ಉಡುಪಿ: ಈ ಕೊರೊನಾ ಮಹಾಮಾರಿ ರೋಗದಿಂದ ಕಳೆದ 10 ತಿಂಗಳಿನಿಂದ ಒಂದೇ ಒಂದು ನಾಟಕ ಪ್ರದರ್ಶವಾಗದೇ ಸಹಸ್ರಾರು ಕಲಾವಿದರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿತ್ತು. ಈ ಬಗ್ಗೆ ಉಡುಪಿ ಜಿಲ್ಲೆಯ ವೃತ್ತಿಪರ ನಾಟಕ ತಂಡಗಳ ಪರವಾಗಿ ಸಮಾಜರತ್ನ ಲೀಲಾಧರ ಶೆಟ್ಟಿ ಕರಂದಾಡಿ ಇವರ ಮುಂದಾಳತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಯಾದ ಜಿ, ಜಗದೀಶ್ ಅವರಿಗೆ ನಾಟಕ ಪ್ರದರ್ಶನಕ್ಕೆ ಅನುಮತಿಯನ್ನು ಯಾಚಿಸಿ ಮನವಿಯನ್ನು ನೀಡಲಾಯಿತು.
ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಸರಕಾರದ ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ನಾಟಕ ಪ್ರದರ್ಶನ ನಡೆಸಲು ಅನುಮತಿಯನ್ನು ನೀಡಿದರು.
ಜಿಲ್ಲೆಯಲ್ಲಿ ಸರಿ ಸುಮಾರು 15 ರಿಂದ 20 ನಾಟಕ ತಂಡಗಳು ವೃತ್ತಿಪರವಾಗಿ ನಾಟಕ ಪ್ರದರ್ಶನ ಮಾಡುತ್ತಿದ್ದು ತಂಡದ ಸಹಸ್ರಾರು ನಾಟಕ ಕಲಾವಿದರು ಹಾಗೂ ತಂತ್ರಜ್ಞರು ಆರ್ಥಿಕವಾಗಿ ನಾಟಕವನ್ನೇ ಅವಲಂಬಿಸಿರುತ್ತಾರೆ.
ಈ ಸಂಧರ್ಭದಲ್ಲಿ ಚೈತನ್ಯ ಕಲಾವಿದರು ಬೈಲೂರು ತಂಡದ ಪ್ರಸನ್ನ ಶೆಟ್ಟಿ ಬೈಲೂರು, ಕಾಪು ರಂಗತರಂಗ ತಂಡದ ಶರತ್ ಉಚ್ಚಿಲ ಹಾಗೂ ಮರ್ವಿನ್ ಶಿರ್ವ, ತೆಲಿಕೆದ ತೆನಾಲಿ ಕಾರ್ಕಳ ತಂಡದ ಸುನಿಲ್ ನೆಲ್ಲಿಗುಡ್ಡೆ, ಅಭಿನಯ ಕಲಾವಿದರು ಉಡುಪಿ ತೆಂಡದ ಉಮೇಶ್ ಅಲೆವೂರು, ಕಾರ್ತಿಕ್ ಕಡೇಕಾರ್ ಹಾಗೂ ವಿಕ್ರಮ್ ಮಂಚಿ, ಹಾಗೂ ನವಸುಮ ಕೊಡವೂರು ತಂಡದ ಬಾಲಕೃಷ್ಣ ಕೊಡವೂರು, ಕಲಾಚಾವಡಿ ಉಡುಪಿ ತಂಡದ ಪ್ರಭಾಕರ್ ಆಚಾರ್ಯ ಮೂಡುಬೆಳ್ಳೆ ಸಿಂಧೂರ ಕಲಾವಿದರು ಕಾರ್ಕಳ ತಂದದ ಹಮೀದ್ ಮಿಯಾರು ಹಾಗೂ ಸಂದೀಪ್ ಬಾರಾಡಿ, ನಮ್ಮ ಕಲಾವಿದರು ಪಿತ್ರೋಡಿ ತಂಡದ ನವೀನ್ ಸಾಲ್ಯಾನ್ ಒತ್ತೋಡಿ , ಸಾಕ್ಷಿ ಕಲಾವಿದರು ಬೆಳಪು ತಂಡದ ಶುಭಕರ್ ಬೆಳಪು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…
ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ…