Featured

ಉಡುಪಿ :ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಾಗ ಯಶಸ್ಸು ಶತಸಿದ್ಧ : ಭಾಗೀರತಿ ಮುಳ್ಳೇರಿಯ – Vishwanews24

ಉಡುಪಿ :ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಾಗ ಯಶಸ್ಸು ಶತಸಿದ್ಧ : ಭಾಗೀರತಿ ಮುಳ್ಳೇರಿಯ – Vishwanews24

ಉಡುಪಿ : ಹಿರಿಯರ ತ್ಯಾಗ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ಇಂದು ವಿಶ್ವದ ಅತೀ ದೊಡ್ಡ ಯಶಸ್ವಿ ರಾಜಕೀಯ ಪಕ್ಷವೆನಿಸಿದೆ. ರಾಜ್ಯದಿಂದ ಕಾಲ ಕಾಲಕ್ಕೆ ಬರುವ ನಿರ್ದೇಶನದಂತೆ ಪಕ್ಷದ ಸಂಘಟನಾತ್ಮಕ ವಿಚಾರಗಳನ್ನು ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಮೂಲಕ ಕಟ್ಟ ಕಡೆಯ ಕಾರ್ಯಕರ್ತರಿಗೂ ತಲುಪಿಸುವ ವ್ಯವಸ್ಥೆ ಆಗಬೇಕು.

ಈ ನಿಟ್ಟಿನಲ್ಲಿ ಅತ್ಯಂತ ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಾಗ ಯಶಸ್ಸು ಶತಸಿದ್ಧ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಜಿಲ್ಲಾ ಮಹಿಳಾ
ಮೋರ್ಚಾದ ಪ್ರಭಾರಿ ಭಾಗೀರತಿ ಮುಳ್ಳೇರಿಯ ಹೇಳಿದರು.

ಅವರು ಫೆ.16ರಂದು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಉಡುಪಿ :ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವು ಪೂಜಾರಿ ಬಿಜೆಪಿ ಸೇರ್ಪಡೆ -Vishwanews24

ಇಂದು ಗ್ರಾಮ ಪಂಚಾಯತ್ ಮಟ್ಟದಿಂದ ಎಲ್ಲಾ ಸ್ತರಗಳ ಸಹಿತ ರಾಜ್ಯ ಮತ್ತು ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಜನತೆಗೆ ತಲುಪಿಸುವ ಗುರುತರವಾದ ಜವಾಬ್ದಾರಿ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಮೇಲಿದೆ. ಬಿಜೆಪಿ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭರ್ಜರಿ ಜಯಬೇರಿ ಗಳಿಸಿದೆ. ಮುಂಬರಲಿರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿಯೂ ಜಿಲ್ಲೆಯಾದ್ಯಂತ ಬಿಜೆಪಿಯ ವಿಜಯ ಪತಾಕೆ ಹಾರಿಸಲು ಎಲ್ಲರ ಜೊತೆ ಮಹಿಳಾ ಮೋರ್ಚಾ ತಂಡವೂ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಜನಸೇವೆ ಮತ್ತು ಉತ್ತಮ ಚಟುವಟಿಕೆಗಳ ಮೂಲಕ ಜಿಲ್ಲಾ ಮಹಿಳಾ ಮೋರ್ಚಾ ರಾಜ್ಯದಲ್ಲೇ ಮಾದರಿಯಾಗಿ ಮೂಡಿಬರಲಿ ಎಂದು ಅವರು ಹಾರೈಸಿದರು.

ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮಾತನಾಡಿ ಬಿಜೆಪಿಯ ವಿಕ್ರಮ ಸಾಧನೆಯನ್ನು ಉಳಿಸಿಕೊಂಡುಬೆಳೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ ಮತ್ತು ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಜಿಲ್ಲಾ ಮಹಿಳಾ ಮೋರ್ಚಾದ ಕ್ರಿಯಾಶೀಲತೆ ಮತ್ತು ಮಾದರಿ ಕಾರ್ಯಕ್ರಮಗಳನ್ನು ಪ್ರಶಂಸಿಸಿದರು.

ವಿಶೇಷ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಯೋಜನೆಗಳನ್ನು ಜನತೆಗೆ ತಲುಪಿಸುವ ಜೊತೆಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ, ಉಚಿತ ಕನ್ನಡಕ ವಿತರಣೆ ಮುಂತಾದ ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ಜಿಲ್ಲಾ ಮಹಿಳಾ ಮೋರ್ಚಾ ಜನತೆಯ ಸಂಕಷ್ಟಗಳಿಗೆ ಸ್ಪಂದಿಸುತ್ತಿದೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ಜೊತೆಗೆ ಇನ್ನಷ್ಟು ಜನಪರ ಚಟುವಟಿಕೆಗಳನ್ನು ಹಮ್ಮಿಕೊಂಡು, ಮುಂಬರಲಿರುವ ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳಲ್ಲೂ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿಗಳಿಸಲು ಜಿಲ್ಲಾ ಮಹಿಳಾ ಮೋರ್ಚಾ ಅತ್ಯಂತ ಕ್ರಿಯಾಶೀಲತೆಯಿಂದ ಶ್ರಮಿಸಲಿದೆ. ಈ ನಿಟ್ಟಿನಲ್ಲಿ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಅವಿರತ ಸೇವೆ ಅತ್ಯಮೂಲ್ಯ ಎಂದರು.

ಪ್ರಥಮ ಬಾರಿಗೆ ಬಿಜೆಪಿ ಜಿಲ್ಲಾ ಕಚೇರಿಗೆ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆಗೆ ಆಗಮಿಸಿದ್ದ ಮಹಿಳಾ ಮೋರ್ಚಾ ಪ್ರಭಾರಿ ಭಾಗೀರತಿ ಮುಳ್ಳೇರಿಯ ರವರನ್ನು ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು. ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಹಾಗೂ ಮಂಡಲಗಳ ಮಹಿಳಾ ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರೇಣುಕಾ ವಿ. ಸುವರ್ಣ ವಂದಿಸಿದರು.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

5 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

5 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

5 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

6 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

10 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

10 hours ago