Featured

ಉಡುಪಿ : ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ನಾಟಕ ಪ್ರದರ್ಶನ ನಡೆಸಲು ಅನುಮತಿ -Vishwanews24

ಉಡುಪಿ : ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ನಾಟಕ ಪ್ರದರ್ಶನ ನಡೆಸಲು ಅನುಮತಿ -Vishwanews24

ಉಡುಪಿ: ಈ ಕೊರೊನಾ ಮಹಾಮಾರಿ ರೋಗದಿಂದ ಕಳೆದ 10 ತಿಂಗಳಿನಿಂದ ಒಂದೇ ಒಂದು ನಾಟಕ ಪ್ರದರ್ಶವಾಗದೇ ಸಹಸ್ರಾರು ಕಲಾವಿದರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿತ್ತು. ಈ ಬಗ್ಗೆ ಉಡುಪಿ ಜಿಲ್ಲೆಯ ವೃತ್ತಿಪರ ನಾಟಕ ತಂಡಗಳ ಪರವಾಗಿ ಸಮಾಜರತ್ನ ಲೀಲಾಧರ ಶೆಟ್ಟಿ ಕರಂದಾಡಿ ಇವರ ಮುಂದಾಳತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಯಾದ ಜಿ, ಜಗದೀಶ್ ಅವರಿಗೆ ನಾಟಕ ಪ್ರದರ್ಶನಕ್ಕೆ ಅನುಮತಿಯನ್ನು ಯಾಚಿಸಿ ಮನವಿಯನ್ನು ನೀಡಲಾಯಿತು.

ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಸರಕಾರದ ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ನಾಟಕ ಪ್ರದರ್ಶನ ನಡೆಸಲು ಅನುಮತಿಯನ್ನು ನೀಡಿದರು.

ಜಿಲ್ಲೆಯಲ್ಲಿ ಸರಿ ಸುಮಾರು 15 ರಿಂದ 20 ನಾಟಕ ತಂಡಗಳು ವೃತ್ತಿಪರವಾಗಿ ನಾಟಕ ಪ್ರದರ್ಶನ ಮಾಡುತ್ತಿದ್ದು ತಂಡದ ಸಹಸ್ರಾರು ನಾಟಕ ಕಲಾವಿದರು ಹಾಗೂ ತಂತ್ರಜ್ಞರು ಆರ್ಥಿಕವಾಗಿ ನಾಟಕವನ್ನೇ ಅವಲಂಬಿಸಿರುತ್ತಾರೆ.

ಈ ಸಂಧರ್ಭದಲ್ಲಿ ಚೈತನ್ಯ ಕಲಾವಿದರು ಬೈಲೂರು ತಂಡದ ಪ್ರಸನ್ನ ಶೆಟ್ಟಿ ಬೈಲೂರು, ಕಾಪು ರಂಗತರಂಗ ತಂಡದ ಶರತ್ ಉಚ್ಚಿಲ ಹಾಗೂ ಮರ್ವಿನ್ ಶಿರ್ವ, ತೆಲಿಕೆದ ತೆನಾಲಿ ಕಾರ್ಕಳ ತಂಡದ ಸುನಿಲ್‌ ನೆಲ್ಲಿಗುಡ್ಡೆ, ಅಭಿನಯ ಕಲಾವಿದರು ಉಡುಪಿ ತೆಂಡದ ಉಮೇಶ್ ಅಲೆವೂರು, ಕಾರ್ತಿಕ್ ಕಡೇಕಾರ್ ಹಾಗೂ ವಿಕ್ರಮ್ ಮಂಚಿ, ಹಾಗೂ ನವಸುಮ ಕೊಡವೂರು ತಂಡದ ಬಾಲಕೃಷ್ಣ ಕೊಡವೂರು, ಕಲಾಚಾವಡಿ ಉಡುಪಿ ತಂಡದ ಪ್ರಭಾಕರ್ ಆಚಾರ್ಯ ಮೂಡುಬೆಳ್ಳೆ ಸಿಂಧೂರ ಕಲಾವಿದರು ಕಾರ್ಕಳ ತಂದದ ಹಮೀದ್ ಮಿಯಾರು ಹಾಗೂ ಸಂದೀಪ್ ಬಾರಾಡಿ, ನಮ್ಮ ಕಲಾವಿದರು ಪಿತ್ರೋಡಿ ತಂಡದ ನವೀನ್ ಸಾಲ್ಯಾನ್ ಒತ್ತೋಡಿ , ಸಾಕ್ಷಿ ಕಲಾವಿದರು ಬೆಳಪು ತಂಡದ ಶುಭಕರ್ ಬೆಳಪು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago