Featured

ಉಡುಪಿ : ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ : ಮಟ್ಟಾರು ರತ್ನಾಕರ ಹೆಗ್ಡೆ -Vishwanews24

ಉಡುಪಿ : ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ : ಮಟ್ಟಾರು ರತ್ನಾಕರ ಹೆಗ್ಡೆ -Vishwanews24

ಉಡುಪಿ : ಕ್ರೀಡಾಪಟುಗಳು ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡಲು, ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಸಾಧನೆಗೆ ಪ್ರೇರೆಪಣೆ ನೀಡಬೇಕು ಎಂದು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.

ಅವರು ಇಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 22.316 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಛಾವಣಿ ನಿರ್ಮಾಣ ಕಾಮಗಾರಿಯ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಅಗತ್ಯ ಸೌಲಭ್ಯಗಳನ್ನು ಒದಗಿಸಿ, ಅವರನ್ನು ಉತ್ತಮ ಕ್ರೀಡಾಪಟುಗಳನ್ನಾಗಿ ರೂಪಿಸಬೇಕು ಎಂದು ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಮಾತನಾಡಿ, ಈ ಕ್ರೀಡಾಂಗಣದಲ್ಲಿನ ಸೌಲಭ್ಯಗಳನ್ನು ಬಳಸಿಕೊಂಡು, ಜಿಲ್ಲೆಯಲ್ಲಿ ಇನ್ನಷ್ಟು ಮಂದಿ ರಾಷ್ಟಿçÃಯ ಮತ್ತು ಅಂತಾರಾಷ್ಟಿçÃಯ ಮಟ್ಟದ ಕ್ರೀಡಾಪಟುಗಳು ಮೂಡಿ ಬರಲಿ ಎಂದು ಹಾರೈಸಿದರು.

ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

6 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

7 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

7 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

7 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

7 hours ago