ಸುರತ್ಕಲ್,: ಮುಂಬರುವ ಲೋಕಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆ ಬಲವರ್ಧನೆಯ ಹಿನ್ನಲೆಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಮಾ ಕಾರ್ಯದರ್ಶಿ ಹಾಗೂ ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ ಕೆಪಿಸಿಸಿ ವತಿಯಿಂದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ದಿನೇಶ್ ಗೂಂಡೂರಾವ್ ಅವರು ಪ್ರತಿಭಾ ಕುಳಾಯಿ ಅವರನ್ನು ಉಡುಪಿ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ಕೆಪಿಸಿಸಿ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಂತೆಯೂ, ಹೆಚ್ಚಿನ ಸಮಯವನ್ನು ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ ಮೀಸಲಿಟ್ಟು ಕೆಲಸ ಮಾಡುವಂತೆ ಆದೇಶಿಸಲಾಗಿದೆ. ಉಡುಪಿ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರ ಸಹಕಾರ ಪಡೆದು ಪಕ್ಷದ ಸಂಘಟನೆ ಹಾಗೂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲು ಶಕ್ತಿ ಮೀರಿ ದುಡಿಯುವಂತೆ ಪ್ರತಿಭಾ ಕುಳಾಯಿ ಅವರಿಗೆ ನೀಡಿದ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…