Featured

ಉಡುಪಿ : ಕೋವಿಡ್ -19 ನಿಂದ ಮರಣ: ಕುಟುಂಬದವರು ಪರಿಹಾರ ಪಡೆಯುವ ಬಗ್ಗೆ -Vishwanews24

ಉಡುಪಿ : ಕೋವಿಡ್ -19 ನಿಂದ ಮರಣ: ಕುಟುಂಬದವರು ಪರಿಹಾರ ಪಡೆಯುವ ಬಗ್ಗೆ -Vishwanews24

ಉಡುಪಿ, : ಸರಕಾರದ ಆದೇಶದಂತೆ ಕೋವಿಡ್ -19 ವೈರಾಣು ಸೋಂಕಿನಿAದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯ ಮೃತ ಪಟ್ಟ ಸಂದರ್ಭದಲ್ಲಿ ಮೃತರ ಕಾನೂನುಬದ್ದ ವಾರಸುದಾರರ/ಕುಟುಂಬದ ಓರ್ವ ಸದಸ್ಯರಿಗೆ ಆರ್ಥಿಕ ನೆರವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕೋವಿಡ್-19 ಸಾಂಕ್ರಾಮಿಕ ಸೋಂಕಿನಿAದ ದುಡಿಯುವ ಸದಸ್ಯರನ್ನು ಕಳೆದುಕೊಂಡ ಬಿಪಿಎಲ್ ಕುಟುಂಬಕ್ಕೆ ಒಂದು ಬಾರಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರದ ಸಂಧ್ಯಾಸುರಕ್ಷಾ ಯೋಜನೆ ಲೆಕ್ಕ ಶೀರ್ಷಿಕೆಯ ಅನುದಾನದಿಂದ 1 ಲಕ್ಷ ರೂಗಳನ್ನು ಹಾಗೂ ಕೇಂದ್ರ ಸರಕಾರದ ಮಾರ್ಗ ಸೂಚಿಯಂತೆ ಪ್ರತಿಯೊಬ್ಬ ಮೃತರ ವಾರಸುದಾರರಿಗೆ ರಾಜ್ಯವಿಪತ್ತು ಪರಿಹಾರ ನಿಧಿ (SDRF) ಲೆಕ್ಕ ಶೀರ್ಷಿಕೆಯ ಅನುದಾನದಿಂದ ತಲಾ 50,000 ರೂಗಳ ಪರಿಹಾರ ನೀಡಲಾಗುವುದು.

ಮತ್ತು ಕೋವಿಡ್ ನಿಂದ ಮೃತಪಟ್ಟ ಪ್ರತೀ ಕುಟುಂಬಗಳಿಗೂ ಕುಟುಂಬದ ಕಾನೂನುಬದ್ದ ವಾರಿಸುದಾರರಿಗೆ 50000 ರೂ ಪರಿಹಾರವನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ನೀಡಲು ಪರಿಷೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಸಂಬoದಪಟ್ಟವರು ಪರಿಹಾರ ಪಡೆಯಲು ತಾಲೂಕು ಕಚೇರಿ/ಎಲ್ಲಾ ನಾಡ ಕಛೇರಿ/ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿದಾರರು ಪರಿಹಾರವನ್ನು ಪಡೆಯಲು ತಮ್ಮ ವ್ಯಾಪ್ತಿಯ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆ 1 ರಲ್ಲಿ ಮಾಹಿತಿ ಹಾಗೂ ನಮೂನೆ -2 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ಮತ್ತು ನಮೂನೆ -3 ರಲ್ಲಿ ನಿರಾಪೇಕ್ಷಣಾ ಪತ್ರವನ್ನು ಭರ್ತಿ ಮಾಡಿ ಈ ಕೆಳಕಂಡ ದಾಖಲಾತಿಗಳೊಂದಿಗೆ ತಾಲ್ಲೂಕು ಕಛೇರಿಗೆ ಸಲ್ಲಿಸುವುದು.

ಅರ್ಹತೆ: ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಕೋವಿಡ್-19 ಮರಣ ಪರಿಹಾರ ಪಾವತಿಗೆ ಪರಿಗಣಿಸುವ ಎಲ್ಲಾ ಮೃತ ವ್ಯಕ್ತಿಗಳು ಕೋವಿಡ್-19 ಕಾರಣಗಳಿಂದಾಗಿ ಮೃತಪಟ್ಟಿರ ಬೇಕು. ಈ ಕುರಿತು ಅಧಿಕೃತ ಮರಣ ಪ್ರಮಾಣ ಪತ್ರವನ್ನು ಹೊಂದಿರತಕ್ಕದ್ದು. ರಾಜ್ಯ ಸರ್ಕಾರವು ಘೋಷಿಸಿರುವ ರೂ.1 ಲಕ್ಷಗಳ ಪರಿಹಾರ ಪಡೆಯಲು ಪರಿಗಣಿಸುವ ಮೃತ ವ್ಯಕ್ತಿಯು ಬಿ.ಪಿ.ಎಲ್ ಕುಟುಂಬದ ದುಡಿಯುವ ಸದಸ್ಯರಾಗಿರಬೇಕು ಹಾಗೂ ಅರ್ಜಿದಾರರೂ ಸಹ ಅದೇ ಬಿ.ಪಿ.ಎಲ್ ಕುಟುಂಬದ ಸದಸ್ಯರಾಗಿರಬೇಕು. ಕೋವಿಡ್-19 ಸೋಂಕಿನಿoದ ಮೃತಪಟ್ಟಿರುವ ಕುರಿತು ವೈದ್ಯಕೀಯ ಪ್ರಮಾಣ ಪತ್ರ (Form-4/4a) ಲಭ್ಯವಿಲ್ಲದಿದ್ದಲ್ಲಿ, ಕೋವಿಡ್-19 ಮರಣ ದೃಢೀಕರಣ ಸಮಿತಿ (Covid-19 Death Ascertaining Committee-CDAC) ನೀಡುವ ನಿಗದಿತ ಮರಣ ಪ್ರಮಾಣ ಪತ್ರವನ್ನು ಪರಿಗಣಿಸುವುದು. ರಾಜ್ಯ ಸರ್ಕಾರದಿಂದ ನೀಡಲಾಗುವ ರೂ. 1.00 ಲಕ್ಷ ಮರಣ ಪರಿಹಾರ ಧನ ಪಡೆಯಲು ಅರ್ಹವಾಗುವ ಬಿಪಿಎಲ್ ಕುಟುಂಬದ ಮೃತ ವ್ಯಕ್ತಿಯ ವಯಸ್ಸು ಕನಿಷ್ಠ 18 ವರ್ಷ ತುಂಬಿರ ಬೇಕು.

ಸಲ್ಲಿಸಬೇಕಾದ ದಾಖಲೆಗಳು : ಕೋವಿಡ್ -19 ಪಾಸಿಟಿವ್ ವರದಿ ಮತ್ತು ಕೋವಿಡ್ ರೋಗಿ ಸಂಖ್ಯೆ  P Number (Patient Number ) (ಕೋವಿಡ್ ದೃಢಪಟ್ಟ ರೋಗಿ ಸಂಖ್ಯೆ) , ಮರಣ ಪ್ರಮಾಣ ಪತ್ರ ಅಥವಾ ಮರಣ ಕಾರಣ ಪ್ರಮಾಣ ಪತ್ರ (ಫಾರ್ಮ್ -4 /4ಎ) , ಮೃತ ವ್ಯಕ್ತಿಯ ಆಧಾರ್ ಪ್ರತಿ ಅಥವಾ ಇತರೇ ಗುರುತಿನ ಚೀಟಿಗಳು, ಮೃತ ವ್ಯಕ್ತಿಯ ಬಿಪಿಎಲ್ ಪಡಿತರ ಚೀಟಿ,ಅರ್ಜಿದಾರರ ಆಧಾರ್ ಪ್ರತಿ, ಅರ್ಜಿದಾರರ ಬಿಪಿಎಲ್ ಪಡಿತರ ಚೀಟಿ,ಅರ್ಜಿದಾರರ ಬ್ಯಾಂಕ್/ಅoಚೆ ಖಾತೆ ಪಾಸ್ ಬುಕ್, ಅರ್ಜಿದಾರರ ಸ್ವಯಂ ಘೋಷಣಾ ಪತ್ರ (ನಮೂನೆ-2),ಕುಟುಂಬ ಸದಸ್ಯರ ನಿರಾಪೇಕ್ಷಣಾ ಪತ್ರ (ನಮೂನೆ-3)

ಅರ್ಜಿ ನಮೂನೆಗಳನ್ನು ವೆಬ್ ಸೈಟ್ ವಿಳಾಸ www.udupi.nic.in ಮೂಲಕ ಹಾಗೂ ಸಂಬoಧಿಸಿದ ತಾಲೂಕು ಕಛೇರಿಯಿಂದ ಪಡೆಯ ಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

19 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

19 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

20 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

23 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

23 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

23 hours ago