ಉಡುಪಿ: ಕ್ಷಯ ರೋಗದ ಕ್ಷಣಗಳು ಕಂಡು ಬಂದಲ್ಲಿ ನಿರ್ಲಕ್ಷವಹಿಸದೆ ಕೂಡಲೇ ತಪಾಸಣೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯ ಬೇಕುಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣ ಘಟಕದ ವೈದ್ಯಕೀಯ ಅಧಿಕಾರಿ ಡಾ. ವನಿತಾ ಗುರುದತ್ ಹೇಳಿದರು.
ಅವರು ಇಂದು ನಗರದ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮತ್ತು ಧನ್ವಂತರಿ ನರ್ಸಿಂಗ್ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕ್ಷಯ ದಿನಾಚರಣಿ ಉದ್ಘಾಟಿಸಿ ಮಾತನಾಡಿದರು.
ಕ್ಷಯ ರೋಗವನ್ನು ಆರಂಭದಲ್ಲೇ ಗುರುತಿಸುವುದರೊಂದಿಗೆ ಸಮರ್ಪಕ ಹಾಗೂ ನಿರಂತರ ವೈದ್ಯಕೀಯ ಚಿಕಿತ್ಸೆಯನ್ನು ಪಡೆದರೆ ಈ ರೋಗದಿಂದ ಮುಕ್ತರಾಗಲು ಸಾಧ್ಯವಾಗುತ್ತದೆ ಎಂದ ಅವರು ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಈ ರೋಗಕ್ಕೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದರು.
ಸಾಮಾನ್ಯವಾಗಿ ಕ್ಷಯರೋಗದಿಂದ ಬಳಲುತ್ತಿರುವ ವ್ಯಕ್ತಿಯು ಕೆಮ್ಮಿದಾಗ, ಉಗುಳಿದಾಗ ಹೊರಬರುವ ಸೂಕ್ಮ್ಷ ದ್ರವÀಗಳ ತುಂತುರುಗಳ ಮೂಲಕ ವೈರಸ್ ರೋಗವು ಇತರ ವ್ಯಕ್ತಿಗಳ ದೇಹ ಸೇರಿದಾಗ ಅಂತಹ ವ್ಯಕ್ತಿಗಳು ಕ್ಷಯ ರೋಗಕ್ಕೆ ತುತ್ತಾಗುತ್ತಾರೆ ಎಂದರು.
ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಮಾರ್ಚ್ 24ರಂದು ವಿಶ್ವ ಕ್ಷಯ ರೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಕ್ಷಯ ರೋಗವು ಟ್ಯುಬರ್ಕ್ಯುಲೋಸಿಸ್ ಎಂಬ ಬ್ಯಾಕ್ಟೀರಿಯದಿಂದ ಹರಡುತ್ತದೆ ಎಂದರು
ಎರಡು ವಾರಗಳ ಕಾಲ ನಿರಂತರ ಕೆಮ್ಮು, ಜ್ವರ, ತೂಕ ಕಡಿಮೆಯಾಗುವುದು, ರಾತ್ರಿ ವೇಳೆ ಬೆವರುವುದು ಕ್ಷಯ ರೋಗದ ಲಕ್ಷಣಗಳಾಗಿವೆ ಎಂದ ಅವರು, ಈ ಲಕ್ಷಣ ಕಂಡ ಕೂಡಲೇ ಸಮೀಪದ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿ, ಪುರಾತನ ಕಾಲದಿಂದಲೂ ಪ್ರಚಲಿತದಲ್ಲಿರುವ ಕಾಯಿಲೆ ಎಂದರೆ ಟಿಬಿ, ಆ ಕಾಲದಲ್ಲಿ ಮನೆಯಲ್ಲೇ ಹಳ್ಳಿ ಮದ್ದನ್ನು ಮಾಡುತ್ತಿದ್ದರು ಆದರೆ ಈಗ ತಂತ್ರಜ್ಞಾನ ಬಹಳ ಮುಂದುವರೆದಿದೆ ತಕ್ಷಣದಲ್ಲೇ ಚಿಕಿತ್ಸೆ ದೊರೆಯುತ್ತದೆ. ಈ ಕುರಿತು ಜನರಿಗೆ ಅರಿವು ಮೂಡಿಸಬೇಕು, ನಮ್ಮಿಂದ ಒಂದು ಜೀವ ಉಳಿಸುವ ಪ್ರಯತ್ನ ಮಾಡಬೇಕು ಬೇರೆಯವರಿಗೆ ಸಹಾಯ ಮಾಡಿ ಬದುಕಿಗೆ ಸಾರ್ಥಕತೆ ಭಾವ ಮೂಡುವಂತೆ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಖಜಾಂಚಿ ಡಾ. ಅರವಿಂದ್ ನಾಯಕ್ ಅಮ್ಮುಂಜೆ, ಧನ್ವಂತರಿ ನರ್ಸಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ರೆಡ್ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ. ಅಶೋಕ್ ಕುಮಾರ್ ವೈ ಜಿ ಸ್ವಾಗತಿಸಿ, ಧನ್ವಂತರಿ ನರ್ಸಿಂಗ್ ಕಾಲೇಜಿನ ಉಪನ್ಯಾಸಕ ಶಿವಪ್ರಸಾದ್ ವಂದಿಸಿ, ರೆಡ್ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಕೆ. ಜಯರಾಮ್ ಆಚಾರ್ಯ ಸಾಲಿಗ್ರಾಮ ನಿರೂಪಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…