Featured

ಉಡುಪಿ : ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂಂ-Vishwanews24

ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂಂ-Vishwanews24

ಉಡುಪಿ : ಜಿಲ್ಲೆಯಲ್ಲಿ ಹೆಚ್ಚಿನ ಕ್ಷಯರೋಗ ತಪಾಸಣೆ ಮಾಡುವುದರೊಂದಿಗೆ ಪ್ರಾಥಮಿಕ ಹಂತದಲ್ಲಿಯೇ ಇದನ್ನು ಗುರುತಿಸಿ ಸೂಕ್ತ ಚಿಕಿತ್ಸೆಯನ್ನು ನೀಡಿ, ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಟಿ.ಬಿ ಫೋರಂ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ 3 ವರ್ಷಗಳಿಂದ ಕ್ಷಯರೋಗಿಗಳ ಸಂಖ್ಯೆಯು ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿರುವುದು ಕಂಡು ಬರುತ್ತಿದೆ. ಇದರ ಸಂಪೂರ್ಣ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಸಂಶಯಾಸ್ಪದ ಕ್ಷಯರೋಗ ಲಕ್ಷಣ ಹೊಂದಿರುವವರನ್ನು ಗುರುತಿಸಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದಾಗ ಇದರ ನಿಯಂತ್ರಣ ಸಾಧ್ಯ ಎಂದರು.

ಕ್ಷಯರೋಗದ ಹರಡುವಿಕೆ, ಅವುಗಳ ಸಾಮಾನ್ಯ ಲಕ್ಷಣ ಬಗ್ಗೆ ಜನರಲ್ಲಿ ಅರಿವು ಮೂಡಿಸಿದಾಗ ಜನರು ಆ ಬಗ್ಗೆ ಕಾಳಜಿ ತೋರಿ ನಿರ್ಲಕ್ಷö್ಯ ವಹಿಸದೇ ಸೂಕ್ತ ಪರೀಕ್ಷೆ ಹಾಗೂ ಚಿಕಿತ್ಸೆಗೆ ಒಳಗೊಳ್ಳುತ್ತಾರೆ. ಇದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದರು.

ಜಿಲ್ಲೆಯ ಯಾವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಟಿ.ಬಿ ಸೋಂಕಿತರು ಇದ್ದಾರೆ ಎನ್ನುವ ಬಗ್ಗೆ ನಿಖರ ಮಾಹಿತಿಗಳನ್ನು ಹೊಂದುವುದರೊAದಿಗೆ ಅಲ್ಲಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅರಿವು ಮೂಡಿಸುವುದರ ಜೊತೆಗೆ ಪರೀಕ್ಷಾ ಕಾರ್ಯಗಳನ್ನು ಹೆಚ್ಚು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಟಿ.ಬಿ ಸೋಂಕಿತರಿಗೆ ಪೌಷ್ಠಿಕಾಂಶಗಳನ್ನು ಒದಗಿಸುವ ಉದ್ಧೇಶದಿಂದ ಸರ್ಕಾರ ನಿಕ್ಷಾ ಪೋಕ್ಷಣಾ ಆಭಿಯಾನದಡಿಯಲ್ಲಿ ಪ್ರತಿ ತಿಂಗಳು 500 ರೂ. ಗಳನ್ನು ನೀಡುತ್ತಿದೆ. ಇದನ್ನು ಸೂಕ್ತ ಸಮಯದಲ್ಲಿ ರೋಗಿಗಳಿಗೆ ತಲುಪಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬೆಕು ಎಂದರು.

ಹೆಚ್.ಐ.ವಿ ಸೋಂಕು ಯಾವ ರೀತಿಯಲ್ಲಿ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂಬ ಬಗ್ಗೆ ಜನ ಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸ ಆಗಿಂದಾಗ್ಗೆ ಮಾಡುವುದರಿಂದ ಇದರ ಹರಡುವಿಕೆಯನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಹೆಚ್ಚು ಕಾರ್ಯ ಪ್ರವೃತ್ತರಾಗಬೇಕು ಎಂದರು

ಹೆಚ್.ಐ.ವಿ ಸೋಂಕಿತರಿಗೆ ಸರ್ಕಾರ ಅನೇಕ ಸಾಮಾಜಿಕ ಸವಲತ್ತುಗಳು ಹಾಗೂ ಸೌಲಭ್ಯಗಳನ್ನು ನೀಡುವ ಕಾರ್ಯಕ್ರಮ ಜಾರಿಗೆ ತಂದಿದೆ. ಈ ಬಗ್ಗೆ ಆ ಸಮುದಾಯದವರಿಗೆ ಅರಿವು ಮೂಡಿಸುವುದರ ಜೊತೆಗೆ ಅವುಗಳ ಫಲಾನುಭವಿಗಳಾಗಿಸಬೇಕು ಎಂದರು.

ಸರ್ಕಾರದಿಂದ ನೀಡುವ ನಿವೇಶನ ಹಾಗೂ ವಸತಿ ಸೌಕರ್ಯಗಳನ್ನು ಸಾರ್ವಜನಿಕರಿಗೆ ಒದಗಿಸುವ ಸಂದರ್ಭದಲ್ಲಿ, ಹೆಚ್.ಐ.ವಿ ಸೋಂಕಿತ ಕುಟುಂಬದವರಿಗೆ ವಿಶೇಷ ವರ್ಗ ಯೋಜನೆಯಡಿಯಲ್ಲಿ ಆದ್ಯತೆಯ ಮೇಲೆ ಇವರುಗಳನ್ನು ಫಲಾನುಭವಿಗಳಾಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ಏಡ್ಸ್ ಮತ್ತು ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು ಹಾಗೂ ಅರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

17 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

17 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

17 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

18 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

18 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

18 hours ago