿಶೀಲಿಸಿ ಆಕ್ಸಿಜನ್ ಸಹಿತಿ / ರಹಿತ, ಐಸಿಯು ಬೆಡ್ಗಳು ಹಾಗೂ ಅವುಗಳ ನರ‍್ವಹಣಾ ಮಾಹಿತಿಯನ್ನು ಸಂಬಂದಿಸಿದ ಸಮಿತಿಯವರು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದರು.

ಕೋವಿಡ್ ಪರೀಕ್ಷಾ ನಿರ್ವಹಣಾ ಸಮಿತಿಯು ಪ್ರತಿದಿನ ಕೋವಿಡ್ ಪರೀಕ್ಷೆಯ ಸ್ವಾಬ್ ಸಂಗ್ರಹವನ್ನು ಅದೇ ದಿನ ಮಧ್ಯಾಹ್ನ ಹಾಗೂ ಸಂಜೆ 2 ಪಾಳಿಯಲ್ಲಿ ಟೆಸ್ಟಿಂಗ್ ಸೆಂಟರ್ ಗೆ ರವಾನಿಸಿ, ಅಂದಿನ ದಿನದ ಪರೀಕ್ಷೆಯ ವರದಿಯುನ್ನು ಅಂದೇ ನೀಡುವಂತೆ ಕಾರ್ಯ ಪ್ರವೃತ್ತರಾಗಬೇಕು ಎಂದರು.

3 ಮತ್ತು 4 ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡು ಬಂದಲ್ಲಿ ಕೂಡಲೇ ಆ ಪ್ರದೇಶವನ್ನು ಮೈಕ್ರೋ ಕಂಟೈನ್ಮೆಂಟ್ ವಲಯ ಎಂದು ಘೋಷಿಸಬೇಕು. ಒಂದೇ ಪ್ರಕರಣ ಕಂಡುಬಂದಲ್ಲಿ ಆ ಮನೆಯನು ಸೀಲ್ಡೌನ್ ಮಾಡಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರೊಂದಿಗೆ ಇತರೆ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸುವುದರೊಂದಿಗೆ ನಿರಂತರ ಪರಿಶೀಲನೆ ಕೈಗೊಳ್ಳಬೇಕು ಎಂದ ಅವರು, ಅಂಗಡಿ ಮುಂಗಟ್ಟುಗಳನ್ನು ನಡೆಸುವ ಎಲ್ಲಾ ಮಾಲೀಕರು ಮತ್ತು ಸಿಬ್ಬಂದಿಗಳು ಕೋವಿಡ್ ಮರ‍್ಗಸೂಚಿಗಳನ್ನು ತಪ್ಪದೇ ಪಾಲನೆ ಮಾಡುವಂತೆ ಸ್ಥಳೀಯ ಸಂಸ್ಥೆಗಳು ಎಚ್ಚರವಹಿಸಬೇಕು. ಉಲ್ಲಂಘಿಸಿದಲ್ಲಿ ತಪ್ಪದೇ ದಂಡ ವಿಧಿಸಬೇಕು ಎಂದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

10 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago