ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯು ಪ್ರಾರಂಭವಾಗುತ್ತಿದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಸಹ ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮಗಳಾದ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರಪಾಲನೆ ಮಾಡದೇ ಇರುವುದು ಕಂಡು ಬರುತ್ತಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ.
ಅವರು ಮಂಗಳವಾರ, ಜಿಲ್ಲೆಯ ಎಲ್ಲಾ ತಹಸೀಲ್ದಾರ್ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಇಂಜಿನಿಯರ್ಗಳು, ಉಡುಪಿ ನಗರಸಭೆಯ ಪೌರಾಯುಕ್ತರು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಝೂಮ್ ಮೀಟಿಂಗ್ ಮೂಲಕ ಸಭೆ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಸೂಚನೆ ನೀಡಿದರು.
ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿರುವಂತೆ, ಸಾಮಾಜಿಕ ಪಾಲನೆ ಕುರಿತಂತೆ ವಿವಿಧ ಮಾಲ್ಗಳು, ಹಾಲ್ಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ನಿಗಧಿಪಡಿಸಿರುವ ಸಂಖ್ಯೆಗಿ0ತ ಹೆಚ್ಚಿನ ಸಾರ್ವಜನಿಕರು ಸೇರಿದ್ದರೆ ಸಂಬAಧಪಟ್ಟವರ ವಿರುದ್ಧ ಸುತ್ತೋಲೆಯಂತೆ ಸೂಕ್ತ ಕ್ರಮ ಕೈಗೊಳ್ಳಿ. ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ದಂಢ ವಿಧಿಸುವ ಅಧಿಕಾರವನ್ನು ವಿವಿಧ ಅಧಿಕಾರಿಗಳಿಗೆ ಈಗಾಗಲೇ ಪ್ರತ್ಯಾಯೋಜಿಸಿದ್ದು, ಅದರಂತೆ ಕ್ರಮ ಕೈಗೊಳ್ಳಿ, ಇಲ್ಲವಾದಲ್ಲಿ ಸಂಬ0ಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿ.ಜಗದೀಶ್ ಎಚ್ಚರಿಸಿದರು.
ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ಕೋವಿಡ್ ಸುರಕ್ಷಾ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಅತ್ಯಗತ್ಯವಾಗಿದ್ದು, ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಪ್ರಕರಣಗಳನ್ನು ದಾಖಲಿಸಲು ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಸಾರ್ವಜನಿಕರು ಎಲ್ಲಾ ಸುರಕ್ಷಾ ನಿಯಮಗಳನ್ನು ತಪ್ಪದೇ ಪಾಲಿಸುವುದರ ಮೂಲಕ ಜಿಲ್ಲೆಯನ್ನು ಕೋವಿಡ್ 2 ನೇ ಅಲೆಯಿಂದ ರಕ್ಷಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…