ಉಡುಪಿ : ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕೆ ಸಂಬoಧಿಸಿ ಈಗಾಗಲೇ ಕರೋನಾ ಸೋಂಕಿತರನ್ನು ಕಡ್ಡಾಯವಾಗಿ ಸಾಂಸ್ದಿಕ ಕ್ವಾರಂಟೈನ್ ಗೆ ಸ್ದಳಾಂತರ , ಸೋಂಕಿತರ ಮನೆಯನ್ನು ಸೀಲ್ ಡೌನ್ ಮಾಡುವುದು ಹಾಗೂ ಮತ್ತಿತ್ತರ ಮುಂಜಾಗೃತ ಕ್ರಮಗಳಿಗೆ ಸಂಬoಧಿಸಿ ಆದೇಶ ಹೊರಡಿಸಲಾಗಿರುತ್ತದೆ.
ಅದಾಗ್ಯೂ ಕರೋನಾ ಭಾಧಿತ ವ್ಯಕ್ತಿಗಳು ಕೋವಿಡ್ -19 ರ ನಿಯಮಗಳನ್ನು ಉಲ್ಲಂಘಿಸಿ, ನಿರಾಯಸವಾಗಿ ಓಡಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿದ್ದು, ಇದು ಜಿಲ್ಲೆಯಲ್ಲಿ ಮತ್ತಷ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿರುತ್ತದೆ. ಆದುದರಿಂದ ಈ ಬಗ್ಗೆ ಜಿಲ್ಲೆಯ ಜನರಲ್ಲಿ ಅರಿವು ಮೂಡಿಸಲು ಹಾಗೂ ಸಾರ್ವಜನಿಕರೇ ಸ್ವಯಂ ಕೋವಿಡ್ -19 ನ್ನು ನಿಯಂತ್ರಿಸುವಲ್ಲಿ ಜಾಗೃತರನ್ನಾಗಿಸುವ ನಿಟ್ಟಿನಲ್ಲಿ ಇನ್ನು ಮುಂದೆ ಜಿಲ್ಲೆಯಲ್ಲಿ ಕರೋನಾ ಭಾದಿತ ವ್ಯಕ್ತಿಗಳು ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿ ಓಡಾಟ ನಡೆಸುವುದು ಕಂಡುಬoದಲ್ಲಿ ಆ ಬಗ್ಗೆ ಸಾರ್ವಜನಿಕರು ಮಾಹಿತಿಯನ್ನು ಜಿಲ್ಲಾಡಳಿತದಿಂದ ಸ್ದಾಪಿಸಿರುವ ಕೋವಿಡ್ -19 ಸಹಾಯವಾಣಿಗೆ ಕರೆಮಾಡಿ ದೂರನ್ನು ಸಲ್ಲಿಸುವುದು.
ಅಲ್ಲದೇ, ಕೋವಿಡ್ ಕೇರ್ ಸೆಂಟರ್, ಹೋಮ್ ಐಸೋಲೇಶನ್ ಹಾಗೂ ಕೋವಿಡ್ -19ಗೆ ಸಂಬoಧಿಸಿದ ಇನ್ನಿತರ ಮಾಹಿತಿಯನ್ನು ಪಡೆಯಲು ಅಥವಾ ಯಾವುದಾದರು ದೂರುಗಳನ್ನು ಸಲ್ಲಿಸಲು ಸಾರ್ವಜನಿಕರು ಕೋವಿಡ್ -19 ಸಹಾಯವಾಣಿ ಸಂಖ್ಯೆ : 96639 57222 ಸೇವೆಯನ್ನು ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…