ಉಡುಪಿ, : ಸರಕಾರದ ಆದೇಶದಂತೆ ಕೋವಿಡ್ -19 ವೈರಾಣು ಸೋಂಕಿನಿoದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯ ಮೃತ ಪಟ್ಟ ಸಂದರ್ಭದಲ್ಲಿ ಮೃತರ ಕಾನೂನುಬದ್ದ ವಾರಸುದಾರರ/ಕುಟುಂಬದ ಓರ್ವ ಸದಸ್ಯರಿಗೆ ರೂ. 1 ಲಕ್ಷಗಳ ಆರ್ಥಿಕ ನೆರವನ್ನು ನೀಡಲಾಗುವುದು.
ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಒಂದಕ್ಕಿoತ ಹೆಚ್ಚು ಸದಸ್ಯರು ಕೋವಿಡ್-19 ಸಾಂಕ್ರಾಮಿಕ ಸೋಂಕಿನಿAದ ಮರಣ ಹೊಂದಿದ್ದರೂ ಸಹ ಒಬ್ಬ ಸದಸ್ಯರಿಗೆ ಮಾತ್ರ ರೂ.1 ಲಕ್ಷಗಳ ಪರಿಹಾರ ಪಾವತಿಸಲಾಗುತ್ತದೆ. ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ RTGS/NEFT ಮೂಲಕ ನೇರವಾಗಿ ಕೋವಿಡ್ ಸೋಂಕಿನಿAದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಯ ವಾರಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಕೋವಿಡ್-19 ಸೋಂಕಿನಿದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ ಪಾವತಿಸುವಂತಹ ಎಲ್ಲಾ ಪ್ರಕ್ರಿಯೆಗಳನ್ನು ಅಂತರ್ಜಾಲದ ಮೂಲಕವೇ ನಿರ್ವಹಿಸಲಾಗುವುದು.
ಅರ್ಜಿದಾರರು ಪರಿಹಾರವನ್ನು ಪಡೆಯಲು ತಮ್ಮ ವ್ಯಾಪ್ತಿಯ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆ 1 ರಲ್ಲಿ ಮಾಹಿತಿ ಹಾಗೂ ನಮೂನೆ -2 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ಮತ್ತು ನಮೂನೆ -3 ರಲ್ಲಿ ನಿರಾಪೇಕ್ಷಣಾ ಪತ್ರವನ್ನು ಭರ್ತಿ ಮಾಡಿ ಈ ಕೆಳಕಂಡ ದಾಖಲಾತಿಗಳೊಂದಿಗೆ ತಾಲ್ಲೂಕು ಕಛೇರಿಗೆ ಸಲ್ಲಿಸುವುದು.
ಕೋವಿಡ್ -19 ವೈರಾಣು ಸೋಂಕಿನಿoದ ಮೃತಪಟ್ಟಿದ್ದಕ್ಕೆ ಸಂಬAಧಿಸಿದAತೆ: ಕೋವಿಡ್ -19 ಪಾಸಿಟಿವ್ ರಿಪೋರ್ಟ್ (ಅಧಿಕೃತವಾಗಿ ಗುರುತಿಸಿದ ಪ್ರಯೋಗಾಲಯದಿಂದ ಪಡೆದಿರುವ) P Number (Patient Number) (ಕೋವಿಡ್ ದೃಢಪಟ್ಟ ರೋಗಿ ಸಂಖ್ಯೆ) ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು.
ಅಥವಾ ರೋಗ ಲಕ್ಷಣಗಳ ಆಧಾರದ ಮೇಲೆ ಚಿಕಿತ್ಸೆ ಪಡೆದವರು (ಕೋವಿಡ್-19 ನೆಗೆಟಿವ್ ಇದ್ದವರು) ಕ್ಲೀನಿಕಲ್ ರೇಡಿಯಾಲಜಿ ಮತ್ತು ಇತರೆ ಸಂಬoಧಿಸಿದ ಪ್ರಯೋಗಾಲಯ ವರದಿ P Number (Patient Number) (ರೋಗಿ ಸಂಖ್ಯೆ) ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು
ಮೃತಪಟ್ಟವರ ಆಧಾರ್ ಕಾರ್ಡ್ ಪ್ರತಿ, ಮರಣ ಪ್ರಮಾಣ ಪತ್ರದ ಪ್ರತಿ , ಅರ್ಜಿದಾರರ ಪಡಿತರ ಚೀಟಿ ಪ್ರತಿ , ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ 7. ಅರ್ಜಿದಾರರಿಂದ ಸ್ವಯಂ ಘೋಷಣಾ ಪತ್ರ (ನಮೂನೆ -2) ಕುಟುಂಬದ ಸದಸ್ಯರ ನಿರಾಪೇಕ್ಷಣಾ ಪತ್ರ (ನಮೂನೆ -3) ಗಳನ್ನು ಸಲ್ಲಿಸುವುದು
ಅರ್ಜಿ ನಮೂನೆಗಳನ್ನು ವೆಬ್ ಸೈಟ್ ವಿಳಾಸ www.udupi.nic.in ಮೂಲಕ ಹಾಗೂ ಸಂಬAಧಿಸಿದ ತಾಲೂಕು ಕಛೇರಿಯಿಂದ ಪಡೆಯ ಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…