ಉಡುಪಿ: ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಆರೋಪ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಕಾಂಗ್ರೆಸ್‌ನ ಮೆಂಟಾಲಿಟಿ ಪಾಕಿಸ್ತಾನದ ಪರ ಇದೆ ಎಂಬುದು ಇದರಿಂದ ಗೊತ್ತಾಗುತ್ತದೆ. ಸಿದ್ದರಾಮಯ್ಯನವರಿಗೆ ಸಂವಿಧಾನದ ಬಗ್ಗೆ ನಂಬಿಕೆ ಇದ್ದರೆ ತಕ್ಷಣ ಪಾಕಿಸ್ತಾನ ಜಿಂದಾಬಾದ್ ಅಂದವರನ್ನು ಅರೆಸ್ಟ್ ಮಾಡಿ ಎಂದು ಒತ್ತಾಯ ಮಾಡಿದರು.
ಕ್ಷೇತ್ರದಲ್ಲಿ ನಾನು ಸಾಕಷ್ಟು ಅಭಿವೃದ್ದಿ ಕಾರ್ಯ ಮಾಡಿದ್ದು ಪ್ರಚಾರದಲ್ಲಿ ಮಾತ್ರ ಹಿಂದೆ ಉಳಿದಿದ್ದೇನೆ. ಆದ್ರೆ ಹಣ ಇದ್ದವರು ಏನು ಬೇಕಾದ್ರೂ ಮಾಡಬಹುದು ಅಂದು ಕೊಂಡು ನನ್ನ ವಿರುದ್ಧ ಪೂರ್ವನಿಯೋಜಿತವಾಗಿ ಪತ್ರ ಅಭಿಯಾನ ನಡೆಸಿದ್ದಾರೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಹಿಂದೆ ಬಹಳ ದೊಡ್ಡ ಷಡ್ಯಂತ್ರದ ಗುಮಾನಿ ಇದೆ ಎಂದರು. ಭಾರತವನ್ನು ವಿಭಜನೆ ಮಾಡುವ ಮಾತನ್ನು ಕಾಂಗ್ರೆಸ್ ಆಡುತ್ತಿದೆ. ಯಾವುದೇ ಸರ್ಕಾರಕ್ಕೆ ಅಧಿಕಾರ ಶಾಶ್ವತವಲ್ಲ. ದೇಶದಲ್ಲಿ ಗೊಂದಲ ನಿರ್ಮಾಣ ಮಾಡುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಪ್ರಕರಣವನ್ನು ಎನ್ಐಎ ತನಿಖೆ ಮಾಡಿದರೆ ಸತ್ಯಾಸತ್ಯತೆ ಹೊರಬರಲಿದೆ. ಇದರ ಹಿಂದಿರುವ ಶಕ್ತಿಯನ್ನು ಪೊಲೀಸರು ಪತ್ತೆ ಮಾಡಬೇಕು. ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆರೋಪಿಯನ್ನ ಬಂಧಿಸುವಂತೆ ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು
ಈ ಬಾರಿ ಎಲ್ಲಾ ಕಡೆಯಲ್ಲೂ ಕಮಲದ ಚಿಹ್ನೆ ಹಾಗೂ ಪ್ರದಾನಿ ಮೋದಿಯೇ ಕ್ಯಾಂಡಿಡೇಟ್. ಹಾಗಾಗಿ ಇಲ್ಲಿ ಅಭ್ಯರ್ಥಿ ಯಾರು ಅನ್ನೋದು ಮುಖ್ಯವಲ್ಲ. ಹಣ ಇದ್ದವರೇ ಪ್ರಧಾನಿ ಆಗಬೇಕು, ಸಂಸದ ಆಗಬೇಕು ಅಂತಿದ್ದರೆ, ಟಾಟಾ ಬಿರ್ಲಾ ಅದಾನಿ ಅಂಬಾನಿಯಂತವರೇ ಆಗ್ತಾ ಇದ್ರು ಒಬ್ಬ ಚಾಯ್‌ವಾಲ ಪ್ರಧಾನಿ ಆಗ್ತಾ ಇರಲಿಲ್ಲಿ ಎಂದು ಹೇಳಿದ್ದಾರೆ.
ನನ್ನಂಥ ಸಾಮಾನ್ಯ ಕುಟುಂಬದಿಂದ ಬಂದವರು ದುಡ್ಡು ಇಲ್ಲದವರು ಸಂಸದರಾಗಿದ್ದಾರೆ ಅನ್ನೊದೆ ಬಿಜೆಪಿಯ ಹೆಗ್ಗಳಿಕೆ ಎಂದಿದ್ದಾರೆ. ಇನ್ನು ಇದೇ ವೇಳೆ ಚಿಕ್ಕಮಗಳೂರಿನಲ್ಲಿ ನಡೆದ ಪತ್ರ ಚಳುವಳಿಯನ್ನು ಟೀಕಿಸಿದ ಅವರು ಒಬ್ಬರೇ ಹತ್ತು ಇಪ್ಪತ್ತು ಪತ್ರ ಬರೆದು ಹಾಕಿದ್ದಾರೆ ಅಂದ್ರೆ ಅದರ ಹಿಂದೆ ಇರುವ ಉದ್ದೇಶ ಏನು ಅನ್ನೋದು ಸ್ಪಷ್ಟ ಎಂದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…