Featured

ಉಡುಪಿ : ಕ್ಷಯರೋಗ ನಿಯಂತ್ರಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ :  ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಕ್ಷಯರೋಗ ನಿಯಂತ್ರಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ :  ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಜಿಲ್ಲೆಯಲ್ಲಿ ಕ್ಷಯರೋಗ ನಿಯಂತ್ರಣಕ್ಕೆ ಸರಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವುದರೊಂದಿಗೆ ಜಿಲ್ಲೆಯಲ್ಲಿ ಕ್ಷಯ ರೋಗಿಗಳ ಸಂಖ್ಯೆಯನ್ನು ತಗ್ಗಿಸಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಟಿ.ಬಿ. ಫೋರಂ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ 2016 ರಿಂದ 2020 ರ ವರೆಗಿನ ಕ್ಷಯ ರೋಗಿಗಳ ಸಂಖ್ಯೆ ಪ್ರತಿ ವರ್ಷವೂ ಹೆಚ್ಚುತ್ತಿರುವುದು ಕಂಡು ಬರುತ್ತಿದೆ. ಇದರ ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಕ್ಯಯರೋಗದ ಪರೀಕ್ಷೆಗಳನ್ನು ಮಾಡುವುದರೊಂದಿಗೆ ರೋಗಿಗಳನ್ನು ಗುರುತಿಸಿ ಅವರುಗಳಿಗೆ ರೋಗ ಹರಡದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಕ್ಷಯರೋಗದ ತಿಳುವಳಿಕೆಯ ಕೊರತೆಯಿಂದ ಬಹಳಷ್ಟು ಜನ ಕ್ಷಯರೋಗದ ಬಗ್ಗೆ ನಿರ್ಲಕ್ಷö್ಯ ತೋರುತ್ತಾರೆ ಎಂದ ಜಿಲ್ಲಾಧಿಕಾರಿ ಜಿ.ಜಗದೀಶ್, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದರಿಂದ ಈ ರೋಗದಿಂದ ಮುಕ್ತಿ ಹೊಂದಲು ಸಾಧ್ಯವಾಗುತ್ತದೆ ಎಂದರು.

ಎರಡು ವಾರಕ್ಕಿಂತಲೂ ಹೆಚ್ಚು ನಿರಂತರ ಕೆಮ್ಮು, ರಾತ್ರಿ ಜ್ವರ, ತೂಕ ಇಳಿಕೆ, ಹಸಿವಾಗದೇ ಇರುವುದು, ಇವು ಕ್ಷಯರೋಗದ ಲಕ್ಷಣಗಳಾಗಿದ್ದು, ಇಂತಹ ಲಕ್ಷಣ ಇರುವ ಜನ ಸಾಮಾನ್ಯರು ಆ ಬಗ್ಗೆ ನಿರ್ಲಕ್ಷö್ಯ ತೋರದೇ ಪರೀಕ್ಷೆಗೆ ಒಳಗಾಗಬೇಕು. ಕ್ಷಯರೋಗಕ್ಕೆ ಉಚಿತ ಚಿಕಿತ್ಸೆಯನ್ನು ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿಯೂ ಹಾಗೂ ಆರೋಗ್ಯ ಕೇಂದ್ರಗಳಲ್ಲಿಯೂ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳ ವೈದ್ಯರುಗಳು, ಕ್ಷಯರೋಗದ ಲಕ್ಷಣಗಳು ರೋಗಿಗಳಲ್ಲಿ ಕಂಡುಬAದಾಗ ತಕ್ಷಣದಲ್ಲಿ ಅವರಿಗೆ ಕ್ಷಯರೋಗದ ಪರೀಕ್ಷೆಯನ್ನು ಮಾಡಿಸಬೇಕು. ಈ ಬಗ್ಗೆ ಕ್ಷಯ ಕೇಂದ್ರಗಳಿಗೆ ಮಾಹಿತಿಯನ್ನು ನೀಡಬೇಕು. ತಪ್ಪಿದ್ದಲ್ಲಿ ಅವರುಗಳ ವಿರುದ್ಧ ವೈದ್ಯಕೀಯ ನಿರ್ಲಕ್ಷö್ಯ ಕಾಯಿದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ಕ್ಷಯರೋಗಕ್ಕೆ ತುತ್ತಾದ ಪ್ರತಿಯೊಬ್ಬ ರೋಗಿಗೆ ಪ್ರತ್ಯೇಕ ಔಷಧಿಗಳನ್ನು ಇರಿಸಿ, ಮೇಲ್ವಿಚಾರಕರು ಔಷಧಿಗಳನ್ನು ವಾರದಲ್ಲಿ ಮೂರು ದಿನ ನೀಡಬೇಕು. ಆರು ತಿಂಗಳವರೆಗೆ ತಪ್ಪದೇ ಮಾತ್ರಗಳನ್ನು ತೆಗೆದುಕೊಂಡಲ್ಲಿ ರೋಗದಿಂದ ಗುಣಮುಖರಾಗಲು ಸಾಧ್ಯ. ರೋಗಿಗೆ ಚಿಕಿತ್ಸೆ ಆರಂಭಿಸಿದ 2-3 ದಿನಗಳಲ್ಲಿ ಕಾಯಿಲೆ ಹರಡುವುದು ನಿಲ್ಲುತ್ತದೆ ಎಂದರು.

ಕ್ಷಯರೋಗದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಕ್ಷಯರೋಗದಿಂದ ಮುಕ್ತಿ ಹೊಂದಿದವರನ್ನು ಗುರುತಿಸಿ, ಅವರುಗಳನ್ನು ಕ್ಷಯರೋಗ ಚಾಂಪಿಯನ್ಗಳನ್ನಾಗಿಸಿ, ಅವರಿಗೆ ತರಬೇತಿ ನೀಡಿ, ಅವರ ಮೂಲಕ ಈ ರೋಗದ ಬಗ್ಗೆ ಅರಿವು ಮೂಡಿಸಲು ಮುಂದಾಗಬೇಕು ಎಂದರು.
ಜಿಲ್ಲೆಯಲ್ಲಿ 2019 ರಲ್ಲಿ 1910 ಟಿ.ಬಿ ಪ್ರಕರಣಗಳು ಕಂಡು ಬಂದು ಅವುಗಳಲ್ಲಿ ಶೇ. 83 ರಷ್ಟು ಜನರಿಗೆ ರೋಗ ನಿವಾರಣೆಯಾದರೇ, 122 ಜನ ಮರಣ ಹೊಂದಿರುತ್ತಾರೆ. 2020 ನೇ ಸಾಲಿನಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಹರಡುವಿಕೆಯಿಂದ ತಪ್ಪಿಸಲು ಜನರು ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಮುಖಗವಸುಗಳನ್ನು ಬಳಸಿದ್ದರಿಂದಾಗಿ ಪ್ರಕರಣಗಳು ಸ್ವಲ್ಪಮಟ್ಟಿಗೆ ಕಡಿಮೆಯಾಗಿವೆ. ಪ್ರಸ್ತುತ ಸಾಲಿನಲ್ಲಿ 1020 ಪ್ರಕರಣಗಳಾಗಿ ಶೇ.84 ರಷ್ಟು ಜನ ರೋಗದಿಂದ ಮುಕ್ತಿ ಹೊಂದಿ, 79 ಜನರ ಮರಣ ಸಂಭವಿಸಿ ಶೇಕಡಾವಾರು ಪ್ರಮಾಣ 7.2 ರಷ್ಟಿದೆ ಎಂದ ಅವರು ಮುಂದಿನ ದಿನಗಳಲ್ಲಿ ಮರಣ ಸಂಖ್ಯೆಯನ್ನು ಶೇ.6 ಕ್ಕಿಂತ ಕಡಿಮೆಯಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಕ್ಷಯರೋಗದಿಂದ 35 ರಿಂದ 50 ವರ್ಷದೊಳಗಿನವರು ಹೆಚ್ಚಾಗಿ ಮರಣ ಹೊಂದುತ್ತಿದ್ದು, ಇದರಿಂದಾಗಿ ದೇಶದ ಮಾನವ ಸಂಪನ್ಮೂಲಕ್ಕೆ ಧಕ್ಕೆ ಉಂಟಾಗುತ್ತಿದೆ. ಇದರ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಅರಿವು ಕಾರ್ಯಕ್ರಮಗಳನ್ನು ಜನಾಂದೋಲನದ ರೀತಿಯಲ್ಲಿ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಡಾ.ಎಂ.ಜಿ.ರಾಮ, ಪತ್ರಕರ್ತ ಸುಜಿ ಕುರಿಯ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

3 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

3 hours ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

3 hours ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

3 hours ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

3 hours ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

18 hours ago